ಮೇ 1 ಸಮಾಜವಾದಿ ವ್ಯವಸ್ಥೆ ಸ್ಥಾಪನೆಗೆ ಪ್ರೇರಣಾ ದಿನ


Team Udayavani, May 2, 2017, 12:56 PM IST

dvg3.jpg

ದಾವಣಗೆರೆ: ಕಾರ್ಮಿಕ ದಿನಾಚರಣೆ ವಿಶ್ವದ ಕಾರ್ಮಿಕರನ್ನ ಒಂದು ಗೂಡಿಸಿದ, ಶೋಷಣೆ ಯಿಂದ ಮುಕ್ತವಾದ ಹೊಸ ನಾಗರಿಕತೆಯ ಸಮಾಜವಾದಿ ವ್ಯವಸ್ಥೆಯ ಸ್ಥಾಪನೆಗೆ ಹೋರಾಡಲು ಪ್ರೇರಣೆಯಾದ ದಿನ ಎಂದು ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ (ಎಐಯುಟಿಯುಸಿ) ರಾಜ್ಯ ಕಾರ್ಯದರ್ಶಿ ಕೆ. ಸೋಮಶೇಖರ್‌ ತಿಳಿಸಿದ್ದಾರೆ. 

ಸೋಮವಾರ ರೋಟರಿ ಬಾಲಭವನದಲ್ಲಿ ಸಂಘಟನೆಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಡೀ ವಿಶ್ವದ ಎಲ್ಲಾ ದುಡಿಯುವ ಜನರು ಹೋರಾಟದ ಸ್ಫೂರ್ತಿಯಿಂದ ಆಚರಿಸುವ, ಮಾಲಿಕ ವರ್ಗದ ವಿರುದ್ಧದ ಕದನದಲ್ಲಿ ಕಾರ್ಮಿಕ ವರ್ಗ ಗಳಿಸಿರುವ ಸ್ಮರಣೀಯ ಜಯಕ್ಕಾಗಿ ಆಚರಿಸುವ ದಿನವಾಗಿದೆ ಎಂದರು. 

ಅಮೆರಿಕಾ ಹಾಗೂ ಯೂರೋಪಿನ ದೇಶ ಗಳಲ್ಲಿ ಕಾರ್ಮಿಕರನ್ನು, ತುಂಬು ಗರ್ಭಿಣಿ ಯರನ್ನೂ ಸಹ ದಿನಕ್ಕೆ 16 ರಿಂದ 18 ಗಂಟೆಗಳ ಕಾಲ ಯಂತ್ರಗಳೊಂದಿಗೆ ಯಂತ್ರಗಳಂತೆ ದುಡಿಸಿ ಕೊಳ್ಳುವುದರ ವಿರುದ್ಧ ಧ್ವನಿ ಎತ್ತಿದ ಕಾರ್ಮಿಕರು ದಿನಕ್ಕೆ 8 ಗಂಟೆ ಮಾತ್ರ ದುಡಿಸಿಕೊಳ್ಳಬೇಕು ಎಂಬ ಬೇಡಿಕೆಯೊಂದಿಗೆ ಹೋರಾಟ ಪ್ರಾರಂಭಿಸಿದರು. 

1886ರ ಮೇ. 1 ರಂದು ಅಮೆರಿಕಾದಲ್ಲಿ ಸುಮಾರು 13 ಸಾವಿರದಷ್ಟು ಕಾರ್ಖಾನೆಗಳ 3 ಲಕ್ಷ ಹೆಚ್ಚು ಕಾರ್ಮಿಕರು ಬಿಳಿ ಬಾವುಟದೊಂದಿಗೆ ಬೇಡಿಕೆಗಾಗಿ ಬೀದಿಗಿಳಿದರು. ಚಿಕಾಗೋದಲ್ಲಿ 80 ಸಾವಿರದಷ್ಟು ಹೆಚ್ಚು ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೇ. 3 ರಂದು ಶಾಂತಿಯುತವಾಗಿ ಸಭೆ ಸೇರಿದ್ದ ಕಾರ್ಮಿಕರ ಮೇಲೆ ಪೊಲೀಸರು ದಾಳಿ ಮಾಡಿದರು ಎಂದು ತಿಳಿಸಿದರು. 

ಪೊಲೀಸ್‌ ದೌರ್ಜನ್ಯವನ್ನು ಪ್ರತಿಭಟಿಸಲು ಮೇ. 4ರಂದು ಬೃಹತ್‌ ಸಭೆ ಸೇರಿದ್ದಾಗ ಹೇ ಮಾರ್ಕೆಟ್‌ ದುರಂತ ಸಂಭವಿಸಿತು. ಬಿಳಿ ಬಾವುಟಗಳು ಕಾರ್ಮಿಕರ ರಕ್ತದಲ್ಲಿ ತೋಯ್ದು ಕೆಂಪಾದವು. ಅಂದಿನಿಂದ ಕಾರ್ಮಿಕರ ಶ್ರಮದ ಸಂಕೇತವಾಗಿ ಕೆಂಪು ಬಾವುಟ ಬಳಕೆಗೆ ಬಂದಿತು.

1889 ರಲ್ಲಿ ನಡೆದ ಅಂತಾರಾಷ್ಟ್ರೀಯ ಸಮಾಜವಾದಿ ಸಮ್ಮೇಳನವು ಮೇ. 1 ಅನ್ನು ವಿಶ್ವ ಕಾರ್ಮಿಕರ ದಿನ ಆಚರಿಸಲು ಕರೆ ನೀಡಿತು. ಅಂದಿನಿಂದ ಪ್ರಪಂಚದಾದ್ಯಂತ ಮೇ.  1ರಂದು ಕಾರ್ಮಿಕರ ದಿನ ಆಚರಿಸಲಾಗುತ್ತಿದೆ. 8 ಗಂಟೆಯ ದುಡಿಮೆಯು ಕಾರ್ಮಿಕರು ತ್ಯಾಗ-ಬಲಿದಾನಗಳಿಂದ ಗಳಿಸಿದ ಹಕ್ಕು ಎಂದು ತಿಳಿಸಿದರು. 

ಟಾಪ್ ನ್ಯೂಸ್

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.