ಕೊರೊನಾ+ಹಕ್ಕಿಜ್ವರದ ಆತಂಕ
ಗಾಬರಿ ಬೇಡ-ತಕ್ಷಣ ಚಿಕಿತ್ಸೆ ಪಡೆಯಿರಿ
Team Udayavani, Mar 18, 2020, 12:51 PM IST
ಮಲೇಬೆನ್ನೂರು: ಕೊರೊನಾ ವೈರಸ್ ಬಗ್ಗೆ ಗಾಬರಿ ಪಡುವ ಅಗತ್ಯವಿಲ್ಲ. ಶೀತ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡುಬಂದರೆ, ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಿರಿ ಎಂದು ವೈದ್ಯಾಧಿಕಾರಿ ಡಾ| ಲಕ್ಷ್ಮೀದೇವಿ ಸಲಹೆ ನೀಡಿದರು.
ಪಟ್ಟಣದ ಪುರಸಭೆಯಲ್ಲಿ ಮಂಗಳವಾರ ನಡೆದ ಕೊರೊನಾ ವೈರಸ್ ಸೊಂಕು ಹರಡದಂತೆ ತಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿದರು. ಕೊರೊನಾ ವೈರಸ್ ಬಾರದಂತೆ ಜನರು ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಅಥವಾ ಸೋಪಿನಿಂದ ಕೈಯನ್ನು ಸ್ವತ್ಛಗೊಳಿಸುತ್ತಿರಬೇಕು. ಕೈಯಿಂದ ಪದೇ ಪದೇ ಕಣ್ಣು, ಮೂಗು, ಮುಖ ಮುಟ್ಟಿಕೊಳ್ಳಬಾರದು. ವ್ಯಕ್ತಿಗಳಿಂದ ಕನಿಷ್ಟ ಒಂದು ಮೀಟರ್‌ನಷ್ಟು ಅಂತರ ಕಾಯ್ದುಕೊಳ್ಳಬೇಕು ಎಂದರು.
ಕರೊನಾ ರೋಗ ಲಕ್ಷಣಗಳು ಕಂಡು ಬಂದರೆ, ಕೂಡಲೇ ಅಂಥವರನ್ನು ಆಸ್ಪತ್ರೆಗೆ ಕರೆತರಬೇಕು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು 8 ಬೆಡ್‌ಗಳ ಪ್ರತ್ಯೇಕ ಕೋಣೆಯನ್ನು ಮೀಸಲಿರಿಸಿದ್ದೇವೆ ಎಂದರು.
ಹರಿಹರ ತಾಲೂಕಿನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಹಂದಿಗಳನ್ನು ಊರಿಂದ ಹೊರಗೆ ಸಾಗಿಸಬೇಕಿದೆ. ಕೋಳಿ, ಕುರಿ, ಮಟನ್ ಮಾರುಕಟ್ಟೆಗಳನ್ನು ಬಂದ್ ಮಾಡಿಸಬೇಕಿದೆ ಎಂದರು.
ಹಂದಿಗಳಿಂದ ಸಾರ್ವಜನಿಕರಿಗೆ ರೋಗ ಹರಡುವ ಸಾಧ್ಯತೆಯಿದ್ದು, ಇಂದೇ ಹಂದಿಗಳನ್ನು ಸ್ಥಳಾಂತರಿಸದಿದ್ದರೆ, ಕಠಿಣ ಕ್ರಮ ಜರುಗಿಸುವುದಾಗಿ ಪುರಸಭೆ ಸದಸ್ಯರಾದ ರಾಜಪ್ಪ, ಯೂಸುಫ್, ಆರೀಫ್, ಪುರಸಭೆ ಅಧಿಕಾರಿಗಳು ಹಂದಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.
ಉಪ ತಹಶೀಲ್ದಾರ್ ಆರ್.ರವಿ ಮಾತನಾಡಿ, ವಾರ್ಡ್‌ಗಳಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕು. ಕೊರೊನಾ ಕುರಿತು ಬಸ್ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್ ಮಾಡುವುದು ಉತ್ತಮ ಎಂದರು. ಕೊರೋನಾ ವೈರಸ್ ಹಾಗೂ ಹಕ್ಕಿ ಜ್ವರ ಹರಡದಂತೆ ಪಟ್ಟಣದ ಸಂತೆ ಮಾರುಕಟ್ಟೆಯಲ್ಲಿನ ಕೋಳಿ, ಕುರಿ, ಮಟನ್ ಮಾರುಕಟ್ಟೆ ಬಂದ್ ಮಾಡುವಂತೆ ನೋಟಿಸ್ ಕೊಟ್ಟಿದ್ದು, ಈಗಾಗಲೇ ಬಂದ್ ಮಾಡಲಾಗಿದೆ ಎಂದು ಪ್ರಭಾರಿ ಮುಖ್ಯಧಿಕಾರಿ ಉಮೇಶ್ ತಿಳಿಸಿದರು. ಕಂದಾಯ ಮತ್ತು ಪುರಸಭೆ ಅಧಿಕಾರಿಗಳು, ಸದಸ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.