Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Team Udayavani, May 1, 2024, 10:10 PM IST
ದಾವಣಗೆರೆ : ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ನೌಕರನನ್ನು ಅಮಾನತು ಮಾಡಲಾಗಿದೆ.
ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನೀಯರ್ ಕಣವಪ್ಪ ಮತ್ತು ನ್ಯಾಮತಿ ತಾಲೂಕು ಯರಗನಾಳ್ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕೇಶ್ ನಾಯ್ಕ ಅಮಾನತು ಆದವರು.
ದಾವಣಗೆರೆ, ಶಿವಮೊಗ್ಗದ ಅಂತರ್ ಜಿಲ್ಲಾ ಚೆಕ್‌ಪೋಸ್ಟ್ ಆದ ಜೀನಹಳ್ಳಿ ಚೆಕ್‌ಪೋಸ್ಟ್‌ಗೆ ಈ ಅಧಿಕಾರಿ, ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ದಾವಣಗೆರೆ ಕ್ಷೇತ್ರಕ್ಕೆ ಆಯೋಗದಿಂದ ನೇಮಕವಾಗಿರುವ ವಿಶೇಷ ವೆಚ್ಚ ವೀಕ್ಷಕಿ ಪ್ರತಿಭಾಸಿಂಗ್ ಮತ್ತು ಹೊನ್ನಾಳಿ ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಅಭಿಷೇಕ್ ಅವರು ಅನಿರೀಕ್ಷಿತವಾಗಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದಾಗ ಚೆಕ್‌ಪೋಸ್ಟ್‌ನ ಕರ್ತವ್ಯದಲ್ಲಿ ಯಾರೂ ಇರಲಿಲ್ಲ. ಈ ಬಗ್ಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದರೂ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ.
ಚುನಾವಣಾ ಕರ್ತವ್ಯ ನಿರ್ಲಕ್ಷ್ಯ ತೋರಿದ ನೌಕರರ ಮೇಲೆ ಪ್ರಜಾ ಪ್ರಾತಿನಿಧ್ಯಕಾಯ್ದೆ 1951 ರ 134 ನಿಯಮದನ್ವಯ ಹಾಗೂ ಸಿಸಿಎ ನಿಯಮ 1957 ರ ನಿಯಮ 10(1)(ಡಿ) ರನ್ವಯ ಅಮಾನತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ: WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.