ದಾವಣಗೆರೆಯ ಸಾವನ್ನಪ್ಪಿದ ಶಂಕಿತ ಮಹಿಳೆಗೆ ಕೋವಿಡ್-19 ಸೋಂಕು ಇರಲಿಲ್ಲ: ಜಿಲ್ಲಾಧಿಕಾರಿ
Team Udayavani, Mar 21, 2020, 11:57 AM IST
ದಾವಣಗೆರೆ: ಶುಕ್ರವಾರ ರಾತ್ರಿ ಸಾವನ್ನಪ್ಪಿದ ಕೋವಿಡ್-19 ಶಂಕಿತ ಮಹಿಳೆಗೆ ಸೋಂಕು ಇರಲಿಲ್ಲ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟಪಡಿಸಿದ್ದಾರೆ.
ಕೇರಳದಿಂದ ಬಂದಿದ್ದ 56 ವರ್ಷದ ಮಹಿಳೆ ಶುಕ್ರವಾರ ರಾತ್ರಿ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಮಹಿಳೆ ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿತ್ತು.
ಮಹಿಳೆಯ ರಕ್ತ ಹಾಗೂ ಗಂಟಲು ದ್ರವ ಸಂಗ್ರಸಿ ಹಾಸನಕ್ಕೆ ಕಳುಹಿಸಲಾಗಿತ್ತು. ಇಂದು ಬೆಳಿಗ್ಗೆ ವರದಿ ಬಂದಿದ್ದು ಸಾವನ್ನಪ್ಪಿದ ಮಹಿಳೆಗೆ ಕೋವಿಡ್-19 ಸೋಂಕು ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ಧಾರೆ.
ಈ ಮಹಿಳೆಗೆ ಆರೋಗ್ಯ ಸಮಸ್ಯೆ ಇತ್ತು. ಇದೇ ಕಾರಣಕ್ಕೆ ಖಾಸಗಿ ಆಸ್ಪತ್ರೆಯ ವಿಶೇಷ ವಾರ್ಡನಲ್ಲಿ ಇಡಲಾಗಿತ್ತು. ಉಸಿರಾಟದ ತೊಂದರೆ ಹಾಗೂ ಬಿಪಿ ಇತ್ತು.ರಕ್ತದೊತ್ತಡದಲ್ಲಿ ವ್ಯತ್ಯಯವಾಗಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.