ಡಿ.14 ರಂದು ರಾಷ್ಟ್ರೀಯ ಲೋಕ್ ಅದಾಲತ್: ನ್ಯಾ| ಕುಲಕರ್ಣಿ
Team Udayavani, Nov 26, 2019, 11:28 AM IST
ದಾವಣಗೆರೆ: ರಾಷ್ಟ್ರೀಯ ಲೋಕ್ ಅದಾಲತ್ ಡಿ.14 ರಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಅಂಬಾದಾಸ್ ಕುಲಕರ್ಣಿ ಜಿ ತಿಳಿಸಿದ್ದಾರೆ.
ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣ, ಚೆಕ್ ಬೌನ್ಸ್, ಮೋಟಾರ್ ವಾಹನ ಅಪಘಾತ ಸಂಬಂಧವಾಗಿ ಪರಿಹಾರ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದ, ಕೌಟುಂಬಿಕ ನ್ಯಾಯಾಲಯದ ಪ್ರಕರಣ, ಬ್ಯಾಂಕ್ ಹಣ ವಸೂಲಾತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡು ಶೀಘ್ರ ಪರಿಹಾರ ಪಡೆಯಲು ಲೋಕ ಅದಾಲತ್ ಉತ್ತಮ ಅವಕಾಶ. ಜಿಲ್ಲೆಯ ನಾಗರಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಕೌಟುಂಬಿಕ ಪ್ರಕರಣ ಸೇರಿದಂತೆ ಯಾವುದೇ ರಾಜೀ ಪ್ರಕರಣಗಳಲ್ಲಿ ಕಕ್ಷಿದಾರನ ವಿರುದ್ಧ ತೀರ್ಪು ನೀಡಲಾಗುವುದಿಲ್ಲ. ಕೊಲೆ, ದರೋಡೆ, ಫೋಕ್ಸೋ, ಅಟ್ರಾಸಿಟಿ ಸೇರಿದಂತೆ ಘೋರ ಕ್ರಿಮಿನಲ್ ಪ್ರಕರಣಗಳು ಅದಾಲತ್ ವ್ಯಾಪ್ತಿಗೆ ಬರುವುದಿಲ್ಲ. ರಾಜೀ ಸಂಧಾನ ಮೂಲಕ ಅರೆ ಕ್ರಿಮಿನಲ್ ಮತ್ತು ಅರೆ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು. ರಾಜೀ ಸಂಧಾನದಿಂದ ಕಕ್ಷಿದಾರರು ಹಾಗೂ ನ್ಯಾಯಾಲಯದ ಸಮಯ, ಹಣ ಉಳಿತಾಯ ಆಗುತ್ತದೆ. ಕಕ್ಷಿದಾರ ನ್ಯಾಯಾಲಯದಲ್ಲಿ ದಾವೆಹೂಡುವಾಗ ಪಾವತಿಸಿದ ಪೂರ್ಣ ಶುಲ್ಕವನ್ನು ರಾಜೀ ಆದ ನಂತರ ಮರು ಪಾವತಿಸಲಾಗುವುದು ಹಾಗೂ ಇಬ್ಬರೂ ದ್ವೇಷ ಮರೆತು ಅನ್ಯೋನ್ಯವಾಗಿ ಇರುವ ಅವಕಾಶ ದೊರೆಯುತ್ತದೆ ಎಂದು ತಿಳಿಸಿದರು.
ಡಿ.14 ರಂದು ಎರಡನೇ ಶನಿವಾರವಾಗಿದ್ದು,ಬೇರೆ ಯಾವುದೇ ಕಲಾಪಗಳು ನಡೆಯದೇ ಸಂಪೂರ್ಣವಾಗಿ ಲೋಕ ಅದಾಲತ್ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ಕಲಾಪ ನಡೆಸುವರು. ತಾಲೂಕು ಮಟ್ಟದಲ್ಲೂ ಅದಾಲತ್ ನಡೆಯಲಿದೆ. ನ್ಯಾಯಾಧೀಶರೊಂದಿಗೆ ವಕೀಲರು ಮತ್ತು ಕಕ್ಷಿದಾರರೂ ಕಲಾಪದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಲೋಕ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಕಡಿಮೆ ಇದ್ದು, ಮಾಧ್ಯಮದ ಮೂಲಕ ಹೆಚ್ಚಿನ ಪ್ರಚಾರ ಮತ್ತು ಮಾಹಿತಿ ನೀಡುವ ಮೂಲಕ ಅರಿವನ್ನು ಹೆಚ್ಚಿಸಬೇಕು. ಇದೇ ನ. 30 ರಂದು ತಾವು ನಿವೃತ್ತಿ ಹೊಂದಲಿದ್ದು, ಸಣ್ಣ ಪುಟ್ಟ ಪ್ರಕರಣಗಳ ಕುರಿತು ರಾಜೀ ಸಂಧಾನದ ಮೂಲಕ ವ್ಯಾಜ್ಯ ಪರಿಹರಿಸಿಕೊಳ್ಳುವುದರಿಂದ ನ್ಯಾಯಾಲಯಕ್ಕೆ ಬರುವ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್.ಬಡಿಗೇರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್ .ಟಿ.ಮಂಜುನಾಥ್, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್.ಅರುಣ್ ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.