ನರೇಗಾ ಬಿಲ್‌ ಪಡೆದರೆ ಗ್ರಾಪಂ ಸದಸ್ಯತ್ವವೇ ರದ್ದು !

ಗ್ರಾಪಂ ಸದಸ್ಯರ ಸಂಬಂಧಿಗಳ ಹೆಸರಲ್ಲಿ ನಲ್ಲೂ ಬಿಲ್‌ ಪಡೆಯುವಂತಿಲ್ಲ

Team Udayavani, Mar 1, 2022, 7:00 AM IST

ನರೇಗಾ ಬಿಲ್‌ ಪಡೆದರೆ ಗ್ರಾಪಂ ಸದಸ್ಯತ್ವವೇ ರದ್ದು !

ದಾವಣಗೆರೆ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಸದಸ್ಯರು ಸಾಮಗ್ರಿ ಸರಬರಾಜು ಮಾಡಿ ಬಿಲ್‌ ಪಡೆದರೆ ಅಂಥವರು ಗ್ರಾಪಂ ಸದಸ್ಯತ್ವ ಕಳೆದುಕೊಳ್ಳಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಎಚ್ಚರಿಕೆ ನೀಡಿದೆ.

ನರೇಗಾ ಯೋಜನೆಯ ಭ್ರಷ್ಟಾಚಾರ ತಡೆಗೆ ಕೇಂದ್ರ ಸರ್ಕಾರ, ಯೋಜನೆ ಅನುಷ್ಠಾನಗೊಳ್ಳುವ ರಾಜ್ಯಗಳ ಶೇ.80ರಷ್ಟು ಜಿಲ್ಲೆಗಳಲ್ಲಿ ಓಂಬುಡ್ಸ್‌ಮನ್‌ ನೇಮಕವನ್ನು ಕಡ್ಡಾಯಗೊಳಿಸಿದೆ. ಇದರ ಬೆನ್ನಲ್ಲೇ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಆಯುಕ್ತರು, ನರೇಗಾ ಯೋಜನೆಯಡಿ ಸಾಮಗ್ರಿ ಪೂರೈಕೆ ಮಾಡಿ ಬಿಲ್‌ ಪಡೆಯದಂತೆ ಗ್ರಾಪಂ ಸದಸ್ಯರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಫೆ.25ರಂದು ಹೊರಡಿಸಿದ ಸುತ್ತೋಲೆ ಮಹತ್ವ ಪಡೆದುಕೊಂಡಿದೆ.

ಎಚ್ಚರಿಕೆ ಗಂಟೆ
ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993(12ಎಚ್‌) ಮತ್ತು (43-ಎ (ವಿ) ಅಡಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನಾದವನು ಗ್ರಾಪಂ ಆದೇಶದ ಮೂಲಕ ಮಾಡಿದ ಯಾವುದೇ ಕಾಮಗಾರಿಯಲ್ಲಿ ಅಥವಾ ಗ್ರಾಪಂ ಮೂಲಕ ಮಾಡಿಕೊಂಡ ಸರಕು ಪೂರೈಕೆ ಸೇರಿದಂತೆ ಯಾವುದೇ ಕರಾರು ಪಡೆದುಕೊಂಡರೆ ಅಥವಾ ನಿರ್ವಹಿಸಿದರೆ ಇಲ್ಲವೇ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪ್ರತಿನಿಧಿ- ಪಾಲುದಾರನಾದರೆ ಗ್ರಾಪಂ ಸದಸ್ಯನಾಗಲು ಅನರ್ಹನಾಗುತ್ತಾನೆ. ಈ ಕಾನೂನು ಮೊದಲಿನಿಂದಲೂ ಇದೆಯಾದರೂ ನರೇಗಾ ಯೋಜನೆ ಅನುಷ್ಠಾನದಲ್ಲಿ ಇದರ ಪಾಲನೆ ಸಮರ್ಪಕವಾಗಿ ಆಗುತ್ತಿಲ್ಲ. ಮುಖ್ಯವಾಗಿ ನರೇಗಾ ಯೋಜನೆಯ ಕಾಮಗಾರಿಯನ್ನೇ ದೃಷ್ಟಿಯಲ್ಲಿರಿಸಿಕೊಂಡು ಇಲಾಖೆ ಹೊರಡಿಸಿದ ಈ ಸೂಚನೆ ಗ್ರಾಪಂ ಸದಸ್ಯರಿಗೆ ಎಚ್ಚರಿಕೆ ಗಂಟೆಯಾಗಿದೆ.

