ಸ್ಲಂ ಮೋರ್ಚಾದಿಂದ ಉಚಿತ ಟ್ಯಾಂಕರ್
Team Udayavani, Mar 19, 2017, 12:43 PM IST
ದಾವಣಗೆರೆ: ಬಿಜೆಪಿ ಸ್ಲಂ ಮೋರ್ಚಾದ ರಾಜ್ಯ ಘಟಕ ದಾವಣಗೆರೆ ನಗರದ ಸ್ಲಂ ನಿವಾಸಿಗಳಿಗೆ ಟ್ರ್ಯಾಕ್ಟರ್ ಟ್ಯಾಂಕರ್‌ನಿಂದ ನೀರು ಪೂರೈಸಲಿದೆ. ನಮ್ಮ ಮೋರ್ಚಾದಿಂದ ಟ್ರ್ಯಾಕ್ಟರ್ ಟ್ಯಾಂಕರ್ ಜತೆಗೆ ಉಚಿತ ಡಿಸೇಲ್ ಹಾಗೂ ಚಾಲಕನನ್ನೂ ಒದಗಿಸಲಾಗಿದೆ. ಪಾಲಿಕೆಯಿಂದ ನೀರು ಪೂರೈಸಿದಲ್ಲಿ ಅಗತ್ಯವಿರುವ ಸ್ಲಂ ಪ್ರದೇಶಕ್ಕೆ ಕೊಂಡೊಯ್ಯಲಾಗುವುದು ಎಂದು ಮೋರ್ಚಾದ ರಾಜ್ಯಾಧ್ಯಕ್ಷ ಜಯಪ್ರಕಾಶ್ ಯು. ಅಂಬರಕರ್ ಶನಿವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಬೂದಾಳು ರಸ್ತೆಯಲ್ಲಿನ ಮಾರಮ್ಮನ ದೇವಸ್ಥಾನದ ಬಳಿ ಇಂದು ಬೆಳಗ್ಗೆ 11 ಗಂಟೆಗೆ ಕುಡಿಯುವ ನೀರಿನ ಟ್ರ್ಯಾಕ್ಟರ್ ಟ್ಯಾಂಕರ್ ಉಚಿತ ಸೇವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ. ಸಿದ್ಧೇಶ್ವರ್, ಶಾಸಕ ಸಿ.ಟಿ. ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಇತರೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿರುವ ಸ್ಲಂಗಳನ್ನು ನಮ್ಮ ಮೋರ್ಚಾದಿಂದ ಸಮೀಕ್ಷೆ ಮಾಡಿಸಲಾಗಿದೆ. ರಾಜ್ಯ ಸರ್ಕಾರ ಸ್ಲಂಗಳ ಪರಿಸ್ಥಿತಿ ಸುಧಾರಣೆಗೆ ಯಾವುದೇ ಕ್ರಮ ವಹಿಸಿಲ್ಲ. ಈ ಬಜೆಟ್‌ನಲ್ಲೂ ಸಹ ಹೆಚ್ಚಿನ ಹಣ ಇಟ್ಟಿಲ್ಲ. ಹಿಂದಿನ ಬಜೆಟ್‌ನಲ್ಲಿಟ್ಟಿದ್ದ ಅನುದಾನ ಖರ್ಚು ಮಾಡಿಲ್ಲ. ರಾಜ್ಯದಲ್ಲಿ ಒಟ್ಟು 2804 ಸ್ಲಂಗಳಿವೆ. ಇವುಗಳ ಪೈಕಿ 2,397 ಸ್ಲಂಗಳು ಘೋಷಣೆಗೊಂಡಿವೆ.
407 ಅಘೋಷಿತ ಸ್ಲಂಗಳಿವೆ ಎಂದು ಅವರು ಮಾಹಿತಿ ನೀಡಿದರು. ಈ ಹಿಂದೆ ನಮ್ಮ ಪಕ್ಷದ ಸರ್ಕಾರದ ಅವಧಿಯಲ್ಲಿ ಸ್ಲಂಗಳಲ್ಲಿ 41,745 ಮನೆ ನಿರ್ಮಾಣ ಮಾಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಇದುವರೆಗೆ ಈ ನಿಟ್ಟಿನಲ್ಲಿ ದೊಡ್ಡ ಪ್ರಯತ್ನ ಮಾಡಿಲ್ಲ.ಹಾಗೆ ನೋಡಿದರೆ ಕಾಂಗ್ರೆಸ್‌ನ 35-40 ಶಾಸಕರು ಸ್ಲಂ ಜನರ ಮತಗಳಿಂದ ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅನೇಕ ಶಾಸಕರ ಆಯ್ಕೆಗೆ ಸ್ಲಂ ನಿವಾಸಿಗಳೇ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 70 ಲಕ್ಷ ಮತದಾರರು ಸ್ಲಂ ನಿವಾಸಿಗಳಾಗಿದ್ದಾರೆ ಎಂದು ಅವರು ಹೇಳಿದರು.
ನಮ್ಮ ಮೋರ್ಚಾ ದೇಶದ ವಿವಿಧೆಡೆಯ ಸ್ಲಂ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಅಲ್ಲಿನ ರೀತಿಯಲ್ಲಿಯೇ ನಮ್ಮ ಸ್ಲಂಗಳನ್ನು ಅಭಿವೃದ್ಧಿ ಪಡಿಸಲು ಎನ್‌ಜಿಒಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ. 60 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡದ ಕೆಲಸವನ್ನು ನಾವು ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಿದ್ದೇವೆ.
ಸ್ಲಂಗಳಿಗೆ ಬೇಕಾದ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸಲಿದ್ದೇವೆ ಎಂದು ಅವರು ತಿಳಿಸಿದರು. ಮೋರ್ಚಾ ನಡೆಸಿದ ಸಮೀಕ್ಷಾ ವರದಿಯನ್ನು ಏ.14ರ ಅಂಬೇಡ್ಕರ್ ಜಯಂತಿಯಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಲಿದ್ದಾರೆ.
ಇದೇ ವರದಿಆಧರಿಸಿ, ಕ್ರಮ ವಹಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು. ಮೋರ್ಚಾದ ರಾಜ್ಯ ಕಾರ್ಯದರ್ಶಿ ಪಿಸಾಳೆ ಕೃಷ್ಣ, ಮುಖಂಡರಾದ ಮಾಲತೇಶ ಭಂಡಾರಿ, ಹನುಮಂತಪ್ಪ, ಗುಡ್ಡಪ್ಪ, ಶಶಿಧರ್, ನಾರಾಯಣಪ್ಪ, ರಾಘವೇಂದ್ರ ರೆಡ್ಡಿ, ಪರುಶುರಾಮ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.