ತಂತ್ರಜ್ಞಾನದಿಂದ ಅವಕಾಶಗಳ ಕೊರತೆ
Team Udayavani, Feb 4, 2019, 6:09 AM IST
ದಾವಣಗೆರೆ: ಪ್ರಸ್ತುತ ಡಿಜಿಟಲ್ ತಂತ್ರಜ್ಞಾನದ ವೇಗದ ಬೆಳವಣಿಗೆಯಿಂದಾಗಿ ನಾಮಫಲಕ ಕಲಾವಿದರು ಸಾಕಷ್ಟು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದಿಂದ ಹಮ್ಮಿಕೊಂಡಿದ್ದ ಕಲಾವಿದರ ಸಮ್ಮಿಲನ ಹಾಗೂ ಜಿಲ್ಲಾ ಶಾಖೆ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.
ಕಲೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ ಕಲಾವಿದರು. ಆದರಿಂದಿನ ಡಿಜಿಟಲ್ ತಂತ್ರಜ್ಞಾನ ಬಂದ ಮೇಲೆ ಕಲಾವಿದರಿಗೆ ಸಾಕಷ್ಟು ಅವಕಾಶಗಳು ಕಡಿಮೆ ಆಗುತ್ತಿವೆ. ಕೈ ಬರಹದ ಕಲೆಗೆ ನಿಜಕ್ಕೂ ಬೆಲೆಕಟ್ಟಲು ಸಾಧ್ಯವಿಲ್ಲ. ಹಾಗಾಗಿ ಅಗತ್ಯ ಸೌಲಭ್ಯ ನೀಡಿ ಕಲಾವಿದರನ್ನು ಪೋಷಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.
ಸ್ವಾತಂತ್ರ್ಯ ಹೋರಾಟಗಾರರು, ಬಸವಾದಿ ಶರಣರು, ನಾಡಿನ ದಾರ್ಶನಿಕರನ್ನು ಚಿತ್ರಕಲೆ ಮೂಲಕ ಪರಿಚಯಿಸಿದ ಕೀರ್ತಿ ಕಲಾವಿದರಿಗೆ ಸಲ್ಲುತ್ತದೆ. ಯಾವುದೇ ರಸ್ತೆ, ಸಂಚಾರಿ ನಿಯಮ ಫಲಕ, ರೂಟ್ ಮ್ಯಾಪ್, ಅಂಗಡಿ, ವ್ಯಕ್ತಿ ಸೇರಿದಂತೆ ಎಲ್ಲಾ ಕ್ಷೇತ್ರದ ಫಲಕಗಳನ್ನು ಬಣ್ಣಗಳಿಂದ ಸುಂದರವಾಗಿ ಕಲಾವಿದರು ಚಿತ್ರಿಸುತ್ತಾರೆ. ಆದರೆ, ಜಗತ್ತನ್ನೇ ಸುಂದರ ಮಾಡಬಲ್ಲ ಶಕ್ತಿ ಹೊಂದಿರುವ ಕಲಾವಿದರ ಬದುಕು ಬಣ್ಣಗಳಿಂದ ಬೆಳಗಾಗಿಲ್ಲ. ಈ ಹಿನ್ನೆಲೆಯಲ್ಲಿ ತಮಗೆ ಅಗತ್ಯವಿರುವ ಸೌಲಭ್ಯ ಪಡೆದುಕೊಳ್ಳಲು ನಾಮಫಲಕ ಕಲಾವಿದರು ಮೊದಲು ಸಂಘಟಿತರಾಗಬೇಕು ಎಂದು ಸಲಹೆ ನೀಡಿದರು.
ಕಲೆಗೆ ಅದ್ಭುತ ಶಕ್ತಿ ಇದೆ. ಯಾರ ಬರವಣಿಗೆಯ ಅಕ್ಷರಗಳು ಸುಂದರಗೊಳ್ಳುತ್ತಿಲ್ಲವೋ ಅಂತಹವರು ಚಿತ್ರಕಲೆ ರೂಢಿಸಿಕೊಳ್ಳಬೇಕು. ಆಗ ಅಕ್ಷರಗಳು ಕೂಡ ಸುಂದರವಾಗುತ್ತವೆ. ಹಾಗಾಗಿ ಪೋಷಕರು ಮಕ್ಕಳಿಗೆ ಬರವಣಿಗೆ, ಓದಿನ ಜೊತೆಗೆ ಚಿತ್ರಕಲೆಗೂ ಪ್ರೋತ್ಸಾಹಿಸಿ ಎಂದರು.
