ಲಾಕ್ ಡೌನ್ : 5 ವರ್ಷದ ಮಗನನ್ನು ಹೆಗಲ ಮೇಲೆ ಹೊತ್ತು 90 ಕಿ.ಮೀ ನಡೆದ ತಾಯಿ.!
Team Udayavani, Jun 12, 2021, 1:58 PM IST
ದಾವಣಗೆರೆ: ಕೋವಿಡ್ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಬಸ್ ಇಲ್ಲದೇ ತಾಯಿಯೋರ್ವಳು ತನ್ನ ಐದು ವರ್ಷದ ಮಗನನ್ನು ಹೆಗಲ ಮೇಲೆ ಹೊತ್ತು ಬರೋಬರಿ 90 ಕಿಮೀ ನಡೆದು ಮನೆ ಸೇರಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಐದು ವರ್ಷದ ಮಗನನ್ನು ಎತ್ತಿಕೊಂಡು ಅಂದಾಜು 90 ಕಿಮೀ ನಡೆದುಕೊಂಡು ಬಂದ ಆ ಮಹಾತಾಯಿಯ ಹೆಸರು ನಾಗರತ್ನಾ. ಈಕೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದಿಂದ ದಾವಣಗೆರೆವರೆಗೆ ಮಗು ಎತ್ತಿಕೊಂಡು ಕಾಲ್ನಡಿಗೆಯಲ್ಲಿ ಬಂದಿದ್ದಾಳೆ. ಕುಟುಂಬದಲ್ಲಿ ನಡೆದ ಜಗಳವೇ ಈಕೆ ಮನೆ ಬಿಟ್ಟು ಬರಲು ಕಾರಣ ಎನ್ನಲಾಗಿದೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡಿನ ದಾಳಿಗೆ ಇಬ್ಬರು ಪೊಲೀಸರು, ಇಬ್ಬರು ನಾಗರಿಕರ ಸಾವು
ಪತಿಯೊಂದಿಗೆ ಜಗಳಮಾಡಿಕೊಂಡು ಮಗು ಹಾಗೂ ಬಟ್ಟೆ ಚೀಲದೊಂದಿಗೆ ಬೆಳಿಗ್ಗೆಯೇ ಮನೆಯಿಂದ ಹೊರಟ ನಾಗರತ್ನ, ಶಿವಮೊಗ್ಗದಿಂದ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ತುಂಬಿಗೆರೆಯಲ್ಲಿರುವ ಅಕ್ಕನ ಮನೆಗೆ ಹೋಗುತ್ತಿದ್ದಳು. ರಾತ್ರಿ 9.30 ವೇಳೆಗೆ ನಗರದ ಎಸ್ ಎಸ್ ಆಸ್ಪತ್ರೆ ಬಳಿ ನಗರದ ಪೋಲೀಸರು ಆಕೆಯನ್ನು ವಿಚಾರಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಆಕೆಯನ್ನು ಪೊಲೀಸ್ ವಾಹನದಲ್ಲಿ ತುಂಬಿಕೆರೆ ಗ್ರಾಮಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.