ಸಚಿವರು-ಶಾಸಕರ ಅಕ್ರಮ ತನಿಖೆ ನಡೆಸಲು ಆಗ್ರಹ


Team Udayavani, Feb 21, 2017, 1:16 PM IST

dvg6.jpg

ದಾವಣಗೆರೆ: ರಾಜ್ಯದಲ್ಲಿನ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಹಲವು ಗಂಭೀರ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದು, ಅವುಗಳ ಸೂಕ್ತ ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಮೆರವಣಿಗೆ ನಡೆಸಿದರು. 

ಕೆ.ಬಿ. ಬಡಾವಣೆಯಲ್ಲಿನ ಪಕ್ಷದ ಕಚೇರಿಯಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಪಿಬಿ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಮನವಿ ಸಲ್ಲಿಕೆಗೂ ಮುನ್ನ ಮಾತನಾಡಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿದೆ.

ಸಚಿವ ರಮೇಶ್‌ ಜಾರಕಿಹೊಳಿ, ಶಾಸಕ ಎಂ.ಟಿ.ಬಿ. ನಾಗರಾಜ್‌, ವಿಧಾನ ಪರಿಷತ್‌ ಸದಸ್ಯ ಕೆ. ಗೋವಿಂದರಾಜ್‌, ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಲಕ್ಷ್ಮಿ ಹೆಬ್ಟಾಳ್ಕರ್‌ ಇತರರ ಮನೆ ಐಟಿ ದಾಳಿ ನಡೆದಿದ್ದು, ಅವರೆಲ್ಲಾ ಭ್ರಷ್ಟಾಚಾರದ ಮೂಲಕ ಹಣ ಸಂಪಾದನೆ ಮಾಡಿರುವುದು ಬಯಲಾಗಿದೆ. ಆದರೆ, ಸರ್ಕಾರ ಮಾತ್ರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. 

ಶಾಸಕ ನಾಗರಾಜ್‌ ಮನೆ ಮೇಲೆ ಐಟಿ ದಾಳಿಮಾಡಿದ ವೇಳೆ 140 ಕೋಟಿ ರೂ.ಗೂ ಅಧಿಕ ನಗದು, ಬೇನಾಮಿ ಆಸ್ತಿ ದಾಖಲೆ ಪತ್ತೆಯಾಗಿದೆ. ಮುಖ್ಯಮಂತ್ರಿಗಳ ಆಪ್ತ ಗೋವಿಂದರಾಜ್‌ ನಿವಾಸದ ಮೇಲೆ ದಾಳಿ ಸಂದರ್ಭದಲ್ಲಿ ಸಿಕ್ಕ ಡೈರಿಯಲ್ಲಿ ಸೀrಲ್‌ ಬ್ರಿಡ್ಜ್ ಯೋಜನೆಗೆ ಕಾಂಗ್ರೆಸ್‌ ಸರ್ಕಾರಕ್ಕೆ 65 ಕೋಟಿ ರೂ. ಸಂದಾಯವಾದ ಕುರಿತು ಪ್ರಸ್ತಾಪ ಇದೆ ಎಂದು ಅವರು ಆರೋಪಿಸಿದರು. 

ಶಾಸಕ ಕೆ. ಮಾಡಾಳು ವಿರುಪಾಕ್ಷಪ್ಪ ಮಾತನಾಡಿ, ಮೇಲ್ನೋಟಕ್ಕೆ ಸಚಿವರು, ಆಡಳಿತ ಪಕ್ಷದ ಶಾಸಕರ ಅಕ್ರಮ ಸಂಪಾದನೆ ಪತ್ತೆ ಆಗಿದೆ. ಕಾಂಗ್ರೆಸ್‌ ಶಾಸಕರನ್ನು ಪಕ್ಷದಿಂದ ಅಮಾನತುಗೊಳಿಸಬೇಕು. ಎಲ್ಲಾ ಪ್ರಕರಣಗಳ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭ್ರಷ್ಟಮುಕ್ತ ಎಂಬುದು ಶುದ್ಧ ಸುಳ್ಳು. 

ಆಡಳಿತ ಪಕ್ಷದ ಅನೇಕ ಶಾಸಕರು, ಸಚಿವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕು. ಇಲ್ಲವೇ ರಾಜ್ಯಪಾಲರೇ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು. 

ಮಾಜಿ ಶಾಸಕ ಬಿ.ಪಿ. ಹರೀಶ್‌, ತಾಪಂ ಸದಸ್ಯ ಆಲೂರು ನಿಂಗರಾಜ್‌, ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಅಣಬೇರು ಜೀವನಮೂರ್ತಿ, ಮುಖಂಡರಾದ ರಾಜನಹಳ್ಳಿ ಶಿವಕುಮಾರ್‌, ಪಿ.ಸಿ. ಶ್ರೀನಿವಾಸ್‌, ಎಚ್‌.ಎನ್‌. ಶಿವಕುಮಾರ್‌, ಎಲ್‌.ಡಿ. ಗೋಣೆಪ್ಪ, ಮಾಲತೇಶ್‌ ಭಂಡಾರಿ, ಬಿ. ರಮೇಶ್‌ನಾಯಕ್‌, ಎ.ಇ. ನಾಗರಾಜ್‌, ಬಿ.ಟಿ.ಸಿದ್ದಪ್ಪ, ಬೇತೂರು ಬಸವರಾಜಪ್ಪ, ಹಾಲಮ್ಮ, ಜಯಲಕ್ಷ್ಮಿಮಹೇಶ್‌ ಮೆರವಣಿಗೆ ನೇತೃತ್ವ ವಹಿಸಿದ್ದರು.  

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

6

Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ

5

Bajpe: ಇನ್ಮುಂದೆ ದೀಪಗಳಿಂದ ಬೆಳಗ‌ಲಿದೆ ವಿಮಾನ ನಿಲ್ದಾಣ ರಸ್ತೆ

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

4(2

Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.