ಕೋಟ್ಪಾ ದಾಳಿ; 42 ಪ್ರಕರಣ-5250 ರೂ. ದಂಡ
Team Udayavani, Aug 20, 2019, 11:02 AM IST
ದಾವಣಗೆರೆ: ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆ ಎಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಸೋಮವಾರ ನಗರದ ವಿವಿಧೆಡೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ತಂಬಾಕು ದಾಳಿ ನಡೆಸಿದೆ.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 23 ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 17 ಪ್ರಕರಣ, ಸೆಕ್ಷನ್ 6ಬಿ ಅಡಿಯಲ್ಲಿ 2 ಪ್ರಕರಣ ಸೇರಿ ಒಟ್ಟು 42 ಪ್ರಕರಣಗಳನ್ನು ದಾಖಲಿಸಿ, 5250 ರೂ.ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.
ತಂಡವು ನಗರದ ಗಾಂಧಿ ವೃತ್ತದಿಂದ ಹದಡಿ ರಸ್ತೆಯ ಎನ್‌ಎಚ್-4 ಹಾಗೂ ಸುತ್ತಮುತ್ತಲಿನ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಪಾನ್‌ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದೆ. ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರು ಧೂಮ್ರಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದೆ.
ಕೋಟ್ಪಾ ಕಾಯ್ದೆ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರುವುದು ಹಾಗೂ ಮಕ್ಕಳಿಂದ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದು ಹಾಗೂ ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡದಿರುವುದು, ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‌ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ನಿಷೇಧ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.
ತನಿಖಾ ತಂಡದಲ್ಲಿ ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಮಹಾಂತೇಶ್ ಉಳ್ಳಾಗಡ್ಡಿ, ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ಶಿಕ್ಷಣ ಇಲಾಖೆಯ ಟಿಪಿಇಟಿ ವೀರಪ್ಪ ಎಚ್, ಸಮಾಜ ಕಾರ್ಯಕರ್ತ ದೇವರಾಜ ಪಿ., ಪಾಲಿಕೆ ಆರೋಗ್ಯ ನಿರೀಕ್ಷಕಿ ಪ್ರತಿಭಾ, ಬೆಂಗಳೂರಿನ ಮಾಯಾ ಸಂಸ್ಥೆಯ ಜೀತನ ಚಂದ್ರ, ಹನುಮಂತಪ್ಪ ಟಿ. ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.