ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲು ಸಿಕ್ಕೇ ಸಿಗುತ್ತೆ
Team Udayavani, Jan 20, 2021, 6:21 PM IST
ದಾವಣಗೆರೆ: ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ದೊರೆಯುವುದು ಕೂಡ ಅಷ್ಟೇ ಸತ್ಯ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ನಗರದ ಬೀರಲಿಂಗೇಶ್ವರ ಮೈದಾನದಲ್ಲಿ ಮಂಗಳವಾರ ರಾತ್ರಿ ನಡೆದ ಎಸ್‌ಟಿ ಮೀಸಲಾತಿ ಹೋರಾಟ ಸಭೆಯನ್ನುದ್ದೇಶಿಸಿ ಶ್ರೀಗಳು ಮಾತನಾಡಿದರು. ಹಾಲುಮತವೆಂಬ ಜೇನುಗೂಡಿಗೆ ಕೆಲವರು ಕಲ್ಲು ಹೊಡೆದಿದ್ದಾರೆ. ಆದರೆ ನಾವೆಲ್ಲರೂ ಒಂದಾಗುತ್ತೇವೆ. ಮೀಸಲಾತಿ ಎಂಬ ಜೇನುತುಪ್ಪ ಸವಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಾದಯಾತ್ರೆ ಯಾರ ವಿರುದ್ಧವೂ ಅಲ್ಲ. ಇದರಿಂದ ನಮಗೆ ಲಾಭ-ನಷ್ಟ ಇಲ್ಲ. ಒಂದೆರಡು ಕೆಜಿ ದೇಹದ ತೂಕ ಕಡಿಮೆಯಾಗಬಹುದು ಹಾಗಾಗಿ ಯಾರೂ ಗೊಂದಲ ಸೃಷ್ಟಿಸಬಾರದು. ಗೊಂದಲ ಸೃಷ್ಟಿಯಾದಲ್ಲಿ ನಿಮ್ಮ ಕಾಲ ಮೇಲೆ ಕಲ್ಲು ಬೀಳುತ್ತದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ:ಮತದಾರರ ಅಂತಿಮ ಪಟ್ಟಿ ಪ್ರಕಟ: ಡಿಸಿ ಕವಿತಾ
ಈ ಹೋರಾಟದಿಂದ ಹಿಂದೆ ಸರಿಯಬೇಡಿ. ನಿಮ್ಮನ್ನು ಸಂಸದರನ್ನಾಗಿ ಮಾಡುತ್ತೇವೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಾವು ಕಿಂಗ್‌ಮೇಕರ್ ಹೊರತು ಕಿಂಗ್‌ಅಲ್ಲ. ಅಲ್ಲದೆ ಬೇರೆಯವರ ಕಾಲಿಗೆ ಬೀಳುವ ಅನಿವಾರ್ಯತೆಯೂ ನಮಗಿಲ್ಲ ಎಂದರು. ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹೋರಾಟಕ್ಕೂ ಪೂರ್ವದಲ್ಲಿ ಇಬ್ಬರು ಶ್ರೀಗಳು ಸಿದ್ದರಾಮಯ್ಯ ಮನೆಗೆ ಹೋಗಿ ಆಹ್ವಾನ ನೀಡಿದ್ದರು.
ಆದಾಗ್ಯೂ ತಮ್ಮನ್ನು ಯಾರೂ ಕರೆದಿಲ್ಲ ಎಂದು ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಕೈ ಮುಗಿದು ಕೇಳುವೆ. ದಯಮಾಡಿ ಗೊಂದಲದ ಹೇಳಿಕೆ ನೀಡಿ ಸಮಾಜಕ್ಕೆ ಅನ್ಯಾಯ ಮಾಡಬೇಡಿ. ಈ ಪಾದಯಾತ್ರೆಗೆ ಆರ್‌ಎಸ್‌ಎಸ್ ಹಣ ನೀಡಿದೆ ಎಂಬ ಸಿದ್ದರಾಮಯ್ಯನವರ ಆರೋಪದಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು. ಸಮಾವೇಶದಲ್ಲಿ ಈಶ್ವರಾನಂದಪುರಿ ಶ್ರೀ, ರಾಜನಹಳ್ಳಿ ಶಿವಕುಮಾರ್, ಜಿ.ಸಿ.ನಿಂಗಪ್ಪ, ಜೆ.ಎನ್. ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಆರ್. ಜಯಶೀಲ, ತುರ್ಚಗಟ್ಟದ ಎಸ್. ಬಸವರಾಜಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.