ಪಟ್ಟಿಯಲ್ಲಿ ಹೆಸರು ಖಾತರಿಪಡಿಸಿಕೊಳ್ಳಿ
Team Udayavani, Sep 2, 2019, 10:31 AM IST
ದಾವಣಗೆರೆ: ಪ್ರಜಾತಂತ ವ್ಯವಸ್ಥೆಯಲ್ಲಿ ಪವಿತ್ರ ಹಕ್ಕಾದ ಮತದಾನಕ್ಕೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಅವಶ್ಯಕ ಎಂದು ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ತಿಳಿಸಿದ್ದಾರೆ.
ಭಾನುವಾರ ಜಿಲ್ಲಾಡಳಿತದ ತುಂಗಭದ್ರಾ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಷ್ಟೋ ಬಾರಿ ಉತ್ಸಾಹದಿಂದ ಮತ ಚಲಾಯಿಸಲು ಮತಗಟ್ಟೆಗೆ ಹೋದಾಗ ಮತದಾರರ ಪಟ್ಟಿಯಲ್ಲಿ ಹೆಸರೇ ಮಾಯವಾಗಿರುತ್ತದೆ. ಆಗ ನಿರಾಶೆಯಿಂದ ಮನೆಗೆ ವಾಪಸ್ ಆಗಬೇಕಾಗುತ್ತದೆ. ಅದನ್ನು ತಪ್ಪಿಸುವ ಮತ್ತು ಮತ ಚಲಾವಣೆ ಮಾಡಲು ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನ ಖಾತರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ಮತದಾನದ ಅವಕಾಶದಿಂದ ವಂಚಿತರಾಗಬೇಕಾದ ಗೊಂದಲಗಳಿಗೆ ಅವಕಾಶ ಮಾಡಿ ಕೊಡದಂತೆ ಮೊದಲೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಯಸ್ಸು, ಭಾವಚಿತ್ರ, ಸಮರ್ಪಕವಾಗಿ ಇದೆಯೇ ಎಂಬುದರ ಪರಿಶೀಲನೆಯೇ ಮತದಾರರ ಪರಿಶೀಲನಾ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಮತದಾರರು ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ತಮ್ಮವೈಯಕ್ತಿಕ ಜವಾಬ್ದಾರಿಯಿಂದ ಪ್ರತಿ ಗ್ರಾಮ ಪಂಚಾಯತ್, ಬಾಪೂಜಿ ಸೇವಾ ಕೇಂದ್ರ, ಅಟಲ್ಜೀ ಜನಸ್ನೇಹಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು. ದಾವಣಗೆರೆ ನಗರದಲ್ಲಿ ದಾವಣಗೆರೆ ಒನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಸರಿಪಡಿಸಿಕೊಳ್ಳಬಹುದು. ಸಿಟಿಜನ್ ಆ್ಯಪ್… ಮೂಲಕ ಮೊಬೈಲ್ನಲ್ಲಿ ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳಬಹುದು. ಮತದಾರ ಪಟ್ಟಿಯನ್ನು ಹೇಗೆ ಮತ್ತು ಎಲ್ಲಿ ಸರಿಪಡಿಸಿಕೊಳ್ಳಬಹುದು ಎಂಬ ಮಾಹಿತಿಗಾಗಿ 1950 ಸಹಾಯವಾಣಿಗೆ ಕರೆಮಾಡಬಹುದು ಎಂದು ತಿಳಿಸಿದರು.
ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮದ ಅಂಗವಾಗಿ ಗಣ್ಯರು, ನ್ಯಾಯಾಧೀಶರು, ಅಧಿಕಾರಿಗಳು, ವಿಕಲಚೇತನರ ಮನೆಗಳಿಗೆ ತೆರಳಿ ಮತದಾರರ ಪಟ್ಟಿಯಲ್ಲಿರುವ ಅವರ ಹೆಸರುಗಳನ್ನು ಪರಿಶೀಲಿಸಲಾಗುವುದು. ಉಳಿದಂತೆ ಇತರೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಬಿಎಲ್ಓಗಳು ಪರಿಶೀಲನಾ ಕಾರ್ಯಕ್ರಮದ ಪ್ರಥಮ ದಿನದಿಂದಲೇ ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಲೋಪಗಳನ್ನು ಸರಿಪಡಿಸುವುದು, ಹೊಸ ಮತದಾರರ ಹೆಸರುಗಳನ್ನು ನೋಂದಣಿ ಮಾಡುವುದು ಹಾಗೂ ಕುಟುಂಬದ ಸದಸ್ಯರುಗಳ ಹೆಸರುಗಳು ಕ್ರಮಬದ್ಧವಾಗಿ ಒಂದೇ ಕಡೆ ಇವೆಯೇ ಎಂದು ಪರಿಶೀಲನೆ ನಡೆಸಲಿದ್ದು, ಇದೊಂದು ನಿರಂತರ ಪ್ರಕ್ರಿಯೆಯಾಗಿರುತ್ತದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದರು.
