ಕಾಲಮಿತಿಯಲ್ಲಿ ಸಾಲ ಸೌಲಭ್ಯ ಒದಗಿಸಿ
Team Udayavani, Oct 15, 2021, 5:16 PM IST
ದಾವಣಗೆರೆ: ಕೇಂದ್ರ ಸರ್ಕಾರಿ ಯೋಜನೆಯ ಸಾಲ ಸೌಲಭ್ಯದ ಅರ್ಜಿಗಳನ್ನು ಕಾಲಮಿತಿಯಲ್ಲಿಮಂಜೂರು ಮಾಡಬೇಕು ಎಂದು ಸಂಸದ ಡಾ|ಜಿ.ಎಂ. ಸಿದ್ದೇಶ್ವರ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರನಡೆದ ಜಿಲ್ಲಾ ಮಟ್ಟದ ಪುನರಾವಲೋಕನ ಸಮಿತಿಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಅರ್ಹ ಫಲಾನುಭವಿಗಳಿಗೆ ಅನುಕೂಲವಾಗಲಿಯೋಜನೆ ರೂಪಿಸಿದೆ. ಬ್ಯಾಂಕ್‌ಗಳಿಗೆ ಅರ್ಜಿಸಲ್ಲಿಕೆಯಾದ ಕೆಲ ದಿನಗಳಲ್ಲಿ ಸಾಲ ಸೌಲಭ್ಯಒದಗಿಸಬೇಕು.
ತಿಂಗಳುಗಟ್ಟಲೆ ಅರ್ಜಿಯನ್ನೇವಿಲೇವಾರಿ ಮಾಡದಿದ್ದರೆ ಹೇಗೆ. ಅರ್ಜಿಗಳನ್ನುಒಂದು ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದುಸೂಚಿಸಿದರು.
ಲೀಡ್‌ಬ್ಯಾಂಕ್ ವ್ಯವಸ್ಥಾಪಕ ಸುಶ್ರುತ್ ಡಿ. ಶಾಸ್ತ್ರಿಮಾತನಾಡಿ, ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳ ಆಧರಿಸಿಸಣ್ಣ ಪ್ರಮಾಣದ ಆಹಾರ ಸಂಸ್ಕರಣಾ ಘಟಕಗಳಪ್ರಾರಂಭಿಸುವ ಮೂಲಕ ರೈತಾಪಿ ವರ್ಗದವರುಉದ್ಯಮಿ ಗಳಾಗಬೇಕು ಎಂಬ ಸದುದ್ದೇಶದಿಂದ ನೂತನವಾಗಿ ಪ್ರಾರಂಭಿಸಿರುವ ಪಿಎಂಎಫ್‌ಎಂಇಯೋಜನೆಯಡಿ ಒಟ್ಟು 36 ಅರ್ಜಿಗಳು ಸಲ್ಲಿಕೆಯಾಗಿವೆ.
6 ಜನ ರೈತರಿಗೆ 35 ಲಕ್ಷ ರೂ. ಸಾಲ ನೀಡಲಾಗಿದೆ. 17ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ. 16 ಅರ್ಜಿಗಳುತಿರಸ್ಕೃತಗೊಂಡಿವೆ ಎಂದು ಮಾಹಿತಿ ನೀಡಿದರು.ಪಿಎಂಎಫ್‌ಎಂಇ ಯೋಜನೆಯಡಿ ಸಾಲಕ್ಕೆ ಅರ್ಜಿಸಲ್ಲಿಸಿರುವ 16 ರೈತರ ಸಿಬಿಲ್ ಸ್ಕೋರ್ ಉತ್ತಮವಾಗಿಲ್ಲ ಎಂಬ ಕಾರಣಕ್ಕೆ ಅರ್ಜಿ ತಿರಸ್ಕರಿಸಲಾಗಿದೆ.
