ಎನ್.ಕೊಟ್ರೇಶ್ ಜೆಡಿಎಸ್ ಹುರಿಯಾಳು
Team Udayavani, Apr 24, 2018, 4:33 PM IST
ಹರಪನಹಳ್ಳಿ: ಕಳೆದ ಹತ್ತು ವರ್ಷದಿಂದ ಹರಪನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದ ನನಗೆ ಪಕ್ಷದವರು ಮೋಸ ಮಾಡಿದರು. ಹಾಗಾಗಿ ರೈತಪರವಾದ ಜಾತ್ಯತೀತ ಜನತಾದಳಕ್ಕೆ ನಾನು ಸೇರ್ಪಡೆಗೊಂಡಿದ್ದೇನೆ ಎಂದು ಸ್ಥಳೀಯ ಮುಖಂಡ ಅರಸೀಕೆರೆ ಎನ್.ಕೊಟ್ರೇಶ್ ತಿಳಿಸಿದರು.
ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಷ್ಠಾವಂತ ಕಾರ್ಯಕರ್ತನಾಗಿ ಬಿಜೆಪಿಗೆ ತನುಮನ ಅರ್ಪಿಸಿದ್ದೆ. ತಾಲೂಕಿನ ಜನರ ಆಶಯದಂತೆ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿದ್ದೆವು. ಕೊನೆ ಕ್ಷಣದವರಿಗೂ ನೀವೇ ಕ್ಷೇತ್ರದ ಅಭ್ಯರ್ಥಿ ಎಂದು ಹೇಳುತ್ತಾ ಪಕ್ಷ ಸಂಘಟನೆಗೆ ನೀವು ಒತ್ತು ನೀಡಿ ಎಂದು ನಾನು ಹಾಗೂ ನನ್ನ ನಂಬಿದ ಕಾರ್ಯಕರ್ತರಿಗೆ ದ್ರೋಹ ಬಗೆದರು ಎಂದರು.
ಏ. 24ರಂದು ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ಹರಿಹರ ಶಾಸಕ ಎಚ್.ಎಸ್. ಶಿವಶಂಕರ, ಜೆಡಿಎಸ್ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಜೆಡಿಎಸ್ ಮುಖಂಡ ಪಾಟೀಲ ಬೆಟ್ಟನಗೌಡ ಮಾತನಾಡಿ, ಜೆಡಿಎಸ್ ಪಕ್ಷದ ದೃಷ್ಟಿಯಿಂದ ತಾಲೂಕಿಗೆ ಇಂದು ಸುದಿನ. ತಾಲೂಕಿಗೆ ಒಳ್ಳೆಯ ಆಡಳಿತ ಹಾಗೂ ಸ್ಥಳೀಯರಿಗೆ ಆದ್ಯತೆ ನೀಡುವ ಉದ್ದೇಶ ಪಕ್ಷದ್ದಾಗಿದೆ. ಜೆಡಿಎಸ್ ಅಭ್ಯರ್ಥಿ ಆಗಿರುವ ರೈತ ನಾಯಕ ಎನ್.ಕೊಟ್ರೇಶ್ ಅವರನ್ನು ಗೆಲ್ಲಿಸುವ ಜವಾಬ್ದಾರಿ ಪಕ್ಷದ ಮುಖಂಡರು, ಕಾರ್ಯಕರ್ತರ ಮೇಲಿದೆ ಎಂದರು.
ಜಿಪಂ ಸದಸ್ಯ ಡಾ| ಮಂಜುನಾಥ್ ಉತ್ತಂಗಿ, ಮುಖಂಡರಾದ ಸಾಸ್ವಿಹಳ್ಳಿ ಚನ್ನಬಸವನಗೌಡ, ನಿಚ್ಚವನಹಳ್ಳಿ ಪರಶುರಾಮಪ್ಪ, ಶಿಕಾರಿ ಬಾಲಪ್ಪ, ಶಿರಹಟ್ಟಿ ದಂಡ್ಯೆಪ್ಪ, ವೆಂಕಟೇಶರೆಡ್ಡಿ, ಮೈದೂರು ರಾಮಪ್ಪ, ವಕೀಲ ಜಗದಪ್ಪ, ಕಂಚಿಕೆರೆ ಕೆಂಚಪ್ಪ, ನೇಮ್ಯನಾಯ್ಕ, ಅರಸೀಕೆರೆ ಅಜೇಯ, ತೆಲಗಿ ಮಂಜುನಾಥ, ಡಂಕಿ ಇಮ್ರಾನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.