ತುರ್ತು ಸಹಾಯಕ್ಕೆ ಹೊಸ ವ್ಯವಸ್ಥೆ

ಕೇಂದ್ರ ಸರ್ಕಾರದ ಒಂದೇ ದೇಶ ಒಂದೇ ತುರ್ತು ಕರೆ ಸಂಖ್ಯೆ 112 ಯೋಜನೆಯಡಿ ಜಾರಿ

Team Udayavani, Oct 4, 2020, 4:41 PM IST

ತುರ್ತು ಸಹಾಯಕ್ಕೆ  ಹೊಸ ವ್ಯವಸ್ಥೆ

ದಾವಣಗೆರೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ”ಒಂದೇ ದೇಶ ಒಂದೇ ತುರ್ತು ಕರೆ ಸಂಖ್ಯೆ-112′ ನೂತನ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಶೀಘ್ರದಲ್ಲೇ ಈ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ದಾವಣಗೆರೆ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಈ ತುರ್ತು ಸ್ಪಂದನ ಸಹಾಯ ವ್ಯವಸ್ಥೆ (ಇಆರ್‌ಎಸ್‌ಎಸ್‌-ಎಮರ್ಜೆನ್ಸಿ ರೆಸ್ಪಾನ್ಸ್‌ ಸಪೋರ್ಟ್‌ ಸಿಸ್ಟಮ್‌) ಯೋಜನೆಗಾಗಿ 3 ಜಿಲ್ಲೆಗಳಿಗೆ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಹೊಂದಿರುವ 15 ಹೊಸ ವಾಹನಗಳನ್ನು ಈಗಾಗಲೇ ನೀಡಲಾಗಿದೆ. ಈ ಕಾರ್ಯಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಮನ್ವಯ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ.

ಏನಿದು ವ್ಯವಸ್ಥೆ?: ಅಪರಾಧ, ದುರಂತ, ಅವಘಡ, ವಿಪತ್ತು ಸೇರಿದಂತೆ ಇನ್ನಿತರ ಸಮಸ್ಯೆಯಲ್ಲಿ ಸಿಲುಕಿದವರು ಯಾವ ಮೂಲೆಯಲ್ಲಿದ್ದರೂ ಅತಿ ಶೀಘ್ರದಲ್ಲಿ ಪೊಲೀಸ್‌ ಸಂಪರ್ಕದ ಮೂಲಕ ಸಹಾಯ ಮಾಡುವ ನೂತನ ವ್ಯವಸ್ಥೆ ಇದಾಗಿದೆ. ತುರ್ತು ಕರೆಯಾಗಿ ಇಡೀ ದೇಶಕ್ಕೆ 112 ಒಂದೇ ಸಂಖ್ಯೆ ಮಾಡಲಾಗಿದೆ. ಇನ್ನು ಮುಂದೆ ಈ ಹಿಂದಿನಂತೆ ಪೊಲೀಸ್‌ ಸಹಾಯಕ್ಕಾಗಿ 100 ಸಂಖ್ಯೆಗೆ ಕರೆ ಮಾಡಿದರೂ ಅದು ತುರ್ತು ಸ್ಪಂದನ ಸಹಾಯ ಕೇಂದ್ರಕ್ಕೆ ತಲುಪುವ ವ್ಯವಸ್ಥೆ ಮಾಡಲಾಗಿದ್ದು, 24/7 ತುರ್ತು ಪ್ರತಿಕ್ರಿಯೆ ಬೆಂಬಲ ಸೇವೆ ಲಭಿಸಲಿದೆ.

