ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ಯತ್ನ ಸರಿಯಲ್ಲ
Team Udayavani, Jun 11, 2020, 8:08 AM IST
ಹರಿಹರ: ಲಂಬಾಣಿ, ಬೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಕೈಬಿಡಲು ವ್ಯವಸ್ಥಿತ ಸಂಚು ನಡೆಯುತ್ತಿದ್ದು, ಇದಕ್ಕೆ ಮಣಿಯಬಾರದೆಂದು ಆಗ್ರಹಿಸಿ ಈ ಸಮುದಾಯಗಳ ಜನರು ಬುಧವಾರ ನಗರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಹಾಕುವ ಮೂಲಕ ಪತ್ರ ಚಳವಳಿ ನಡೆಸಿದರು.
ನಗರದ ಮುಖ್ಯ ಅಂಚೆ ಕಚೇರಿ ಮುಂದೆ ಕರ್ನಾಟಕ ತಾಂಡಾ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಶಿಕ್ಷಕ ರೇವಣ್ಣ ನಾಯ್ಕ ಮಾತನಾಡಿ, ಲಂಬಾಣಿ, ಬೋವಿ, ಕೊರಚ, ಕೊರಮ ಜಾತಿಗಳು ಅತಿ ಹಿಂದುಳಿದಿವೆ. ಕೆಲವು ಪಟ್ಟಭದ್ರರು ಸದರಿ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈಬಿಡಬೇಕೆಂದು ಸಂಚು ನಡೆಸಿದ್ದಾರೆ.ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡೆಯಾಗಿದೆ. ಇಂತಹ ಸಂಚಿಗೆ ಒಳಗಾಗಬಾರದು.ಈ ಜಾತಿಗಳನ್ನು ಯಥಾರೀತಿ ಎಸ್ಸಿ ಪಟ್ಟಿಯಲ್ಲಿ ಮುಂದುವರೆಸಬೇಕೆಂದು ಆಗ್ರಹಿಸಿದರು.
ತಾಂಡಾ ರಕ್ಷಣಾ ವೇದಿಕೆ ಅಧ್ಯಕ್ಷ ಶಶಿ ನಾಯ್ಕ ಮಾತನಾಡಿ, ಸಿಕ್ಕಿರುವ ಮೀಸಲಾತಿ ಯಾರ ಭಿಕ್ಷೆಯೂ ಅಲ್ಲ. ಡಾ| ಅಂಬೇಡ್ಕರ್ ರವರು ರಚಿತ ಸಂವಿಧಾನ ಬದ್ಧ ಹಕ್ಕಾಗಿದೆ. ವಿನಾಕಾರಣ ಸಮಾಜದಲ್ಲಿ ಈ ವಿಷಯದಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಈಗಲೂ ಮೂಲ ಸೌಕರ್ಯವಿಲ್ಲದ ತಾಂಡಾಗಳಲ್ಲಿ, ಕಾಡು, ಮೇಡುಗಳಲ್ಲಿ ಲಂಬಾಣಿ ಸಮುದಾಯದವರು ವಾಸಿಸುತ್ತಿದ್ದಾರೆ.ಬೋವಿ, ಕೊರಚ, ಕೊರಮ ಸಮುದಾಯದವರೂ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇವರ ಸರ್ವತೋಮುಖಅಭಿವೃದ್ಧಿಗೆ ಮೀಸಲಾತಿ ಅತ್ಯಗತ್ಯ ಎಂದರು.
ಭೋವಿ ಸಮಾಜದ ಮುಖಂಡರಾದ ಪರಶುರಾಮಪ್ಪ, ಮಂಜುನಾಥ, ಆರ್ ಯಮನೂರು, ವೆಂಕಟೇಶ್, ಮೋತ್ಯಾ ನಾಯ್ಕ, ರಾಜಾ ನಾಯ್ಕ, ಮಂಜಾ ನಾಯ್ಕ, ಮಂಜು, ಹರೀಶ್, ಶಾರುಖ್, ಹನುಮಂತ ನಾಯ್ಕ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.