ನಂದಿಗುಡಿ ಬಸವೇಶ್ವರ ಸ್ವಾಮಿ ರಥೋತ್ಸವ
ಸಹಸ್ರಾರು ಭಕ್ತರು ಭಾಗಿಜೈಕಾರ ಹಾಕುತ್ತ ರಥ ಎಳೆದ ಭಕ್ತಾದಿಗಳು
Team Udayavani, Mar 7, 2020, 11:37 AM IST
ಮಲೇಬೆನ್ನೂರು: ಸಮೀಪದ ನಂದಿಗುಡಿ ಗ್ರಾಮದಲ್ಲಿ ಶ್ರೀ ಬಸವೇಶ್ವರಸ್ವಾಮಿ ರಥೋತ್ಸವ ಅಪಾರ ಭಕ್ತರ ಮಧ್ಯೆ ಸಡಗರ, ಸಂಭ್ರಮದಿಂದ ಜರುಗಿತು.
ನಂದಿಗುಡಿ ಶ್ರೀಗಳು ರಥಕ್ಕೆ ಪೂಜೆ ಸಲ್ಲಿಸಿದ ನಂತರ ಭಕ್ತರು ಬಸವೇಶ್ವರ ಸ್ವಾಮಿಗೆ ಜೈಕಾರ ಹಾಕುತ್ತ ರಥವನ್ನು ಎಳೆದರು. ರಥದ ಇಕ್ಕೆಲಗಳಲ್ಲಿ ಸೇರಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತುತ್ತಿ, ಹೆಸರುಕಾಳು, ಅಲಸಂದಿ, ಮೆಕ್ಕೆಜೋಳ ಇನ್ನಿತರೆ ದ್ವಿದಳ ಧಾನ್ಯವನ್ನು ಎಸೆದ ಭಕ್ತಿ ಸಮರ್ಪಿಸಿದರು.
ಶುಕ್ರವಾರ ಬೆಳಗ್ಗೆಯಿಂದಲೇ ಭಕ್ತರು ಬಸವೇಶ್ವರ ಸ್ವಾಮಿಗೆ ಬಾಳೆಹಣ್ಣು, ಕಾಯಿ, ಹೂವು, ಕರ್ಪೂರ, ಊದಿನಕಡ್ಡಿ ಅರ್ಪಿಸಿ ಶ್ರೀ ನಂದಿಯ ದರ್ಶನ ಪಡೆಯಲು ಮುಗಿಬಿದ್ದಿದ್ದರು.
ರಥೋತ್ಸವಕ್ಕೂ ಮುನ್ನ ನಂದಿಗುಡಿ ಮಹಾಸಂಸ್ಥಾನ ಬೃಹನ್ಮಠದ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದ ರಾಜಬೀದಿಗಳಲ್ಲಿ ಸಾಗಿತು. ಮೆರವಣಿಗೆಯಲ್ಲಿ ವೀರಭದ್ರಸ್ವಾಮಿ ಗುಗ್ಗುಳ, ಹಲಗೆ, ಡೊಳ್ಳು, ಕರಗ ಜನರ ಗಮನ ಸೆಳೆದವು.
ದೊಡ್ಡವರು, ಸಣ್ಣ ಮಕ್ಕಳು ಹೊಸಬಟ್ಟೆ ತೊಟ್ಟು ಸಂಭ್ರಮಿಸಿದರು. ಯುವಕರು ಮತ್ತು ಯುವತಿಯರು ದೇವಸ್ಥಾನ ಮತ್ತು ರಥದ ಬಳಿ ಸೆಲ್ಫಿ ತೆಗೆದುಕೊಳ್ಳುವುದು ಕಂಡುಬಂತು.
ರಥೋತ್ಸವದ ಪ್ರಯುಕ್ತ ಸ್ತ್ರೀಯರ ಸೌಂದರ್ಯ ಸಾಧನೆಗಳ ಅಂಗಡಿಗಳು, ಮಕ್ಕಳ ಆಟಿಕೆ ಅಂಗಡಿಗಳು, ಐಸ್‌ಕ್ರೀಂ ಗಾಡಿಗಳು, ಕಬ್ಬಿನ ಜ್ಯೂಸ್ ಪಾನಿಪೂರಿ, ಗೋಬಿ ಮಂಚೂರಿ, ಮಂಡಕ್ಕಿ, ಮೆಣಸಿನಕಾಯಿ ಅಂಗಡಿಗಳು, ಶ್ರೀ ನಂದಿಯ ಫೋಟೋ ಮತ್ತು ಹಾಡಿನ ಸಿಡಿ ಅಂಗಡಿಗಳು ಇದ್ದವು. ಯಕ್ಕನಹಳ್ಳಿ ಬಸವೇಶ್ವರ ದೇವರ ರಥೋತ್ಸವ ಲಕ್ಕಶೆಟ್ಟಿಹಳ್ಳಿಯಲ್ಲಿ ರಥೋತ್ಸವ ಹೊನ್ನಾಳಿ: ತಾಲೂಕಿನ ಯಕ್ಕನಹಳ್ಳಿ ಗ್ರಾಮ ದೇವರಾದ ಶ್ರೀ ಬಸವೇಶ್ವರ ದೇವರ ರಥೋತ್ಸವ ಶುಕ್ರವಾರ ಬೆಳಗಿನ ಜಾವ ವಿಜೃಂಭಣೆಯಿಂದ ನಡೆಯಿತು.
ಭಕ್ತರು ರಥಕ್ಕೆ ಮಂಡಕ್ಕಿ, ಮೆಣಸಿನಕಾಳು, ಬಾಳೆಹಣ್ಣು ಎರಚುವ ಹಾಗೂ ಒಣ ಕೊಬರಿ ಸುಡುವ ಮೂಲಕ ಭಕ್ತಿ ಸಮರ್ಪಿಸಿದರು. ಶ್ರೀ ಬಸವೇಶ್ವರ ದೇವರ ನೂತನ ದೇವಸ್ಥಾನ ಉದ್ಘಾಟನೆ, ಕಳಸಾರೋಹಣ ಕಾರ್ಯಕ್ರಮಗಳೂ ಅದ್ದೂರಿಯಾಗಿ ನಡೆದವು. ರಥೋತ್ಸವದ ಅಂಗವಾಗಿ ಗುರುವಾರ ಗ್ರಾಮದ ರಾಜ ಬೀದಿಗಳಲ್ಲಿ ಸಣ್ಣತೇರು ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.