ಕಾರ್ಯ ವೈಖರಿ ಹೇಗೆ?: ನೂತನ ತುರ್ತು ಸ್ಪಂದನ ಸಹಾಯ ವ್ಯವಸ್ಥೆಯಲ್ಲಿ ಸಾರ್ವಜನಿಕರು 112ಗೆ ಮಾಡುವ ಕರೆಗಳನ್ನು ಸ್ವೀಕರಿಸಲು ಬೆಂಗಳೂರಿನಲ್ಲಿ ರಾಜ್ಯ ತುರ್ತು ಪ್ರತಿಕ್ರಿಯೆ ಕೇಂದ್ರದ ಸೇವಾ ಸಮನ್ವಯ ಘಟಕ ಆರಂಭಿಸಲಾಗಿದೆ. ಈ ಘಟಕ ಸಾರ್ವಜನಿಕರಿಂದ ಬಂದ ಕರೆಗಳನ್ನು ಸ್ವೀಕರಿಸುತ್ತದೆ. ಹೀಗೆ ಕರೆ ಸ್ವೀಕರಿಸುವಾಗಲೇ ಕರೆ ಎಲ್ಲಿಂದ ಬಂತು, ಎಷ್ಟು ಸಮಯಕ್ಕೆ ಬಂತು ಎಂಬ ಮಾಹಿತಿ ಕರೆ ಬಂದ ಸ್ಥಳದ ಉಪಗ್ರಹ ಆಧಾರಿತ ಅಕ್ಷಾಂಶ-ರೇಖಾಂಶ ಸಹಿತ ದಾಖಲಾಗುತ್ತದೆ. ಅಂದರೆ ಸ್ವಯಂ ಚಾಲಿತ ಸ್ಥಳ ಗುರುತಿಸುವಿಕೆ ಕಾರ್ಯ ಇಲ್ಲಿ ನಡೆಯುತ್ತದೆ. ಬಳಿಕ ಸಂಬಂಧಪಟ್ಟ ಪ್ರದೇಶಕ್ಕೆ ಹತ್ತಿರದಲ್ಲಿ ನಿಂತಿರುವ ವಾಹನಗಳಿಗೆ ದೂರು ಕೊಟ್ಟವರ ಪ್ರದೇಶದ ಅಕ್ಷಾಂಶ-ರೇಖಾಂಶ ಸಹಿತ ಕರೆ ಬರುತ್ತದೆ. ವಾಹನದಲ್ಲಿ ಅಳವಡಿಸಿರುವ ಸ್ಟಾರ್ಟ್‌ ಗುಂಡಿ ಒತ್ತಿದರೆ ಅದು ವಾಹನ ಎಲ್ಲಿ ಹೋಗಬೇಕು ಎಂದು ಡಿಜಿಟಲ್‌ ಮಾರ್ಗಸೂಚಿಯನ್ನು ತೋರಿಸುತ್ತದೆ. ಆ ಪ್ರಕಾರವೇ ಚಾಲಕ ವಾಹನ ಓಡಿಸಿ ನಿಗದಿತ ಸ್ಥಳ ತಲುಪಬೇಕಾಗುತ್ತದೆ. ಅಲ್ಲಿ ಹೋದ ಮೇಲೆ ಸ್ಟಾಪ್‌ ಗುಂಡಿ ಒತ್ತಬೇಕಾಗುತ್ತದೆ.

ತುರ್ತು ಸ್ಪಂದನ ಸಹಾಯದ ವಾಹನ ಎಲ್ಲಿ ಹೋಗುತ್ತಿದೆ, ಎಷ್ಟು ಹೊತ್ತಿಗೆ ಬಿಟ್ಟಿದೆ, ಎಷ್ಟು ಹೊತ್ತಿಗೆ ತಲುಪಿದೆ ಸೇರಿದಂತೆ ಸಮಗ್ರ ಮಾಹಿತಿ ಕೇಂದ್ರ ಕಚೇರಿಯ ಸರ್ವರ್‌ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್‌ನಲ್ಲಿ ದಾಖಲಾಗುತ್ತದೆ. ಒಂದು ವೇಳೆ ನಿಗದಿತ ಸ್ಥಳಕ್ಕೆ ಹೋಗುವುದು ವಿಳಂಬವಾದರೆ ಅಧಿಕಾರಿಗಳಿಗೆ ಕಾರಣ ಸಹಿತ ತಿಳಿಸಬೇಕಾಗುತ್ತದೆ. ಇಲ್ಲಿ ಯಾವುದೇ ಬರವಣಿಗೆ ಇರುವುದಿಲ್ಲ. ಎಲ್ಲವೂ ತಂತ್ರಜ್ಞಾನ ಆಧಾರಿತವಾಗಿ ನಿರ್ವಹಿಸಲ್ಪಡುತ್ತದೆ. ಯಾವುದೇ ದಾಖಲೆ ತಿದ್ದಲು, ಅಳಿಸಲು ಆಗದು ಎಂಬುದು ವಿಶೇಷ.