ಯಾರ ಸದಸ್ಯತ್ವ ರದ್ದು?
ಪಂಚಾಯಿತಿಯ ಯಾವುದೇ ಕಾಮಗಾರಿ ಕಾರ್ಯಗತಗೊಳಿಸುವಾಗ, ಕರಾರು ಸಂಬಂಧದ ಅಥವಾ ಕಾಮಗಾರಿಗೆ ಸಂಬಂಧಿಸಿದ ಯಾವುದೇ ವ್ಯವಹಾರದಲ್ಲಿ ಗ್ರಾಪಂ ಸದಸ್ಯ ಇಲ್ಲವೇ ಆತನ ಹತ್ತಿರದ ಸಂಬಂಧಿಗಳು (ಪತಿ, ಪತ್ನಿ, ಮಗ, ಮಲಮಗ, ಮಲಮಗಳು ಅಥವಾ ಸದಸ್ಯನ ಮೇಲೆ ಸಂಪೂರ್ಣ ಅವಲಂಬಿತನಾಗಿರುವ, ರಕ್ತ ಸಂಬಂಧವಾಗಿರಲಿ ಅಥವಾ ವಿವಾಹದಿಂದಾಗಲಿ ಸಂಬಂಧಿಸಿದ ಯಾವುದೇ ಇತರ ವ್ಯಕ್ತಿ ) ಕಂಡು ಬಂದರೆ ಅವನಿಗೆ ಅಹವಾಲು ಹೇಳಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಬಳಿಕ ವಿಚಾರಣೆ ನಡೆಸಿ ಸದಸ್ಯತ್ವದಿಂದ ತೆಗೆದುಹಾಕುವುದು ಸೂಕ್ತ ಎಂದು ನಿರ್ಧರಿಸಬಹುದಾಗಿದೆ.

ಕೂಲಿಕಾರ್ಮಿಕರಾಗಬಹುದು
ಗ್ರಾಪಂ ಸದಸ್ಯರು ನರೇಗಾ ಯೋಜನೆಯಡಿ ಸಾಮಗ್ರಿ ಪೂರೈಕೆದಾರರಾಗಿ, ಪಾಲುದಾರರಾಗಿ, ಪ್ರತಿನಿಧಿಯಾಗಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ನರೇಗಾ ಅಧಿನಿಯಮದ ಸೆಕ್ಷನ್‌ 3ರನ್ವಯ ಉದ್ಯೋಗಚೀಟಿ ಪಡೆದ ಯಾವುದೇ ಗ್ರಾಮೀಣ ಪ್ರದೇಶದ ವಯಸ್ಕ ಸದಸ್ಯರು ಅಕುಶಲ ಕೂಲಿಕಾರ್ಮಿಕರಾಗಿ ಕೆಲಸ ನಿರ್ವಹಿಸಬಹುದಾಗಿದೆ. ಜತೆಗೆ ನರೇಗಾ ಯೋಜನೆಯ ವೈಯಕ್ತಿಕ ಸೌಲಭ್ಯ ಸಹ ಪಡೆಯಬಹುದಾಗಿದ್ದು, ಯೋಜನೆಯ ಅಧಿನಿಯಮದಂತೆ ಆತ ಅರ್ಹ ಫಲಾನುಭವಿ ಆಗಿರಬೇಕಾಗುತ್ತದೆ.

ಗ್ರಾಪಂ ಸದಸ್ಯರು ನರೇಗಾ ಮಾತ್ರವಲ್ಲ, ಪಂಚಾಯಿತಿಯಿಂದ ನಡೆಯುವ ಯಾವುದೇ ಕಾಮಗಾರಿಗಳಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪಾಲುದಾರ, ಪ್ರತಿನಿಧಿ ಅಥವಾ ಕರಾರಿಗೊಳಪಟ್ಟು ಕೆಲಸ ಮಾಡುವಂತಿಲ್ಲ. ಹಾಗೇನಾದರೂ ಮಾಡಿದರೆ ಸದಸ್ಯತ್ವ ರದ್ದಾಗುತ್ತದೆ.
– ಬಿ. ಆನಂದ್‌, ಉಪಕಾರ್ಯದರ್ಶಿ, ದಾವಣಗೆರೆ ಜಿಪಂ

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.