ಜನೌಷಧ ಕೇಂದ್ರಗಳಿಂದ ಕ್ರಾಂತಿ

­ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧ­! ದೇಶಾದ್ಯಂತ 7500 ಮಳಿಗೆ ­ಬಡವರಿಗೆ ಅನುಕೂಲ

Team Udayavani, Mar 8, 2021, 7:03 PM IST

MP GM siddeswar

ದಾವಣಗೆರೆ: ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷ ಧಗಳನ್ನು ಜನರಿಗೆ ತಲುಪಿಸುವ ಮಹಾತ್ವಾಕಾಂಕ್ಷೆಯೊಂದಿಗೆ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದಿಂದ ಆರಂಭವಾಗಿರುವ ಜನೌಷಧ ಕೇಂದ್ರಗಳು ದೇಶದ ಆರೋಗ್ಯ ವಲಯದಲ್ಲಿ ಮಹತ್ತರವಾದ ಕ್ರಾಂತಿ ಮಾಡಿವೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು,

ಭಾನುವಾರ ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಕೇಂದ್ರಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಭಾರತೀಯ ಜನೌಷಧ  ಕೇಂದ್ರ ದಿವಸ್‌ ಹಾಗೂ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡವರ ಪಾಲಿಗೆ ಅಕ್ಷಯಪಾತ್ರೆಯಂತಿರುವ ಜನೌಷಧ ಕೇಂದ್ರಗಳು ಮೋದಿ ಕಾ ದುಕಾನ್‌ ಎಂದೇ ದೇಶಾದ್ಯಂತ ಖ್ಯಾತಿಯನ್ನು ಪಡೆದಿವೆ ಎಂದು ತಿಳಿಸಿದರು.

ಜನರು ಬಯಸಿದ್ದನ್ನು ನೀಡುವುದಕ್ಕಿಂತ ಜನರಿಗೆ ಅಗತ್ಯವಾಗಿದ್ದನ್ನು ನೀಡಿದಾಗ ಮಾತ್ರ  ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಲು ಸಾಧ್ಯ ಎಂಬುದಕ್ಕೆ ಜನೌಷಧಕೇಂದ್ರಗಳ ಸ್ಥಾಪನೆ  ಸಾರ್ವಕಾಲಿಕ ಉದಾಹರಣೆಯಾಗಿ ನಿಲ್ಲಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

2016 ರ ನವೆಂಬರ್‌ನಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷ ಧ ಪರಿಯೋಜನಾ ಎನ್ನುವ ಹೆಸರಿನಲ್ಲಿ ಪ್ರಾರಂಭವಾದ ಯೋಜನೆಯಡಿ ದೇಶಾದ್ಯಂತ ಇಲ್ಲಿಯವರೆಗೆ 7,499 ಜನೌಷಧ ಕೇಂದ್ರಗಳನ್ನು  ತೆರೆಯಲಾಗಿದೆ. ಕರ್ನಾಟಕದಲ್ಲಿ 846 ಹಾಗೂ ದಾವಣಗೆರೆ ಜಿಲ್ಲೆಯಲ್ಲಿ 19 ಜನೌಷಧ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 7,500 ನೇ ಜನೌಷ ಧ ಕೇಂದ್ರವನ್ನು ಮಾನ್ಯ ಪ್ರಧಾನಮಂತ್ರಿಗಳು ಶಿಲ್ಲಾಂಗ್‌ನಲ್ಲಿ ವೀಡಿಯೋ ಕಾನ್ಫ ರೆನ್ಸ್‌ ಮೂಲಕ ಲೋಕಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಜನೌಷ ಧ ಕೇಂದ್ರಗಳ ಬಗ್ಗೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಮಾ. 1 ರಿಂದ 7 ರವರೆಗೆ ಜನೌಷ ಧ ಸಪ್ತಾಹ ಆಚರಿಸಲಾಗುತ್ತಿದ್ದು, ಮಾ. 7ನ್ನು ಜನೌಷ ಧ ದಿವಸ್‌ ಎಂದು ಆಚರಿಸಲಾಗುತ್ತಿದೆ. 2020-21 ನೇ ಸಾಲಿನಲ್ಲಿ 586 ಕೋಟಿಯಷ್ಟು ವಹಿವಾಟು ಜನೌಷ ಧ ಕೇಂದ್ರಗಳ ಮೂಲಕ ನಡೆದಿದ್ದು ಅಂದಾಜು 3,500 ಕೋಟಿಯಷ್ಟು ಹಣ ಬಡವರಿಗೆ ಉಳಿದಿದೆ ಎಂದರು.

