ಬಾನುಲಿ ಕೇಂದ್ರಕ್ಕಾಗಿ ಸೈಕಲ್ ಜಾಥಾ
Team Udayavani, Mar 25, 2017, 12:39 PM IST
ದಾವಣಗೆರೆ: ನಗರದಲ್ಲಿ ಬಾನುಲಿ ಕೇಂದ್ರ ಆರಂಭಿಸಲು ಶುಕ್ರವಾರ ಕರ್ನಾಟಕ ಜನಮನ ವೇದಿಕೆ ಕಾರ್ಯಕರ್ತರು ನಗರದಲ್ಲಿ ಸೈಕಲ್ ಜಾಥಾ ನಡೆಸಿ, ಒತ್ತಾಯಿಸಿದ್ದಾರೆ. ಶಿವಪ್ಪಯ್ಯ ವೃತ್ತದಿಂದ ಜಾಥ ಆರಂಭಿಸಿದ ಕಾರ್ಯಕರ್ತರು, ಸಂಸದರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಮನವಿ ಸಲ್ಲಿಕೆಗೂ ಮುನ್ನ ಮಾತನಾಡಿದ ವೇದಿಕೆ ಸಂಸ್ಥಾಪಕ ಅಧ್ಯಕ್ಷ ನಾಗೇಂದ್ರ ಬಂಡೀಕರ್, ದಾವಣಗೆರೆ ಕಲೆ, ಸಾಹಿತ್ಯ, ಸಾಂಸ್ಕೃತಿಕ, ವಾಣಿಜ್ಯ, ವಿದ್ಯಾನಗರಿ ಎಂಬುದಾಗಿ ಹೆಸರುವಾಸಿಯಾಗಿದೆ. ಇದೀಗ ಸ್ಮಾರ್ಟ್ ಸಿಟಿ, ಅಮೃತ ನಗರ ಯೋಜನೆಗೂ ಆಯ್ಕೆಯಾಗಿದೆ. ಇಂತಹ ನಗರದಲ್ಲಿ ಬಾನುಲಿ ಇಲ್ಲದೇ ಇರುವುದು ನಿಜಕ್ಕೂ ಬೇಸರ ಎಂದರು.
ಹಾಲಿ ಭದ್ರಾವತಿ, ಚಿತ್ರದುರ್ಗ ಕೇಂದ್ರದಿಂದ ಪ್ರಸಾರವಾಗುವ ಕಾರ್ಯಕ್ರಮಗಳನ್ನೇ ಆಲಿಸಬೇಕಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಜಿ.ಎಂ. ಸಿದ್ದೇಶ್ವರ್ ಗೆದ್ದ ನಂತರ ಬಾನುಲಿ ಕೇಂದ್ರ ಆರಂಭಿಸುವ ಭರವಸೆ ನೀಡಿದ್ದರು. ಆದರೆ, ಚುನಾವಣೆ ಮುಗಿದು ಮೂರು ವರ್ಷ ಕಳೆಯುತ್ತಾ ಬಂದರೂ ಇದುವರೆಗೆ ಬಾನುಲಿ ಕೇಂದ್ರ ಆರಂಭವಾಗಿಲ್ಲ.
ಇನ್ನಾದರೂ ಬಾನುಲಿ ಆರಂಭಕ್ಕೆ ಕ್ರಮ ವಹಿಸಿ ಎಂದು ಅವರು ಹೇಳಿದರು. ವೇದಿಕೆಯ ಉಪಾಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಪಿ. ಶಿವಕುಮಾರ್, ಎಸ್. ವಿಷ್ಣು, ಬಿ.ಎಸ್. ಪ್ರವೀಣ್, ಎಂ. ತಿಪ್ಪೇಶ್, ಆರ್.ಸಿ. ಮಂಜುನಾಥ, ಕೆ. ಆನಂದ, ಮನ್ಸೂರ್ ಜಾಥದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.