ಅನಗತ್ಯ ಆರೋಪಗಳ ಮೂಲಕ ಕಾಂಗ್ರೆಸ್ ನಿಂದ ದಾರಿ ತಪ್ಪಿಸುವ ಕೆಲಸ: ಬಿ.ವೈ.ವಿಜಯೇಂದ್ರ
Team Udayavani, Nov 11, 2021, 1:56 PM IST
ದಾವಣಗೆರೆ: ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ನವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ರಾಜ್ಯಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನಿಂದ ಹತಾಶರಾಗಿರುವ ಕಾಂಗ್ರೆಸ್‌ನವರು ಬಿಟ್‌ಕಾಯಿನ್ ವಿಚಾರದಲ್ಲಿ ಇಲ್ಲಸಲ್ಲದ ಆರೋಪಗಳ ಮಾಡುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಹತಾಶೆಯಿಂದ ಟೀಕಿಸುತ್ತಿದ್ದಾರೆ ಎಂದು ಹರಿಹಾಯ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಆಗುತ್ತದೆ ಎಂಬ ಮಾತು ನಿಜಕ್ಕೂ ಕಪೋಲಕಲ್ಪಿತ. ಕಾಂಗ್ರೆಸ್ ನವರ ಪಿತೂರಿ ಅಷ್ಟೇ. ಈ ರೀತಿಯ ಹೇಳಿಕೆ ನೀಡುವ ಮೂಲಕ ಆಡಳಿತದ ವೇಗವನ್ನು ಕುಂಠಿತ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ವಿಧಾನಸಭಾ ಚುನಾವಣೆ ಇನ್ನೂ ಒಂದೂವರೆ ವರ್ಷ ಇದೆ. ಅಲ್ಲಿಯವರೆಗೂ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ನವರು ಹಾನಗಲ್ ಉಪ ಚುನಾವಣೆ ಒಂದನ್ನು ಗೆದ್ದಿರಬಹುದು. ಹಿಂದೆ ನಡೆದಂತಹ ಎಲ್ಲ ಚುನಾವಣೆಗಳಲ್ಲಿ ಸೋತಿದ್ದಾರೆ. ಸೋಲಿನಿಂದ ಹತಾಶರಾಗಿ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ:ಬ್ಯಾಂಕ್ ಮಾಹಿತಿ ಕೊಡದಿದ್ರೂ ಹಣ ಕಳವು : ಸಾರ್ವಜನಿಕರೇ ಎಚ್ಚರ,112 ಗೆ ಕರೆ ಮಾಡಿ
ಬಿಟ್ ಕಾಯಿನ್ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿಯವರೇ ಹೇಳಿದ್ದಾರೆ. ಯಾವುದೇ ರೀತಿಯ ತನಿಖೆಗೂ ಸಿದ್ಧ ಎಂದಿದ್ದಾರೆ. ಆದರು ಇಲ್ಲಸಲ್ಲದ ಆರೋಪ ಮಾಡುವುದು ಶೋಭೆ ತರುವಂತದ್ದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಲ್ಲ ಸಮಾಜದ ಮೀಸಲಾತಿ ಬೇಡಿಕೆಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ವಿಚಾರ ಸೇರಿದಂತೆ ಬಹುತೇಕ ಸಮಾಜಗಳ ಬೇಡಿಕೆ ಬಗ್ಗೆ ಮುಖ್ಯಮಂತ್ರಿಯವರು ಸ್ಪಂದಿಸಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಸಮಾಜದ ಸ್ವಾಮೀಜಿಗಳು ಆತಂಕ ಪಡಬಾರದು ಎಂದು ಮನವಿ ಮಾಡಿದರು.
ಹಾನಗಲ್ ನಲ್ಲಿ ನಾವು ಎಲ್ಲೋ ಎಡವಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ಸಾಕಷ್ಟು ಪ್ರಯತ್ನ ಮಾಡಿದರೂ ಜಯ ಸಿಕ್ಕಲಿಲ್ಲ. ಮುಂದಿನ ದಿನಗಳ ಸರಿ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ವಿಧಾನ ಸಭಾ ಚುನಾವಣೆಗೆ ಇನ್ನು ಕಾಲಾವಕಾಶ ಇದೆ. ಉಪಾಧ್ಯಕ್ಷನಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ. ಚುನಾವಣೆಗೆ ನಿಲ್ಲಬೇಕೋ, ಬೇಡವೋ, ನಿಂತರೆ ಎಲ್ಲಿ ನಿಲ್ಲಬೇಕು ಎನ್ನುವುದನ್ನ ಪಕ್ಷದ ಮುಖಂಡರು ನಿರ್ಧರಿಸುತ್ತಾರೆ. ಎಲ್ಲಿ ನಿಲ್ಲಲೋ ಪಕ್ಷ ಹೇಳುತ್ತದೆಯೋ ಆ ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರ ಬದಲಾವಣೆ ವಿಚಾರ ಕೇವಲ ಊಹಾಪೋಹ ಅಷ್ಟೇ. ಪಕ್ಷ ಎಲ್ಲ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಸಂಘಟನೆ ವಿಚಾರದಲ್ಲಿ ಬಲಶಾಲಿ ಆಗುತ್ತಿದೆ. ಹಾಗಾಗಿ ರಾಜ್ಯ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ಯಾರೂ ಸಹ ತಲೆ ಕೆಡಿಸಿಕೊಳ್ಳುವಂತಗ ಅಗತ್ಯವೇ ಇಲ್ಲ. ಕಟೀಲ್ ಅವರು ಅವಧಿಯನ್ನ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.