ತೈಲ ಬೆಲೆ ಹಾಗೂ ಸಿಲಿಂಡರ್‌ ಬೆಲೆ ಸ್ವಲ್ಪ ಮಟ್ಟಿಗೆ ಏರಿಕೆಯಾಗಿರುವುದನ್ನು ವಿರೋಧ ಪಕ್ಷದವರು ದೊಡ್ಡ ಸುದ್ದಿ ಮಾಡುತ್ತಿದ್ದಾರೆ. ಆದರೆ, ಕೊರೊನಾ ಸಂಕಷ್ಟದ ಸಮಯದಲ್ಲಿ ದೇಶದ 80 ಕೋಟಿ ಜನರಿಗೆ 4-5 ತಿಂಗಳುಗಳ ಕಾಲ ಉಚಿತ ಪಡಿತರ ಹಾಗೂ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್‌ಗಳನ್ನು ನೀಡಲು ಸಾಕಷ್ಟು ಹಣವನ್ನು ಕೇಂದ್ರ ಸರ್ಕಾರ ಖರ್ಚು ಮಾಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ, ಕೂಲಿ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರ ಖಾತೆಗಳಿಗೆ ಜೀವನ ನಡೆಸಲಿಕ್ಕೆ ಅವರ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಿದೆ. ಸಣ್ಣ ಸಣ್ಣ ಕೈಗಾರಿಕೆಗಳಿಗೆ ಸಬ್ಸಿಡಿ ನೀಡಿ ಕಾಯಕಲ್ಪ ನೀಡಿದೆ. ಸಾಕಷ್ಟು ಹಣ ಖರ್ಚು ಮಾಡಿರುವ ಕೇಂದ್ರ ಸರ್ಕಾರದ ಬಗ್ಗೆ ಸಾರ್ವಜನಿಕರು ಗಮನಹರಿಸಬೇಕು ಎಂದು ಮನವಿ ಮಾಡಿದರು.

ಕೊರೊನಾ ಆರ್ಥಿಕ ಸಂಕಷ್ಟದ ನಡುವೆಯೂ ನಮ್ಮ ದೇಶ ಎಲ್ಲಾ ರೀತಿಯಿಂದಲೂ ಸಮರ್ಥವಾಗಿ  ಹಾಗೂ ಸದೃಢವಾಗಿ ನಿಂತಿರುವು ದಕ್ಕೆ ಕಾರಣ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಂದರು.

ಯು.ಪಿ.ಎ. ಆಡಳಿತದ ಅವ ಧಿಯಲ್ಲಿ ತೈಲಬೆಲೆ ಏರಿಕೆಯಾದಾಗ ಅದನ್ನು ಸರಿದೂಗಿಸುವ ಸಲುವಾಗಿಸುಮಾರು 1.44 ಲಕ್ಷ ಕೋಟಿಯಷ್ಟು ತೈಲ ಬಾಂಡ್‌ ಗಳನ್ನು ಕಂಪನಿಗಳಿಗೆ ವಿತರಿಸಲಾಗಿತ್ತು, ಅದರ ಬಡ್ಡಿ ಹಣ 70 ಸಾವಿರ ಕೋಟಿಯಷ್ಟು ಸೇರಿ ಸುಮಾರು 2 ಲಕ್ಷ ಕೋಟಿಯಷ್ಟು ಹಣವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಂಪನಿಗಳಿಗೆ ಮರುಪಾವತಿ ಮಾಡಿದೆ. ಕೇವಲ ವಿರೋಧ ಪಕ್ಷದಲ್ಲಿದ್ದೇವೆ ಎನ್ನುವ ಕಾರಣಕ್ಕೆ ಸರ್ಕಾರದ ಪ್ರತಿಯೊಂದು ನಡೆಯನ್ನೂ ಟೀಕಿಸುವುದರಲ್ಲಿ ಯಾವುದೇ ಹುರುಳಿರುವುದಿಲ್ಲ, ಸತ್ಯಾಂಶವನ್ನು ಜನರಿಗೆ ತಿಳಿಸುವ ಕೆಲಸವನ್ನು ನಾವು ಮಾಡುತ್ತೇವೆ, ನಿರ್ಧಾರ ಜನರಿಗೆ ಬಿಡುತ್ತೇವೆ ಎಂದು ತಿಳಿಸಿದರು.

ದಾವಣಗೆರೆಯ ರಾಮಕೃಷ್ಣ ಮಿಷನ್‌ನ ತೀರ್ಥಕರಾನಂದ ಸ್ವಾಮಿ, ಶಾಸಕ ಎಸ್‌.ಎ.ರವೀಂದ್ರನಾಥ್‌, ದೊಡ್ಡಬಾತಿ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಸಿ.ಬಿ. ಹನುಮಂತಪ್ಪ, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಸಂಗನಗೌಡ್ರು, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ರೇಣುಕಮ್ಮ ಕರಿಬಸಪ್ಪ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.