ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Team Udayavani, Sep 16, 2020, 6:52 PM IST

ಮೂಲ ಸೌಕರ್ಯ ಅಭಿವೃದ್ಧಿ  ಕಾಮಗಾರಿಗೆ ಚಾಲನೆ

ದಾವಣಗೆರೆ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಎಸ್‌.ಎಸ್‌.ಎಂ. ನಗರ, ಬಿಡಿ ಲೇಔಟ್‌, ಪಾರ್ವತಮ್ಮ ನಗರಗಳಲ್ಲಿ ಕೈಗೊಳ್ಳುತ್ತಿರುವ 10 ಕೋಟಿ ರೂ. ವೆಚ್ಚದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್‌ಸಿಟಿ ಯೋಜನೆಯಡಿ ಸಿಸಿ ಚರಂಡಿ, ಕವರಿಂಗ್‌ ಸ್ಲಾಬ್‌ ಹಾಗೂ ಸಿಸಿ ರಸ್ತೆ ನಿರ್ಮಾಣ ಸೇರಿಂದಂತೆ ಮೂಲ ಸೌಕರ್ಯ ಅಭಿವೃದ್ಧಿಗಳ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಆದಷ್ಟು ಬೇಗ ಜನರಿಗೆ ಒದಗಿಸಬೇಕು. ಸಿಜಿ ಆಸ್ಪತ್ರೆಯಲ್ಲಿ 30 ವೆಂಟಿಲೇಟರ್‌ ಗಳಿವೆ. ಆದರೆ ಆಪರೇಟರ್‌ ಮಾಡುವವರಿಲ್ಲ. ಕೂಡಲೇ ನೇಮಕ ಮಾಡಿಕೊಂಡು ಸಾರ್ವಜನಿಕರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಮಹಾನಗರಪಾಲಿಕೆ ಮೇಯರ್‌ ಬಿ.ಜಿ. ಅಜಯಕುಮಾರ್‌ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆಯಡಿ ಕೆಲಸಗಳು ವಿಳಂಬವಾಗುತ್ತಿವೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟುಸಭೆ ಮಾಡಲಾಗಿದೆ. ಆದಷ್ಟು ಬೇಗ ಕೆಲಸ ಮಾಡಲು ಸೂಚನೆ ನೀಡಲಾಗಿದ್ದುಸದ್ಯದಲ್ಲಿಯೇ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಈಗಾಗಲೇ ಶೇ. 60ರಷ್ಟು ಕೆಲಸವಾಗಿದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್‌.ಟಿ. ವಿರೇಶ್‌, ಮುಖಂಡ ಅಮಾನುಲ್ಲಾ ಖಾನ್‌ ಮಾತನಾಡಿದರು.ಉಪ ಮಹಾಪೌರರಾದ ಸೌಮ್ಯ ನರೇಂದ್ರ,ಸದಸ್ಯರಾದ ಎ.ಬಿ. ರಹೀಂ, ಚಮನ್‌ಸಾಬ್‌, ಜಾಕೀರ್‌ ಇನ್ನಿತರರು ಇದ್ದರು.

ಶಾಸಕರ ಅಸಮಾಧಾನ :  ಆಡಳಿತ ನಡೆಸುವವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಆದರೆ, ಇತ್ತೀಚಿಗೆ ಸರ್ಕಾರದಿಂದ 125ಕೋಟಿ ರೂ. ಅನುದಾನ ಬಂದಾಗಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎಂಬಂತೆ ವರ್ತಿಸಿದರು. ಈ ಬಗ್ಗೆ ಸಚಿವರ ಗಮನಕ್ಕೂ ತರಲಾಯಿತು.ಅವರು ಸಹ ಸ್ಪಂದಿಸಲಿಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.