ಲಾಕ್‌ಡೌನ್‌ ಜನರಿಗಾಗಿ, ಉದಾಸೀನ ಬೇಡ


Team Udayavani, Mar 28, 2020, 12:53 PM IST

ಲಾಕ್‌ಡೌನ್‌ ಜನರಿಗಾಗಿ, ಉದಾಸೀನ ಬೇಡ

ದಾವಣಗೆರೆ: ಕೋವಿಡ್ 19 ವೈರಸ್‌ ಸೋಂಕು ಹರಡುವಿಕೆ ತಡೆಗೆ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿರುವ ಲಾಕ್‌ ಡೌನ್‌ ಬಗ್ಗೆ ಉದಾಸೀನ ಮಾಡದೇ ಸಾರ್ವಜನಿಕರು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಸರ್ಕ್ನೂಟ್‌ ಹೌಸ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲೂ 63 ಜನರಲ್ಲಿ ಕೋವಿಡ್ 19  ಸೋಂಕು ಪತ್ತೆಯಾಗಿದೆ. ಈಗಾಗಲೇ ಇಬ್ಬರು ಅಸುನೀಗಿದ್ದಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ಸದ್ಯ ನಮ್ಮಲ್ಲಿ ಮರಣ ಪ್ರಮಾಣ ಕಡಿಮೆ ಇರಬಹುದು. ಆದರೆ, ನಾವು ನಿರ್ಲಕ್ಷ್ಯ ವಹಿಸಿದರೆ ಅಪಾಯ ತಪ್ಪಿದ್ದಲ್ಲ ಎಂದು ಎಚ್ಚರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಫ್ಯೂ ನಂತರ ಈಗ 21 ದಿನಗಳ ಲಾಕ್‌ ಡೌನ್‌ ಜಾರಿಗೊಳಿಸಿದ್ದಾರೆ. ಇನ್ನೂ ನಮ್ಮ ಜನ ಕೋವಿಡ್ 19  ಸೋಂಕು ಹರಡುವಿಕೆ ಗಂಭೀರವಾಗಿ ಪರಿಗಣಿಸಿಲ್ಲ. ಇದು ಸರಿಯಲ್ಲ. ನಮ್ಮ ನಮ್ಮ ಆರೋಗ್ಯದ ಸಲುವಾಗಿ ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಹೇಳಿದರು.

ವಿಶ್ವದಲ್ಲಿ ಇಟಲಿ ಆರೋಗ್ಯ ಕ್ಷೇತ್ರದ ಸಾಧನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಅಂತಹ ದೇಶದಲ್ಲೀಗ ಕೋವಿಡ್ 19  ವೈರಸ್‌ ಸೋಂಕಿಗೆ ಸಾವಿರಾರು ಮಂದಿ ಬಲಿಯಾಗಿದ್ದಾರೆ. ಇದಕ್ಕೆಲ್ಲಾ ಕಾರಣ ಅಲ್ಲಿನ ಜನರು ವಹಿಸಿದ ನಿರ್ಲಕ್ಷ್ಯ. ಭಾರತದಲ್ಲಿ ವೈದ್ಯರು, ದಾದಿಯರು ತಮ್ಮ ಕುಟುಂಬ ಮರೆತು ಸಾರ್ವಜನಿಕ ಹಿತದೃಷ್ಟಿಯಿಂದ ಹಗಲಿರುಳು ಶ್ರಮಿಸುತ್ತಿದ್ದಾರೆ. ನಾವು ಬದುಕಿದ್ದರೆ ತಾನೇ ಹಬ್ಬ-ಹರಿದಿನ ಮಾಡೋದು. ಈಗ ಎದುರಾಗಿರುವ ಆರ್ಥಿಕ ಸಂಕಷ್ಟ ತಾತ್ಕಾಲಿಕ. ಆರೋಗ್ಯ ಚೆನ್ನಾಗಿದ್ದಲ್ಲಿ ಬೇಕಾದ್ದನ್ನೂ ಪಡೆಯಬಹುದು. ಆದ್ದರಿಂದ ಸಾರ್ವಜನಿಕರು ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಸೋಂಕು ತಡೆಗೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ 21 ದಿವಸ ಮನೆಯಿಂದ ಹೊರಗಡೆಬಾರದಿದ್ದಲ್ಲಿ 3ನೇ ಮಹಾಯುದ್ದದಂತೆ ಎದುರಾಗಿರುವ ಕೋವಿಡ್ 19  ವೈರಸ್‌ ಹೊಡೆದೊಡಿಸಬಹುದು ಎಂದು ಅಭಿಪ್ರಾಯಪಟ್ಟರು.

ದಾವಣಗೆರೆ ಮಹಾನಗರ ಪಾಲಿಕೆ ಮೇಯರ್‌ ಬಿ.ಜಿ.ಅಜಯಕುಮಾರ್‌, ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್‌, ಯುವಮೋಚಾ ಜಿಲ್ಲಾಧ್ಯಕ್ಷ ಪಿ.ಸಿ.ಶ್ರೀನಿವಾಸ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.