ಕೆರೆ ರಕ್ಷ ಣೆ ಪ್ರತಿಯೊಬ್ಬರ ಹೊಣೆ: ಶಾಸಕ ರಾಮಪ್ಪ

Team Udayavani, Mar 21, 2022, 10:29 AM IST

mla

ಮಲೇಬೆನ್ನೂರು: ಕೆರೆಯಲ್ಲಿ ನೀರು ತುಂಬುವುದರಿಂದ ಆ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದು ಹರಿಹರ ಶಾಸಕ ಎಸ್‌. ರಾಮಪ್ಪ ಹೇಳಿದರು. ಸಮೀಪದ ಜಿ.ಟಿ. ಕಟ್ಟೆ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ “ನಮ್ಮೂರು-ನಮ್ಮ ಕೆರೆ’ ಯೋಜನೆಯಡಿ ಪುನಃ ಶ್ಚೇತನಗೊಳಿಸಲಾಗಿರುವ ಕೆರೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಗ್ರಾಮಕ್ಕೂ ಕೆರೆಯ ಅವಶ್ಯಕತೆಯಿದೆ. ಧರ್ಮಸ್ಥಳ ಸಂಘದವರು ಕೆರೆಯ ಹೂಳು ತೆಗೆದು ಸ್ವಚ್ಛ ಗೊಳಿಸಿಕೊಟ್ಟಿದ್ದಾರೆ. ಗ್ರಾಮಸ್ಥರು ಕೆರೆ ಒತ್ತುವರಿ ಮಾಡಬಾರದು. ಅಲ್ಲದೆ ಕೆರೆಯ ಸುತ್ತ ಗಲೀಜು ಮಾಡದೆ ಸ್ವಚ್ಛ ವಾಗಿಟ್ಟುಕೊಳ್ಳಬೇಕು. ಕೆರೆ ಅಭಿವೃದ್ಧಿ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಕರ್ತವ್ಯ ಎಂದರು.

ಡಾ| ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದ ಮತ್ತು ಆರ್ಥಿಕ ನೆರವಿನಿಂದ ಧರ್ಮಸ್ಥಳ ಸಂಘ ಬಡವರಿಗೆ ಆಶಾಕಿರಣವಾಗಿದೆ. ಸಂಘದಿಂದ ತೆಗೆದುಕೊಳ್ಳುವ ಸಾಲವನ್ನು ಸದುಪಯೋಗಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಕೊಮಾರನಹಳ್ಳಿ ಕೆರೆ ಅಭಿವೃದ್ಧಿಗೆ ಮಂಜೂರಾಗಿದ್ದ 17 ಕೋಟಿ ರೂ. ಅನುದಾನವನ್ನು ಕಾರಣಾಂತರದಿಂದ ತಡೆ ಹಿಡಿಯಲಾಗಿದೆ. ಕೊಳದ ಮಲ್ಲೇಶ್ವರ ದೇವಸ್ಥಾನದ ರಸ್ತೆ 40 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಪಾಳ್ಯದಿಂದ ಮೂಗಿನಗೊಂದಿ ರಸ್ತೆ ಸುಧಾರಣೆಗೆ 10 ಕೋಟಿ ರೂ. ಅನುದಾನ ಬಂದಿದ್ದು ಆದಷ್ಟು ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಜಯಂತ್‌ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಕಲ ಜೀವ ಸಂಕುಲಕ್ಕೆ ಜೀವ ಜಲ ಒದಗಿಸುವ ಉದ್ದೇಶದಿಂದ ಪುನಶ್ಚೇತನಗೊಳಿಸಿದ 346ನೇ ಹಾಗೂ ತಾಲೂಕಿನಲ್ಲಿ 15ನೇ ಕೆರೆಯಾಗಿರುವ ಶ್ರೀ ಆಂಜನೇಯ ಕೆರೆಯನ್ನು ಹಸ್ತಾಂತರಿಸಲು ನಮಗೆ ಸಂತಸವಾಗುತ್ತಿದೆ. ಇನ್ನೂ 10ರಿಂದ 15 ಕೆರೆ ಪುನಶ್ಚೇತನಗೊಳಿಸುವ ಗುರಿ ಹೊಂದಿದ್ದೇವೆ. ಈಗಾಗಲೇ ಹೊನ್ನಾಳಿ, ಚನ್ನಗಿರಿ ತಾಲೂಕಿನಲ್ಲೂ ಕೆರೆ ಅಭಿವೃದ್ಧಿ ಪಡಿಸಿದ್ದೇವೆ ಎಂದರು.

ಕೆರೆ ಅಭಿವೃದ್ಧಿಗೊಳಿಸಿಕೊಟ್ಟಿದ್ದೇವೆ, ಕಾಪಾಡಿಕೊಳ್ಳುವ ಜವಾಬ್ದಾರಿ ಗ್ರಾಮಸ್ಥರ ಮೇಲಿದೆ. ಕೆರೆಯ ಸುತ್ತಮುತ್ತ ಸಗಣಿ ಗೊಬ್ಬರ ಹಾಕಬೇಡಿ. ಗಲೀಜು ಮಾಡಬೇಡಿ. ಕೆರೆಯ ಸುತ್ತ ಗಿಡ-ಮರಗಿಡಗಳನ್ನು ಬೆಳಸಬೇಕು. ಪ್ರತಿಯೊಬ್ಬರೂ ನನ್ನ ಕೆರೆ ಎಂಬ ಭಾವನೆ ತಾಳಿದಲ್ಲಿ ನಮ್ಮ ಶ್ರಮ ಸಾರ್ಥಕವಾಗಲಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಒ.ಬಿ. ನಿಂಗನಗೌಡ ಮಾತನಾಡಿ, ಸರ್ಕಾರದಿಂದ ಬರುವ ಅನುದಾನವನ್ನುಗ್ರಾಮದ ಅಭಿವೃದ್ಧಿ ಹಾಗೂ ಕೆರೆಯ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದರು. ಮಲೇಬೆನ್ನೂರು ವಲಯದ ಯೋಜನಾಧಿಕಾರಿ ವಸಂತ ದೇವಾಡಿಗ, ಜಿ.ಟಿ. ಕಟ್ಟೆ ಕೆರೆ ಸಮಿತಿ ಅಧ್ಯಕ್ಷ ಜಿ.ಪಿ. ನಾಗರಾಜಪ್ಪ, ಟಿ. ರಾಮಪ್ಪ, ಸಿದ್ದಪ್ಪ, ಬೀರಪ್ಪ, ದೇವಪ್ಪ, ಟಿ. ರಾಮಪ್ಪ, ಪಿಡಿಒ ನಾಗರಾಜ ಸಾರಥಿ, ವಲಯ ಮೇಲ್ವಿಚಾರಕಿ ಶಾರದಾ, ಸಂತೋಷ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.