ಪ್ರಕೃತಿ ವಿಕೋಪ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಬೈರತಿ ಬಸವರಾಜ
Team Udayavani, Jul 12, 2022, 8:43 PM IST
ಚನ್ನಗಿರಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಬಾರಿ ಪ್ರಮಾಣದಲ್ಲಿ ಸುರಿಯುತ್ತಿದ್ದು ಪ್ರಕೃತಿ ವಿಕೋಪವಾಗುವ ಲಕ್ಷಣ ಕಾಣುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ಅನಾಹುತವಾಗದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯ ಪ್ರವೃತರಾಗ ಕೆಲಸವನ್ನು ನಿರ್ವಹಿಸಬೇಕು ಒಂದುವೇಳೆ ಬೇಜವಬ್ದಾರಿ ತೋರಿರುವುದು ಕಂಡುಬಂದಲ್ಲಿ ಮುಂದಾಗುವಂತಹ ಅನಾಹುತಗಳಿಗೆ ನಿಮ್ಮನ್ನೇ ನೇರ ಹೊಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರಾತಿ ಬಸವರಾಜ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ, ಮಳೆಹಾನಿ ಪರೀಶಿಲನಾ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಸುರಿಯುತ್ತಿದೆ ರೈತರು ತಮ್ಮ ಜಮೀನುಗಳನ್ನು ಹಸನು ಮಾಡಿಕೊಂಡು ಬಿತ್ತನೆಗೆ ಕಾಯುತ್ತಿದ್ದಾರೆ ಎಲ್ಲಿಯೂ ಕೂಡ ಬಿತ್ತನೆಗೆ ಬೇಕಾದ ರಸಗೊಬ್ಬರ, ಬಿತ್ತನೆ ಬೀಜಗಳ ಪೂರೈಕೆಗೆ ತೊಂದರೆ ಆಗದಂತೆ ಅಧಿಕಾರಿಗಳು ನಿಗವಹಿಸಬೇಕು ಮಳೆಯಿಂದ ರೈತರಿಗೆ ಏನೆಲ್ಲ ಹಾನಿಯುಂಟಾಗುತ್ತಿದೆ ಎಂಬುದರ ಸಮಗ್ರ ಮಾಹಿತಿಯನ್ನು ಪ್ರತಿನಿತ್ಯವು ಅಧಿಕಾರಿಗಳು ಸರ್ಕಾರಕ್ಕೆ ತಿಳಿಸಬೇಕು ರೈತರಿಗೆ ತೊಂದರೆ ಆಗದಂತೆ ಕಟ್ಟೆಚ್ಚರವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಜಿಲ್ಲಾ ಕೃಷಿ ಇಲಾಖೆ ಅಧಿಕಾರಿ ಮಾತನಾಡಿ, ಜಿಲ್ಲಾಧ್ಯಾಂತ ಬಿತ್ತನೆ ಕಾರ್ಯಕ್ಕೆ 35ಮಿಮೀ ಮಳೆಯಾಗಬೇಕಿತ್ತು ಅದರೆ ಜಿಲ್ಲೆಯಲ್ಲಿ 65 ಮಿಮೀ ಮಳೆಯಾಗಿದೆ ಬಿತ್ತನೆ ಕಾರ್ಯಕ್ಕೆ ಯಾವುದೇ ತೊಂದರೆ ಆಗದಂತೆ ನಿಗಾವಹಿಸಲಾಗಿದೆ. ಬಿತ್ತನೆ, ರಸಗೊಬ್ಬರ ಸಮರ್ಪಕವಾಗಿ ಪೂರೈಸಲಾಗುತ್ತಿದೆ. ಕೆಲ ಭಾಗದಲ್ಲಿ ಮಾತ್ರ ಜಮೀನುಗಳಿಗೆ ನೀರು ನುಗ್ಗಿ ಬಿತ್ತನೆ ಕಾರ್ಯ ಕುಂಠಿತಗೊಳುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯಧಿಕಾರಿ ಮಾತನಾಡಿ, ಅತಿಹೆಚ್ಚು ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಬೀತಿ ಶುರುವಾಗಿದೆ ಜಿಲ್ಲಾಧ್ಯಂತ ಡೆಂಗ್ಯೂ ಚಿಕನ್‌ಗುನ್ಯ ರೋಗ ಲಕ್ಷಣಗಳು ಪತ್ತೆಯಾಗುತ್ತಿವೇ ಅದ್ದರಿಂದ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ ಈ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ನಿಗಾವಹಿಸಿ ಗ್ರಾಪಂ ಮಟ್ಟದಲ್ಲಿ ಕರ ಪತ್ರಗಳನ್ನು ಹಂಚಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಿ ಅದಕ್ಕೆ ಬೇಕಾದ ಅಗತ್ಯಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಆರೋಗ್ಯಕ್ಕೆ ಸಂಬಂಧಪಟ್ಟಂತೆ ನಮ್ಮಲ್ಲಿ ಸಾಕಷ್ಟು ಹಣವಿದೇ ಪ್ರಕೃತಿ ವಿಕೋಪವನ್ನು ಎದುರಿಸಲು ಜಿಲ್ಲಾಡಳಿತ ಸನ್ನದವಾಗಿದೆ ಈಗಾಗಲೇ ಸಾಂಕ್ರಾಮಿಕ ರೋಗ ತಡೆಗಟ್ಟಲು ಆಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಕೆಎಸ್‌ಡಿಎಲ್ ನಿಗಮ ಮಂಡಳಿ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿ, ತಾಲೂಕಿನಲ್ಲಿ ರಸ್ತೆ ಅಭಿವೃದ್ಧಿಗಳನ್ನು ಮಳೆ ನಿಂತಮೇಲೆ ಪ್ರಾರಂಭಿಸಿ, ಶಾಲಾ ಕಟ್ಟಡಗಳು ಪರಿಶೀಲನೆ ಮಾಡಿ, ಶಿಥಿಲಗೊಂಡಿರುವ ಶಾಲಾ ಕಟ್ಟಡಗಳಿಂದ ಮಕ್ಕಳನ್ನು ಸ್ಥಳಾಂತರ ಮಾಡಿ ತುಂಭಾ ತುರ್ತು ಪರಿಸ್ಥಿಯಿದ್ದರೆ ಶಾಲೆಗಳಿಗೆ ರಜೆಯನ್ನು ನೀಡುವಂತೆ ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಮಾತನಾಡಿ, ಮಳೆಗಾಲದಲ್ಲಿ ವಿದ್ಯುತ್‌ಗೆ ತೊಂದರೆ ಆಗದಂತೆ ಎಚ್ಚರವಹಿಸಿ, ಲೈನ್ ಕಂಬಗಳು ಬಿದ್ದಿವೇ ಅವುಗಳನ್ನು ಪರಿಶೀಲಿಸಿ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಮತ್ತು ಎಲ್ಲಿ ಮನೆಗಳು ಕುಸಿದಿವೆ ಎಲ್ಲಾ ಮಾಹಿತಿಯನ್ನು ನೀಡಬೇಕು ಈ ಕ್ಷಣದಿಂದಲ್ಲೇ ಜಾರಿಯಾಗುವಂತೆ ತಹಶೀಲ್ದಾರ್ ನೇತೃತ್ವದಲ್ಲಿ ತಂಡವನ್ನು ರಚಿಸಿಕೊಂಡು ಅಧಿಕಾರಿಗಳು ಪ್ರಕೃತಿ ವಿಕೋಪವನ್ನು ಎದುರಿಸಬೇಕು ತಾಲೂಕಿನ ಯಾವೊಬ್ಬ ಸಾರ್ವಜನಿಕರಿಂದ ನನಗೆ ದೂರು ಬಾರದಂತೆ ಕೆಲಸವನ್ನು ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿಲ್ಲಾ ಪಂಚಾಯತ್ ಸಿಇಓ ಚನ್ನಪ್ಪ, ಎಸಿ ಹುಲ್ಲುಮಣಿ ತಿಮ್ಮಣ್ಣ, ಎಸ್‌ಪಿ ರಿಷ್ಯಂತ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.