ಏಳು ಜನರಿಗೆ ಸಚಿವ ಸ್ಥಾನ ಖಚಿತ. ನಾಳೆ ಅಧಿಕೃತ ಘೋಷಣೆ: ಶ್ರೀರಾಮುಲು
Team Udayavani, Jan 11, 2021, 7:30 PM IST
ದಾವಣಗೆರೆ: ರಾಜ್ಯದಲ್ಲಿ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ದೊರಕಲಿದ್ದು , ಈ ಕುರಿತಾಗಿ ನಾಳೆ ಅಧಿಕೃತ ಘೋಷಣೆಯಾಗುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಸೋಮವಾರ(ಜನವರಿ 10) ದಾವಣಗೆರೆಯ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿರುವ ಆವರು ಸಮಾವೇಶಕ್ಕೂ ಮುನ್ನ ಮಾತನಾಡಿ, ಮುಖ್ಯಮಂತ್ರಿಯವರು ದೆಹಲಿಗೆ ತೆರಳಿ ಮಾತುಕತೆ ನಡೆಸಿದ್ದಾರೆ. ಒಟ್ಟು ಏಳು ಜನರಿಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದ್ದು, ಇದರಲ್ಲಿ ವಲಸಿಗರಿಗೆ ಹಾಗೂ ಪಕ್ಷದ ಹಿರಿಯರಿಗೆ ಅವಕಾಶ ಸಿಗುತ್ತದೆ. ಈ ಕುರಿತಾದ ಅಧಿಕೃತ ಘೋಷಣೆ ನಾಳೆ ಹೊರಬೀಳುವ ಸಾಧ್ಯತೆಗಳಿವೆ ಎಂದಿದ್ದಾರೆ.
ಇನ್ನು ಖಾತೆಗಳ ಬದಲಾವಣೆಯ ಕುರಿತಾಗಿ ಮಾತನಾಡಿರುವ ಶ್ರೀರಾಮುಲು ಸಚಿವ ಸಂಪುಟದಲ್ಲಿ ಯಾವುದೇ ಖಾತೆ ಬದಲಾವಣೆ ಇಲ್ಲ ಮತ್ತು ಉಪಮುಖ್ಯಮಂತ್ರಿ ಸ್ಥಾನ ಕುರಿತು ಯೋಚಿಸಿ ನೋಡೊಣ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಸಂಬಳದಲ್ಲಿ ಸ್ವಲ್ಪ ಕಡಿತ! ಏಪ್ರಿಲ್‌ನಿಂದ ಜಾರಿಗೆ?!
ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ (ಜನವರಿ 10)ರಂದು ದೆಹಲಿಗರ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಸುಮಾರು ಒಂದು ಗಂಟೆ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ, ಉಪ ಚುನಾವಣೆಗಳ ಸಿದ್ಧತೆ ಸಂಬಂಧ ಮಾತುಕತೆ ನಡೆಸಿದ್ದರು.
ಭವಿಷ್ಯದಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ನಂತರದ ನಾಯಕತ್ವದ ಕುರಿತಂತೆಯೂ ಚರ್ಚೆ ನಡೆದಿದೆ ಎಂದು ಹೇಳ ಲಾಗಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಅಥವಾ ಯಾವುದೇ ಬದಲಾವಣೆ, ಬೆಳವಣಿಗೆಗಳ ಬಗ್ಗೆ ಎಚ್ಚರಿಕೆ ಹೆಜ್ಜೆ ಇಡಲು ವರಿಷ್ಠರು ಮುಂದಾಗಿದ್ದಾರೆ. ಏನೇ ಇದ್ದರೂ, ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದು ಕೊಂಡೇ ತೀರ್ಮಾನಿಸಲು ವರಿಷ್ಠರು ಚಿಂತಿಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.