ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಭಾರೀ ದ್ರೋಹ
Team Udayavani, Jun 22, 2021, 9:38 AM IST
ದಾವಣಗೆರೆ: ಕೋವಿಡ್ ಸಾವಿಗೆ ಪರಿಹಾರವಿಲ್ಲವೆಂದು ತಿಳಿಸುವ ಮೂಲಕ ಕೇಂದ್ರ ಸರ್ಕಾರ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ದ್ರೋಹ ಬಗೆದಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೋವಿಡ್ -19 ಸಾಂಕ್ರಾಮಿಕವನ್ನು ರಾಷ್ಟ್ರೀಯ ವಿಪತ್ತು ಎಂದು ಈ ಹಿಂದೆ ಕೇಂದ್ರ ಸರ್ಕಾರವೇ ಘೋಷಿಸಿದೆ. ಹಾಗಾಗಿ ಕೋವಿಡ್‌ನಿಂದ ಮೃತಪಟ್ಟ ವರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ. ಪರಿಹಾರ ನೀಡಲು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಸರ್ಕಾರ, ಪರಿಹಾರ ನೀಡಲಾಗುವುದಿಲ್ಲ ಎಂದು ಸುಪ್ರಿಂ ಕೋರ್ಟ್‌ಗೆ ಪ್ರತಿಕ್ರಿಯೆ ನೀಡಿರುವುದು ಖಂಡನಾರ್ಹ ಎಂದಿದ್ದಾರೆ.
ಭಾರತ ಸರ್ಕಾರದ ಅಂಕಿ- ಅಂಶಗಳ ಪ್ರಕಾರ ಕೋವಿಡ್‌ನಿಂದ ಮೃತಪಟ್ಟ ವರ ಸಂಖ್ಯೆ 3,88,164 ಇದೆ. ತಲಾ ನಾಲ್ಕು ಲಕ್ಷ ರೂ.ದಂತೆ ಪರಿಹಾರ ನೀಡಿದರೆ ಹದಿನೈದು ಸಾವಿರದ ಐದನೂರ ಇಪ್ಪತ್ತಾರು ಕೋಟಿ ಐವತ್ತಾರು ಲಕ್ಷ ರೂ. ಆಗುತ್ತದೆ. ಪ್ರಧಾನಿ ತಮ್ಮ ಹೊಸ ಮನೆ ನಿರ್ಮಾಣಕ್ಕಾಗಿ ಹದಿಮೂರು ಸಾವಿರದ ನಾಲ್ಕುನೂರು ಐವತ್ತು ಕೋಟಿ ಮೊತ್ತ ನಿಗದಿಪಡಿಸಿದ್ದಾರೆ. ತಮ್ಮ ಮನೆ ನಿರ್ಮಾಣವನ್ನು ರದ್ದುಪಡಿಸಿದರೆ ಇದೇ ಹಣದಲ್ಲಿ ಮೃತರ ಕುಟುಂಬದವರೆಲ್ಲರಿಗೂ ನಾಲ್ಕು ಲಕ್ಷದಂತೆ ಪರಿಹಾರ ನೀಡಬಹುದು. ಪ್ರಧಾನಿಯವರು ಕೂಡಲೇ ತಮ್ಮ ಮನೆ ನಿರ್ಮಾಣದ ಯೋಜನೆ ಬಿಟ್ಟು ಮೃತ ಕುಟುಂಬಗಳ ನೆರವಿಗೆ ಬರಲಿ ಎಂದು ಅವರು ಒತ್ತಾಯಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆಯ ರೂಪದಲ್ಲಿ 2.94 ಲಕ್ಷ ಕೋಟಿ ರೂಪಾಯಿ ಆದಾಯ ಕೇವಲ 10 ತಿಂಗಳಲ್ಲಿ ಬಂದಿದೆ. ಹೀಗಿರುವಾಗ ಮೃತರ ಕುಟುಂಬಗಳಿಗೆ 15 ಸಾವಿರ ಕೋಟಿ ರೂ. ನೀಡುವ ವಿಚಾರ ದೊಡ್ಡದೇನಲ್ಲ. ಅದಕ್ಕಾಗಿ ಸರ್ಕಾರ ದೊಡ್ಡ ಮನಸ್ಸು ಮಾಡಬೇಕು. -ಡಿ. ಬಸವರಾಜ್, ಕೆಪಿಸಿಸಿ ವಕ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.