ಜಿಲ್ಲಾ ಘಟಕದ ಉದ್ಘಾಟನೆ ನೆರವೇರಿಸಿ ದೃಶ್ಯ ಕಲಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ರವೀಂದ್ರ ಎಸ್. ಕಮ್ಮಾರ್ ಮಾತನಾಡಿ, ಸಾಮಾಜಿಕ, ಧಾರ್ಮಿಕ, ರಾಜಕೀಯವಾಗಿ ಎಲ್ಲಾ ವ್ಯಾಪಾರ ಕ್ಷೇತ್ರದಲ್ಲೂ ಕೂಡ ಇಂದು ಜಾಹೀರಾತು ನಾಮಫಲಕಗಳು ಅತ್ಯಗತ್ಯ. ನಾಮಫಲಕಗಳ ಪ್ರಚಾರವಿಲ್ಲದೇ, ಯಾವುದೇ ಕ್ಷೇತ್ರವೂ ಪರಿಚಯವಾಗಲು ಸಾಧ್ಯವಿಲ್ಲ. ಶಾಸನ, ಗೋಡೆ ಬರಹಗಳಿಂದ ಹಿಡಿದು ಇಂದು ಥ್ರೀಡಿ ವರೆಗೆ ಕಲಾ ಪ್ರಕಾರ ಬೆಳೆದು ನಿಂತಿದೆ. ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವ ಅಗತ್ಯತೆ ಇದೆ. ಹಾಗಾಗಿ ಕಲಾವಿದರು ಸಂಘಟಿತರಾಗುವ ಮೂಲಕ ಹೊರೆಯಾಗಿರುವ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಬುದ್ಧರಾಗಿ ಬೆಳೆಯಲು ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಸಂಘದ ಉಪಾಧ್ಯಕ್ಷರಾದ ಹರೀಶ್, ಎನ್. ಧರ್ಮಲಿಂಗಂ, ಹಿರಿಯ ಕಲಾವಿದ ಎಂಎಸ್‌ಬಿ. ರಾಜು, ಬ್ರಷ್‌ಮನ್ ನಾಗರಾಜ್ ಅವರನ್ನು ಸನ್ಮಾನಿಸಲಾಯಿತು. ಬ್ರಷ್‌ಮನ್ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಹೋಟೆಲ್ ಉದ್ಯಮಿ ಅಜಯ್‌ಕುಮಾರ್, ಸಂಘದ ರಾಜ್ಯಾಧ್ಯಕ್ಷ ಬಿ.ಕೆ. ಗುರುರಾಜ್, ಕಾರ್ಯಾಧ್ಯಕ್ಷ ಎನ್. ಕುಮಾರ್, ಎನ್. ರಂಗನಾಥ್ ಬಾಬು, ನೆನಪು ಲೋಕೇಶ್, ಜಿಲ್ಲಾಧ್ಯಕ್ಷ ಜಿ. ರಮೇಶ, ಹರೀಶ್, ಎನ್. ಧರ್ಮಲಿಂಗಂ, ಇಬ್ರಾಹಿಂ ಷರೀಫ್ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪತ್ರಕರ್ತರ ಕೂಟದ ಆವರಣದಿಂದ ಕುವೆಂಪು ಕನ್ನಡ ಭವನದವರೆಗೆ ಮೆರವಣಿಗೆ ನಡೆಯಿತು. ಕಲಾವಿದರಿಗೆ ಸರ್ಕಾರ ಸೌಲಭ್ಯ ಕಲ್ಪಿಸಲಿ
ಇಂದು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುವ, ಯಾವುದೇ ಸ್ಥಳದ ಬಗ್ಗೆ ಪರಿಚಯ ಮಾಡಿಕೊಳ್ಳುವ ಅವಕಾಶ ಕಲಾವಿದರಿಂದ ದೊರಕಿದೆ. ಕಲಾವಿದರ ಪರಿಶ್ರಮ ನಿಜಕ್ಕೂ ಅಪಾರವಾದುದು. ಅಂತಹ ಕಲಾವಿದರಿಗೆ ಸರ್ಕಾರ, ಇಲಾಖೆಗಳಿಂದ ಹೆಚ್ಚಿನ ಸೌಲಭ್ಯ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊÛಬೇಕು. ಜೊತೆಗೆ ಸಮಾಜದ ಏಳ್ಗೆಗಾಗಿ ಶ್ರಮಿಸಿರುವ ಹಿರಿಯ ಕಲಾವಿದರನ್ನು ಗುರುತಿಸಿ ಸನ್ಮಾನಿಸುವ ಕೆಲಸವನ್ನು ಸರ್ಕಾರ, ಸ್ಥಳೀಯ ಸಂಸ್ಥೆಗಳು ಮಾಡಬೇಕು ಎಂದು ಹೋಟೆಲ್ ಉದ್ಯಮಿ ಅಜಯ್‌ಕುಮಾರ್ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.