ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
Team Udayavani, Apr 16, 2024, 10:35 AM IST
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಸೋಮವಾರ ನಾಮಪತ್ರ ಸಲ್ಲಿಸಿದರು.
ಪತಿ,ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಇತರರೊಡನೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಧಿಕಾರಿ ಡಾ|ಎಂ.ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಡಾ| ಜಿ.ಎಂ.ಸಿದ್ದೇಶ್ವರ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಮುಖಂಡರು ಗಾಯತ್ರಿ ಸಿದ್ದೇಶ್ವರ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ.
ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ನಾನು ಸಂಸದನಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು, ನರೇಂದ್ರ ಮೋದಿಯವರು ಹತ್ತು ವರ್ಷಗಳ ಕಾಲ ಮಾಡಿರುವ ಸಾಧನೆ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಾಧನೆಗಳನ್ನು ನೋಡಿ ದಾವಣಗೆರೆ ಕ್ಷೇತ್ರದ ಜನ ಗಾಯಿತ್ರಿ ಸಿದ್ದೇಶ್ವರ ಅವರನ್ನು ಅತ್ಯಧಿಕ ಮತಗಳಲ್ಲಿ ಆರಿಸಿ, ಲೋಕಸಭೆಗೆ ಕಳುಹಿಸಿಕೊಡಲಿದ್ದಾರೆ. ಗಾಯಿತ್ರಿ ಸಿದ್ದೇಶ್ವರ ಅವರು ಲೋಕಸಭೆ ಪ್ರವೇಶಿಸಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೆಲಸ ಮಾಡುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಲವು ಮಹಾನಗರ ಪಾಲಿಕೆ ಸದಸ್ಯರು ಕಾಂಗ್ರೆಸ್ ಗೆ ಹೋಗಿದ್ದಾರೆ. ಆದರೆ, ಮತದಾರರು ಹೋಗಿಲ್ಲ. ಜನರಿಗೆ ಕಾಂಗ್ರೆಸ್‌ಗೆ ಹೋದವರ ಮೇಲೆ ಸಿಟ್ಟಿದೆ. ನಮಗೆ ಜನ ಹೆಚ್ಚಿನ ಮತಗಳ ನೀಡಲಿದ್ದಾರೆ. ಗುರುಸಿದ್ದನಗೌಡ ಅವರು ವರ್ಷಗಳ ಹಿಂದೆಯೇ ಬಿಜೆಪಿ ಬಿಟ್ಟಿದ್ದರು. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹಾರೈಸಿದರು.
ಈವರೆಗೆ ಏಳು ಲೋಕಸಭಾ ಚುನಾವಣೆ ಮಾಡಿದ್ದೇವೆ. ಒಂದರಲ್ಲಿ ಮಾತ್ರ ಸೋತಿದ್ದೇವೆ. ಈ ಎಂಟನೇ ಚುನಾವಣೆಯಲ್ಲಿ ಸರಳ, ಸುಲಲಿತವಾಗಿ ಗೆಲ್ಲುತ್ತೇವೆ ಎಂದು ತಿಳಿಸಿದರು.
ಏ. 19 ರಂದು ಮತ್ತೂಮ್ಮೆ ನಾಮಪತ್ರ ಸಲ್ಲಿಸಲಾಗುವುದು. ಅಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು, ಚಿತ್ರನಟಿ ಶ್ರುತಿ ಇತರರು ಭಾಗವಹಿಸುವರು. ಅದ್ದೂರಿ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪುತ್ರರಾದ ಜಿ.ಎಸ್. ಅನಿತ್ ಕುಮಾರ್, ಜಿ.ಎಲ್. ರಾಜೀವ್, ಪುತ್ರಿ ಜಿ.ಎಸ್. ಅಶ್ವಿನಿ ಶ್ರೀನಿವಾಸ್, ಯಶವಂತ ರಾವ್ ಜಾಧವ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ನಾಗಪ್ಪ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೆಬಾಳು, ಸುರೇಶ್ ಗಂಡಗಾಳೆ ಇತರರು ಇದ್ದರು.
ಕ್ಷೇತ್ರ ದಲ್ಲಿ ಜನರಿಂದ ಉತ್ತಮ ಸ್ಪಂದನೆ: ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಮಾತನಾಡಿ, ದಾವಣಗೆರೆ ಕ್ಷೇತ್ರದ ಜನರ ಸ್ಪಂದನೆ ತುಂಬಾ ಚೆನ್ನಾಗಿದೆ. ಎಲ್ಲ ಕಡೆ ತಮ್ಮನ್ನು ತಾಯಿ, ಮಗಳು, ಅಕ್ಕ, ತಂಗಿಯಂತೆ ಬಹಳ ಪ್ರೀತಿಯಿಂದ ಕಾಣುತ್ತಿದ್ದಾರೆ. ಚುನಾವಣೆ ನನಗೇನು ಹೊಸದಲ್ಲ. ಕಳೆದ ಮೂವತ್ತು ವರ್ಷಗಳಿಂದ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದೆ. ಈಗ ತೆರೆಯ ಮುಂದೆ ಬಂದಿರುವೆ. ಏನೆಲ್ಲ ಕೆಲಸ ಮಾಡಬಹುದು ಎಂದು ಜನ ತುಂಬಾ ಒಳ್ಳೆಯ ರೀತಿಯಲ್ಲಿ ಸ್ಪಂದನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.