ಸ್ಥಳೀಯ ಸಂಸ್ಥೆಗಳು ಸ್ವಾವಲಂಬಿಗಳಾಗಬೇಕು
Team Udayavani, Apr 24, 2017, 1:23 PM IST
ದಾವಣಗೆರೆ: ಸ್ಥಳೀಯ ಆಡಳಿತ ಸಂಸ್ಥೆಗಳು ಎಲ್ಲದಕ್ಕೂ ಸರ್ಕಾರವನ್ನು ಅವಲಂಬಿಸದೆ, ಸ್ವಾವಲಂಬಿಯಾಗುವತ್ತ ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕರೆ ನೀಡಿದ್ದಾರೆ. ನಗರದ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಭಾನುವಾರ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರ ಪಂಚಾಯತ್ಗಳ ಅಭಿವೃದ್ಧಿಗೆ ಬದ್ಧವಾಗಿ ಕೆಲಸ ಮಾಡುತ್ತಿದೆ. ಇದೇ ಕಾರಣಕ್ಕೆ ಈ ಬಾರಿಯ ಬಜೆಟ್ನಲ್ಲಿ 33 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ. ಆದರೆ, ಇದರಿಂದ ಪಂಚಾಯತ್ ಸಂಸ್ಥೆಗಳು ಸಮಾಧಾನ ಪಟ್ಟುಕೊಳ್ಳಬಾರದು. ಬದಲಿಗೆ ತಮ್ಮ ಆದಾಯವನ್ನು ತಾವೇ ಸಂಗ್ರಹಿಸು ಮಟ್ಟಕ್ಕೆ ಬರಬೇಕಿದೆ ಎಂದರು.
ಜವಾಹರ್ಲಾಲ್, ಇಂದಿರಾಗಾಂಧಿ, ರಾಜೀವ್ ಗಾಂಧಿ ಹೀಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್ ನ ನಾಯಕರು ತಮ್ಮ ಅವಧಿಯಲ್ಲಿ ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಹತ್ತು ಹಲವು ಕಾರ್ಯಕ್ರಮ ರೂಪಿಸಿದರು. ರಾಜ್ಯ ಸರ್ಕಾರ ಕಳೆದ 4 ವರ್ಷಗಳ ಅವಧಿಯಲ್ಲಿ ಇದೇ ಮಾರ್ಗದಲ್ಲಿ ಸಾಗುತ್ತಿದೆ. ಚುನಾವಣೆಗೂ ಮುನ್ನ ನೀಡಿದ್ದ 165 ಆಶ್ವಾಸನೆಗಳಲ್ಲಿ 145 ಆಶ್ವಾಸನೆಗಳನ್ನು ಈಗಾಗಲೇ ಈಡೇರಿಸಿದೆ.
ಅನ್ನ ಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜನರಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಮುಟ್ಟಿಸುವ ಸಂಬಂಧ ಸಂಘಟನೆಯ ಪದಾಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ತಳಹಂತದಿಂದ ಕೆಲಸ ಮಾಡಿ ಮತ್ತೂಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮಾತನಾಡಿ, ಕಾಂಗ್ರೆಸ್ ಮಾತ್ರವೇ ಬಡವರ ಬಗ್ಗೆ ಕಾಳಜಿ ವಹಿಸಿದೆ. ಇದೇ ಕಾರಣಕ್ಕೆ ಕಳೆದ ಯುಪಿಎ ಅಧಿಕಾರಾವಧಿಯಲ್ಲಿ ಗ್ರಾಮೀಣ ಜನರ ಅಭ್ಯುದಯ, ಗುಳೇ ತಡೆಯಲು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಜಾರಿಮಾಡಿತು.
ಇಂತಹ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ನೀಡಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮೇಯರ್ ಅನಿತಾಬಾಯಿ ಮಾಲತೇಶ್ ಜಾಧವ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಪ್ರಶಾಂತ್, ಜಿಪಂ ಸದಸ್ಯರಾದ ಬಸವಂತಪ್ಪ,ಓಬಳಪ್ಪ,ದೂಡಾ ಅಧ್ಯಕ್ಷ ಶಾಮನೂರು ರಾಮಚಂದ್ರಪ್ಪ,
ರೇಷ್ಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಡಿ.ಬಸವರಾಜ್,ಎಪಿಎಂಸಿ ಅಧ್ಯಕ್ಷ ಮುದೇಗೌಡ್ರ ಗಿರೀಶ್, ಪಾಲಿಕೆ ಸದಸ್ಯ ದಿನೇಶ್ ಕೆ ಶೆಟ್ಟಿ ಇತರೆ ಮುಖಂಡರು ವೇದಿಕೆಯಲ್ಲಿದ್ದರು. ಮುಖಂಡರಾದ ವೆಂಕಟ್ ರಾವ್ ಘೋರ್ಪಡೆ, ಶಾಸಕ ಡಿ.ಆರ್.ಪಾಟೀಲ್, ಮಾಜಿ ಸಂಸದ ಸಿ.ನಾರಾಯಣಸ್ವಾಮಿ,ಬಿ.ಎನ್.ಸಂದೀಪ್ ವಿವಿಧ ವಿಷಯಗಳ ಕುರಿತು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.