ತಪ್ಪಿದ ಕುಡಿವ ನೀರಿನ ಬವಣೆ
Team Udayavani, Nov 25, 2018, 2:50 PM IST
ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಬವಣೆ ಎದುರಾಗಬಾರದು ಎಂಬ ಹಿನ್ನೆಲೆಯಲ್ಲಿ ಎರಡು ಕೆರೆಗಳನ್ನು ಅಭಿವೃದ್ಧಿಸುವ ಜೊತೆಗೆ ಜಲಸಿರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಶನಿವಾರ, ಮಹಾನಗರಪಾಲಿಕೆಯ 14ನೇ ವಾರ್ಡ್‌ನ ಬಸಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ, ಮಾತನಾಡಿದ ಅವರು, ಕಳೆದ 3 ವರ್ಷಗಳಿಂದಲೂ ರಾಜ್ಯದೆಲ್ಲೆಡೆ ಬರಗಾಲ ಇದ್ದರೂ ಕೂಡ ದಾವಣಗೆರೆ ಜನತೆಗೆ ನೀರಿನ ಸಮಸ್ಯೆ ಉಂಟಾಗಲಿಲ್ಲ. ಇದಕ್ಕೆ ನಗರದ ಟಿ.ವಿ. ಸ್ಟೇಷನ್ ಮತ್ತು ಕುಂದುವಾಡ ಕೆರೆ ಅಭಿವೃದ್ಧಿಪಡಿಸಿರುವುದೇ ಕಾರಣ. ಈ ಎರಡು ಕೆರೆಗಳ ಅಭಿವೃದ್ಧಿ ಕೆಲವರು ವಿರೋಧಿಸಿದರೂ ಸಹ ಸಾರ್ವಜನಿಕರ ಹಿತದೃಷ್ಟಿಯಿಂದ ಕೆರೆಗಳನ್ನು ಅಭಿವೃದ್ಧಿಗೊಳಿಸಲಾಯಿತು ಎಂದರು.
ಇದೀಗ ಜಲಸಿರಿ ಯೋಜನೆಯಡಿ ಕಾಮಗಾರಿ ಪ್ರಾರಂಭಗೊಂಡಿದ್ದು, ಮುಂದಿನ ಬೇಸಿಗೆ ವೇಳೆಗೆ ದಿನದ 24 ಗಂಟೆಯೂ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಬಸಾಪುರ ಗ್ರಾಮದಲ್ಲಿ ಎಂದೂ ಸಹ ನೀರಿನ ಸಮಸ್ಯೆ ಉಂಟಾಗಿಲ್ಲ. ಆದರೆ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆ ಮನಗಂಡು 8 ಲಕ್ಷ ವೆಚ್ಚದಲ್ಲಿ ಘಟಕ ನಿರ್ಮಿಸಲಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ 15ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಪಾಲಿಕೆ ಸದಸ್ಯ ಗೌಡ್ರು ರಾಜಶೇಖರ್, ಆನೆಕೊಂಡ ಲಿಂಗರಾಜ್, ಕಾರ್ಯಪಾಲಕ ಅಭಿಯಂತರ ಕೆ.ಎಂ. ಮಂಜುನಾಥ್, ಗುತ್ತಿಗೆದಾರರಾದ ಮುನಿಯಪ್ಪ, ಸುರೇಶ್, ಸುರೇಂದ್ರಪ್ಪ, ಸಿದ್ದಪ್ಪ, ಬಸವರಾಜಪ್ಪ, ಮಹೇಶ್ವರಪ್ಪ, ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.