ಪ್ರಾಸ್ತಾವಿಕ ಮಾತುಗಳಾಡಿದ ಉಪವಿಭಾಗಾಧಿಕಾರಿ ಬಿ.ಟಿ ಕುಮಾರಸ್ವಾಮಿ, ವಿಶ್ವದ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತದಲ್ಲಿ ಚುನಾವಣೆ ಎಂಬುದು ಒಂದು ಹಬ್ಬವಿದ್ದಂತೆ. ಸುಭದ್ರ ಸರ್ಕಾರಕ್ಕಾಗಿ ತಮ್ಮ ಹಕ್ಕನ್ನು ಚಲಾಯಿಸುವ ಒಂದು ಸಂಭ್ರಮದ ಹಬ್ಬವಾಗಿದೆ ಎಂದರು.
ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಒಂದು ರೀತಿ ಚುನಾವಣಾ ಆಯೋಗವೇ ಮತದಾರರ ಬಳಿ ಹೋಗುವ ಪ್ರಕ್ರಿಯೆ. ಮತದಾರರ ಮನೆ ಮನೆಗಳಿಗೆ ತೆರಳಿ ಅಧಿಕಾರಿಗಳು ಹೊಸ ಮತದಾರರ ಹೆಸರುಗಳ ಸೇರ್ಪಡೆ, ಪತಿ, ಪತ್ನಿ ಹೆಸರುಗಳು ಬೇರೆ ಬೇರೆ ಕಡೆಗಳಲ್ಲಿ ಇರುವುದು, ವಾಸಸ್ಥಳ ಬದಲಾವಣೆ, ವಲಸೆ ಪ್ರಕರಣಗಳು, ಮರಣಹೊಂದಿದವರ ಹೆಸರುಗಳು ಮತದಾರರ ಪಟ್ಟಿಯಲ್ಲಿರುವುದನ್ನು ತೆಗೆದು ಹಾಕುವುದು ಮುಂತಾದ ಕಾರ್ಯಗಳನ್ನು ಮಾಡಲಿದ್ದಾರೆ ಎಂದು ತಿಳಿಸಿದರು.
ಬಿಎಲ್ಓಗಳು ಬಂದಾಗ ಅವರಿಗೆ ಸರಿಯಾದ ಮಾಹಿತಿ ನೀಡಿ ಸಾರ್ವಜನಿಕರು ಸಹಕಾರ ನೀಡಬೇಕು. ಒಂದು ವೇಳೆ ಅರ್ಹ ಮತದಾರರಲ್ಲದವರ ಹೆಸರುಗಳು ಪಟ್ಟಿಯಲ್ಲಿದ್ದರೆ ಅವರಿಗೆ ನೋಟಿಸ್ ನೀಡಲಾಗುವುದು. ಈಗಾಗಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ನ್ಯೂನ್ಯತೆಗಳಿದ್ದರೆ ಸರಿಪಡಿಸಿಕೊಳ್ಳಬಹುದು. ಮತದಾರರ ನೋಂದಣಿ ಕಚೇರಿಯಲ್ಲಿರುವ ಹೆಲ್ಪ್ಡೆಸ್ಕ್ಗಳಲ್ಲಿ ಮಾಹಿತಿ ಪಡೆದುಕೊಂಡು ಮತದಾರರ ಪಟ್ಟಿಯಲ್ಲಿರುವ ತಮ್ಮ ಮಾಹಿತಿ ಸರಿಯಾಗಿ ಇದೆಯೇ ಎಂದು ಪರಿಶೀಲಿಸಿಕೊಳ್ಳಬಹುದು ಎಂದು ತಿಳಿಸಿದರು.
ಹರಿಹರ -ಕೊಟ್ಟೂರು ರೈಲ್ವೆ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ಪಾಲಿಕೆ ಉಪ ಆಯಕ್ತ ರವೀಂದ್ರ ಬಿ. ಮಲ್ಲಾಪುರ, ಜಗಳೂರು ತಹಶೀಲ್ದಾರ್ ತಿಮ್ಮಣ್ಣ, ಪಾಲಿಕೆ ಸಹಾಯಕ ಮತದಾನ ಅಧಿಕಾರಿ ನಾಗರಾಜ್, ಗದುಗೇಶ್, ಚುನಾವಣಾ ತಹಶೀಲ್ದಾರ್ ಪ್ರಸಾದ್, ಶ್ರೀಕುಮಾರ್, ಲಕ್ಷ್ಮಿಕಾಂತ್ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.