ಕೋವ್ಯಾಕ್ಷಿನ್ ಲಸಿಕೆ ಪಡೆದ ಜಿ.ಎಂ ಸಿದ್ದೇಶ್ವರ ದಂಪತಿ
Team Udayavani, Mar 3, 2021, 6:32 PM IST
ದಾವಣಗೆರೆ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್-19 ಲಸಿಕೆ ನೀಡುವ ಅಭಿಯಾನವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಅಭಿಯಾನದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ (69) ಹಾಗೂ ಅವರ ಪತ್ನಿ ಜಿ.ಎಸ್. ಗಾಯತ್ರಮ್ಮ ಒಳಗೊಂಡಂತೆ ಹಿರಿಯ ನಾಗರಿಕರು ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟ ಅನಾರೋಗ್ಯ ಪೀಡಿತರು ಸೇರಿದಂತೆ ಒಟ್ಟು 74 ಜನರು ಲಸಿಕೆ ಪಡೆದುಕೊಂಡರು.
ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಪ್ರಪಂಚವನ್ನೇ ತಲ್ಲಣಗೊಳಿಸಿದ ಕೊರೊನಾ ನಿಯಂತ್ರಣಕ್ಕೆ 10 ತಿಂಗಳೊಳಗಾಗಿ ಲಸಿಕೆ ಕಂಡುಹಿಡಿದಿರುವುದು ಅಭಿನಂದನಾರ್ಹ. ಮೊದಲ ಹಂತದಲ್ಲಿ ಕೋವಿಡ್ ನಿಯಂತ್ರಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ನಂತರ ಕಂದಾಯ, ಪೌರಾಡಳಿತ, ಪಂಚಾಯತ್ ರಾಜ್ ಇಲಾಖೆ, ಪೊಲೀಸ್ ಇಲಾಖೆ ಫಲಾನುಭವಿಗಳಿಗೆ ನೀಡಲಾಗಿದೆ. ಲಸಿಕೆ ಸುರಕ್ಷಿತವಾಗಿದ್ದು, ಇದುವರೆಗೂ ಯಾರಿಗೂ ತೊಂದರೆಯಾಗಿಲ್ಲ ಎಂದು ತಿಳಿಸಿದರು.
ಮಾ.1ರಂದು ಲಸಿಕೆ ಪಡೆಯಬೇಕಿತ್ತು. ಕಾರಣಾಂತರಗಳಿಂದ ಲಸಿಕೆ ಪಡೆಯಲು ಸಾಧ್ಯವಾಗಲಿಲ್ಲ. ಸ್ವ-ಇಚ್ಚೆಯಿಂದ ನನ್ನ ಮಡದಿಯೊಂದಿಗೆ ಬಂದು ಲಸಿಕೆ ಪಡೆದಿದ್ದು, ಯಾವುದೇ ತೊಂದರೆಯಾಗಿಲ್ಲ. ಸುರಕ್ಷಿತವಾಗಿದ್ದೇವೆ. ಲಸಿಕೆ ಪಡೆಯುವುದಕ್ಕು ಮುನ್ನ ಇಲ್ಲಿ ಲಸಿಕೆ ಪಡೆದ ಹಿರಿಯರನ್ನು ವಿಚಾರಿಸಿದ್ದು, ಯಾವುದೇ ರೀತಿಯ ಅಡ್ಡಪರಿಣಾಮ ಸಂಭವಿಸಿಲ್ಲ ಎಂದು ಭರವಸೆ ನೀಡಿದ್ದಾರೆ. ಲಸಿಕೆ ಪಡೆಯದ ಎಲ್ಲ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ ಎಲ್ಲಾ ಅನಾರೋಗ್ಯ ಪೀಡಿತರು ಯಾವುದೇ ಭಯವಿಲ್ಲದೆ, ಹಿಂಜರಿಯದೆ ಲಸಿಕೆ ಪಡೆದುಕೊಂಡು ದೇಶಕ್ಕೆ ಮಾದರಿಯಾಗಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಸಂಸದ ಸಿದ್ದೇಶ್ವರ ಹಾಗೂ ಅವರ ಪತ್ನಿ ಲಸಿಕೆ ಹಾಕಿಸಿಕೊಂಡಿದ್ದು ಯಾವುದೇ ತೊಂದರೆಗಳು ಸಂಭವಿಸಿಲ್ಲ. ಯಾರು ಭಯ ಪಡದೇ, ಲಸಿಕೆ ಕುರಿತು ಪೂರ್ವಾಗ್ರಹ ಇಟ್ಟುಕೊಳ್ಳದೇ,ಧೈರ್ಯದಿಂದ ಮುಂದೆ ಬಂದು ಕೋವಿಶೀಲ್ಡ್ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದರು.
ನಗರಪಾಲಿಕೆ ಸದಸ್ಯ ಆರ್.ಎಲ್. ಶಿವಪ್ರಕಾಶ್, ಆರ್‌ಸಿಎಚ್ ಅಧಿಕಾರಿ ಡಾ| ಮೀನಾಕ್ಷಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.