ತುರ್ತು ಸ್ಪಂದನ ಸಹಾಯ ವ್ಯವಸ್ಥೆಯಲ್ಲಿ ಜಿಪಿಎಸ್‌ ತಂತ್ರಜ್ಞಾನ ಆಧಾರಿತ ವಾಹನಗಳು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಲಿವೆ. ಈ ವಾಹನಗಳನ್ನು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ನಿಲ್ಲಿಸಿರುತ್ತಾರೆ. ಈ ವಿಶೇಷ ವಾಹನಗಳಲ್ಲಿ ಒಬ್ಬ ಸಹಾಯಕ ಉಪನಿರೀಕ್ಷಕರು, ಒಬ್ಬ ಪೊಲೀಸ್‌ ಹಾಗೂ ಚಾಲಕ ಇರುತ್ತಾರೆ. ವಾಹನಗಳಿಗೆ ಕರೆ ಬರುತ್ತಿದ್ದಂತೆ ವಾಹನವು ಡಿಜಿಟಲ್‌ ನಕ್ಷೆ ಆಧರಿಸಿ ನಿಗದಿತ ಸ್ಥಳದಲ್ಲಿ ಶರವೇಗದಲ್ಲಿ ತಲುಪುತ್ತದೆ. ಈ ಕರೆಯಿಂದ ಸದ್ಯ ಪೊಲೀಸ್‌, ಅಗ್ನಿಶಾಮಕ ಸೇವೆ ನೀಡಲು ಉದ್ದೇಶಿಸಲಾಗಿದ್ದು ಮುಂದಿನ ದಿನಗಳಲ್ಲಿ ವೈದ್ಯಕೀಯ ತ್ವರಿತ ಸಹಾಯಕ್ಕೂ ಇದನ್ನು ಬಳಕೆ ಮಾಡುವ ಗುರಿ ಹೊಂದಲಾಗಿದೆ.

ಸಾರ್ವಜನಿಕರಿಗೆ ಹೇಗೆ ಉಪಯೋಗ? : ತುರ್ತು ಸ್ಪಂದನ ಸಹಾಯ ವ್ಯವಸ್ಥೆಯ ಸೇವೆಯನ್ನು ನಾಗರಿಕರು ಸಮಸ್ಯೆಯಲ್ಲಿದ್ದಾಗ 112ಗೆ ಕರೆ ಮಾಡುವ ಮೂಲಕ ಪಡೆಯಬಹುದಾಗಿದೆ. ಇಲ್ಲವೇ ಧ್ವನಿ, ಸಂದೇಶ, ಈ ಮೇಲ್‌ 112 ಪೋರ್ಟಲ್‌ ಮತ್ತು ಪ್ಯಾನಿಕ್‌ ಆ್ಯಪ್‌ ಮೂಲಕ ತುರ್ತು ವಿನಂತಿ ಮಾಡಬಹುದಾಗಿದೆ. ಪ್ಯಾನಿಕ್‌ ಅಲರ್ಟ್‌ಗಾಗಿ ಸ್ಮಾರ್ಟ್‌ ಫೋನ್‌ನಲ್ಲಿ ಪವರ್‌ ಬಟನ್‌ ಮೂರು ಅಥವಾ ಐದು ಬಾರಿ ವೇಗವಾಗಿ ಪ್ರಸ್‌ ಮಾಡಬಹುದಾಗಿದೆ ಇಲ್ಲವೇ 5 ಅಥವಾ 9 ಅಂಕೆಯನ್ನು ದೀರ್ಘ‌ ಕಾಲ ಒತ್ತುವ ಮೂಲಕವೂ ವಿನಂತಿಸಬಹುದಾಗಿದೆ. www.ka.ners.in  ಜಾಲತಾಣ, 112 ಇಂಡಿಯಾ ಮೊಬೈಲ್‌ ಆ್ಯಪ್‌ ಮೂಲಕವೂ ವಿನಂತಿಸಬಹುದಾಗಿದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.