ಹೆಚ್ಚಿನ ಅರ್ಜಿಗಳು ತಿರಸ್ಕೃತಗೊಳ್ಳುತ್ತವೆ ಎಂಬ ಕಾರಣಕ್ಕೆ ರೈತರುಸಾಲ ಪಡೆಯುವುದಕ್ಕೆ ಮುಂದೆ ಬರುವುದೇ ಇಲ್ಲ.ಹಾಗಾಗಿ ಪಿಎಂಎಫ್‌ಎಂಇ ಯೋಜನೆಯಡಿ ಸಿಬಿಲ್‌ಸ್ಕೋರ್ ಮಾನದಂಡಕ್ಕೆ ವಿನಾಯತಿ ನೀಡಬೇಕುಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ|ಶ್ರೀನಿವಾಸ್ ಚಿಂತಾಲ್ ಸಭೆಯ ಗಮನ ಸೆಳೆದರು.ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳ ಆಧರಿಸಿಸಣ್ಣ ಪ್ರಮಾಣದ ಆಹಾರ ಸಂಸ್ಕರಣಾ ಘಟಕಗಳಪ್ರಾರಂಭಿಸುವ ಮೂಲಕ ರೈತಾಪಿ ವರ್ಗದವರುಸಹ ಉದ್ಯಮಿಗಳಾಗಬೇಕು ಎಂಬ ಸದುದ್ದೇಶದಿಂದನೂತನವಾಗಿ ಪಿಎಂಎಫ್‌ಎಂಇ ಯೋಜನೆಪ್ರಾರಂಭಿಸಿ 10 ಸಾವಿರ ಕೋಟಿ ಅನುದಾನಮೀಸಲಿಟ್ಟಿದೆ.
ದಾವಣಗೆರೆ ಜಿಲ್ಲೆಯಲ್ಲಿ 25 ರಿಂದ26 ಕೋಟಿಯಲ್ಲಿ ಕೇವಲ 6 ಜನ ರೈತರಿಗೆ 35 ಲಕ್ಷರೂಪಾಯಿಯಷ್ಟು ಸಾಲ ನೀಡಿರುವ ಸಾಧನೆ ಶೂನ್ಯಕ್ಕೆಸಮವಾಗುತ್ತದೆ. ಸಿಬಿಲ್ ಅಂಕಗಳ ಮಾನದಂಡದಲ್ಲಿಸಾಲದ ಅರ್ಜಿಗಳನ್ನು ತಿರಸ್ಕರಿಸುವುದು ಸರಿಯಲ್ಲ.
ಕೃಷಿಕರು ಸಹ ಉದ್ಯಮಗಳ ಪ್ರಾರಂಭಿಸಲು ಉತ್ತೇಜನನೀಡುವ ಯೋಜನೆಗೆ ಬ್ಯಾಂಕ್ ವಲಯ ಸಹಪೂರಕವಾಗಿ ಸ್ಪಂದಿಸಬೇಕು. ಹೆಚ್ಚಿನ ಪ್ರಮಾಣದಲ್ಲಿಸಾಲ ಸೌಲಭ್ಯ ಒದಗಿಸುವ ಮೂಲಕ ಯೋಜನೆಯಮೂಲ ಉದ್ದೇಶ ಈಡೇರಿಸಬೇಕು ಎಂದು ಸಂಸದಡಾ| ಜಿ.ಎಂ. ಸಿದ್ದೇಶ್ವರ ತಿಳಿಸಿದರು.
ಕೆಲವರು ಕೇವಲ ಸಹಾಯಧನ ಪಡೆಯುವಉದ್ದೇಶದಿಂದಲೇ ಸಾಲಕ್ಕೆ ಅರ್ಜಿ ಸಲ್ಲಿಸುವುದು ಉಂಟು. ಸಾಲ ಮಂಜೂರಾತಿ ಮಾಡುವಾಗಎಲ್ಲವನ್ನೂ ಗಮನಿಸಬೇಕು. ಪಡೆದಂತಹ ಸಾಲಸದುಪಯೋಗ ಆಗುತ್ತಿದೆಯೇ ಎಂದು ಸಂಬಂಧಿತಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು.ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಆದಷ್ಟು ಬೇಗ ಸಾಲ ಮಂಜೂರಾತಿ ಮಾಡಬೇಕುಎಂದು ಸಂಸದರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಕಾಧಿಕಾರಿ ಡಾ| ವಿಜಯ ಮಹಾಂತೇಶ್‌ದಾನಮ್ಮನವರ್ ಅಧ್ಯಕ್ಷತೆ ವಹಿಸಿದ್ದರು. ಆರ್‌ಬಿಐನಎನ್.ಎಂ. ಪಾಠಕ್, ನಬಾರ್ಡ್ ಡಿಡಿಎಂ ರವೀಂದ್ರ,ಕೆನರಾ ಬ್ಯಾಂಕ್ ಕ್ಷೇತ್ರೀಯ ವ್ಯವಸ್ಥಾಪಕ ಜಿ.ಜಿ.ದೊಡ್ಡಮನಿ ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.