ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಲ್ಲಿ ಪ್ರಗತಿ ಸಾಧಿಸಿ
Team Udayavani, Dec 19, 2020, 6:22 PM IST
ದಾವಣಗೆರೆ: ವಿಶೇಷ ಘಟಕ ಯೋಜನೆ, ಬುಡಕಟ್ಟುಉಪಯೋಜನೆ(ಎಸ್‌ಸಿಪಿ/ಟಿಎಸ್‌ಪಿ)ಯಡಿಬಿಡುಗಡೆಯಾದ ಅನುದಾನವನ್ನು ಶೀಘ್ರವಾಗಿನಿಗದಿತ ಕಾರ್ಯಕ್ರಮಗಳಿಗೆ ಬಳಕೆ ಮಾಡಿ ಪ್ರಗತಿ ಸಾಧಿ ಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ ಎಸ್‌ಸಿಪಿ ಯೋಜನೆಯಡಿ ಒಟ್ಟಾರೆ ಶೇ.57 ಮತ್ತು ಟಿಎಸ್‌ಪಿ ಯೋಜನೆಯಡಿಶೇ. 66 ಪ್ರಗತಿ ಸಾಧಿಸಲಾಗಿದೆ. ಆದಷ್ಟು ಶೀಘ್ರವಾಗಿ ಅನುದಾನವನ್ನು ಬಳಕೆ ಮಾಡಿ, ನಿಗದಿತ ಕಾರ್ಯಕ್ರಮಗಳು, ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರಿ ಸಾಧಿಸಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ| ಶ್ರೀನಿವಾಸ್ ಚಿಂತಾಲ್, ಎಸ್‌ಸಿಪಿ ಯೋಜನೆಯಡಿ ಶೇ. 80.45 ಮತ್ತು ಟಿಎಸ್‌ಪಿ ಯೋಜನೆಯಡಿ ಶೇ. 89.58 ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾಲಯದ ಕಾಮರ್ಸ್ ವಿಭಾಗದ ಪ್ರೊ| ಲಕ್ಷ್ಮಣ್ ಮಾತನಾಡಿ, ದಾವಣಗೆರೆವಿಶ್ವವಿದ್ಯಾಲಯದಲ್ಲಿ 395ಎಸ್‌ಸಿ-ಎಸ್‌ಟಿವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ವಿವಿಧ ಫೆಲೋಶಿಪ್‌ಗೆ 60 ಲಕ್ಷ ರೂ. ವೆಚ್ಚವಾಗಲಿದ್ದು,50 ಲಕ್ಷ ರೂ. ಮಾತ್ರ ನಿಗದಿಯಾಗಿದೆ. 24 ಕ್ಕೂ ಹೆಚ್ಚುಅನುಮೋದಿತ ಕಾರ್ಯಕ್ರಮಗಳಿದ್ದು ಅನುದಾನದಕೊರತೆಯಿಂದ ಮಾಡಲಾಗುತ್ತಿಲ್ಲ. ಆದ್ದರಿಂದಅನುದಾನವನ್ನು ಹೆಚ್ಚಿಸಬೇಕು ಎಂದು ಮನವಿಮಾಡಿದರು. ದಾವಣಗೆರೆ ವಿಶ್ವವಿದ್ಯಾಲಯದಎಸ್‌ಸಿಟಿ/ಟಿಎಸ್‌ಪಿ ಯೋಜನೆಯಡಿ ಬರುವವಿದ್ಯಾರ್ಥಿಗಳ ಸಂಖ್ಯೆ, ಕಾರ್ಯಕ್ರಮಗಳ ವಿವರ,ಅಗತ್ಯ ಅನುದಾನದ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಯೋಜನೆಯಡಿ ನಿರ್ಮಿಸಲಾಗಿರುವ ಚೆಕ್‌ಡ್ಯಾಂಗಳ ವಿವರ ನೀಡಬೇಕು. ತಾವು ಹಾಗೂ ಜಿಪಂ ಸಿಇಒ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಮಾತನಾಡಿ, ಎಸ್‌ಸಿಪಿ ಯೋಜನೆಯಡಿ ಶೇ 60.55, ಟಿಎಸ್‌ಪಿ ಯೋಜನೆಯಡಿ ಸಿಸಿ ರಸ್ತೆ,ಸೋಲಾರ್ ನೀರು ವ್ಯವಸ್ಥೆ ಒದಗಿಸಲು ಟೆಂಡರ್ ಕರೆಯಲಾಗಿದೆ. ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಐಎಎಸ್/ಕೆಎಎಸ್ ಕೋಚಿಂಗ್ ನೀಡಲು 12 ಲಕ್ಷ ಅನುದಾನ ನಿಗದಿಯಾಗಿದೆ ಎಂದರು.
ಎಸ್‌ಟಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನುಗುರುತಿಸಿ ದಾವಣಗೆರೆ ವಿವಿ ರಿಜಿಸ್ಟ್ರಾರ್‌ರನ್ನು ಸಂಪರ್ಕಿಸಿ ಕೋಚಿಂಗ್ ಕೊಡಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಯೋಜನೆಯಡಿ ಅತಿ ಕಡಿಮೆ ಪ್ರಗತಿ ಸ ಧಿಸಿರುವ ಹಾಗೂ ಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಸೂಚನೆ ನೀಡಿದರು.
ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಅರಣ್ಯ, ಸಹಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಕೈಮಗ್ಗ ಮತ್ತು ಜವಳಿ, ಆರೋಗ್ಯ, ಪ್ರವಾಸೋದ್ಯಮ, ಶಿಕ್ಷಣ,ಕೈಗಾರಿಕಾ ಕೇಂದ್ರ, ಗ್ರಾಮಿಣ ಕುಡಿಯುವನೀರು, ಪಶುಪಾಲನೆ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ನಿಗದಿತ ಅವಧಿ ಯೊಳಗೆ ಪ್ರಗತಿ ಸಾಧಿಸುವಂತೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.