ಹೆಸರು ನೋಂದಾಯಿಸಲು ನ.6 ಕೊನೆ ದಿನ


Team Udayavani, Oct 15, 2019, 11:00 AM IST

dg-tdy-2

ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಪದವೀಧರರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ನ. 6 ಕೊನೆಯ ದಿನವಾಗಿದ್ದು, ಅರ್ಹರು ಅಗತ್ಯ ದಾಖಲಾತಿ ಒದಗಿಸಿ, ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ತಿಳಿಸಿದ್ದಾರೆ.

ಸೋಮವಾರ, ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧತೆ ಸಂಬಂಧಿ ಸಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿ, ಪದವೀಧರರ ಕ್ಷೇತ್ರದ ಚುನಾವಣೆಯ ವಿಶೇಷವೆಂದರೆ ಪ್ರತಿ ಚುನಾವಣೆಯಲ್ಲಿ ಪದವೀಧರರು ನೋಂದಾಯಿಸಿಕೊಳ್ಳಬೇಕು.

ಹಿಂದಿನ ಚುನಾವಣೆಯಲ್ಲಿ ನೋಂದಾಯಿಸಿಕೊಂಡಿದ್ದರೆ ಅದು ಈ ಬಾರಿಯ ಚುನಾವಣೆಗೆ ಅನ್ವಯಿಸುವುದಿಲ್ಲ. ಹಾಗಾಗಿ ನವೆಂಬರ್‌ 6ರ ಒಳಗೆ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದರು. ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರುಗಳನ್ನು ಅ.1ರಿಂದ ನೋಂದಣಿ ಮಾಡಲಾಗುತ್ತಿದೆ. ಪದವೀಧರರು ನಮೂನೆ-18 ಅರ್ಜಿ ಭರ್ತಿ ಮಾಡಿ ಸಲ್ಲಿಸಲು ನ.6 ಅಂತಿಮ ದಿನವಾಗಿರುತ್ತದೆ. ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ನ. 19 ಹಾಗೂ ಅಂತಿಮ ಮತದಾರರ ಪರಿಷ್ಕರಣಾ ಪಟ್ಟಿಯನ್ನು ಡಿ. 30ರಂದು ಪ್ರಕಟಿಸಲಾಗುವುದು ಎಂದರು.

ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲೂಕುಗಳು ಒಳಪಡಲಿದ್ದು, ಮತದಾರರ ಪಟ್ಟಿ ಸಿದ್ಧತೆಗೆ ಸಂಬಂಧಿ ಸಿದಂತೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆಗೆ 1-11-2019ಕ್ಕಿಂತ ಮೂರು ವರ್ಷದ ಹಿಂದೆ ಪದವೀಧರರಾಗಿರಬೇಕು. ಪದವಿ ಪೂರೈಸಿದ ಬಗ್ಗೆ ದೃಢೀಕೃತ ಅಂಕಪಟ್ಟಿ, ಸರ್ಕಾರಿ ನೌಕರರಾಗಿದ್ದಲ್ಲಿ ಕಚೇರಿಯ ಪತ್ರಾಂಕಿತ ಅಧಿಕಾರಿಯಿಂದ ಮೂರನೇ ಅನುಸೂಚಿ ನಮೂನೆಯನ್ನು ದೃಢೀಕರಿಸಿದ ಪತ್ರ ಹಾಗೂ ಸ್ಥಳೀಯ ನಿವಾಸಿ ಬಗ್ಗೆ ದಾಖಲಾತಿ ಪತ್ರ ಸಲ್ಲಿಸಬೇಕು. ನಮೂನೆ 18 ಅರ್ಜಿಯನ್ನು ಭರ್ತಿಮಾಡಿ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲೂಕು ಕಚೇರಿಗೆ ಹಾಗೂ ದಾವಣಗೆರೆ ನಗರ ವ್ಯಾಪ್ತಿಯಲ್ಲಿರುವವರು ಮಹಾನಗರಪಾಲಿಕೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.  ಮುಖಂಡರ ದೂರು: ಸಭೆಯಲ್ಲಿದ್ದ ಬಿಜೆಪಿಯ ಪ್ರಭು ಹಾಗೂ ಬಿಎಸ್‌ಪಿಯ ಎಚ್‌. ಮಲ್ಲೇಶ್‌, ಬಿಎಲ್‌ಓ ಗಳು ಮನೆ ಮನೆ ಭೇಟಿ ನೀಡಿ, ಮತದಾರರ ಪಟ್ಟಿ ಸಮರ್ಪಕವಾಗಿ ಪರಿಶೀಲನೆ ನಡೆಸುತ್ತಿಲ್ಲ ಎಂದು ದೂರಿದರು.

ಜಿಲ್ಲಾ ಧಿಕಾರಿಗಳು ಪ್ರತಿಕ್ರಿಯಿಸಿ, ಬಿಎಲ್‌ಓಗಳು ಕಡ್ಡಾಯವಾಗಿ ಮನೆ ಮನೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ನಡೆಸಬೇಕು ಹಾಗೂ ಮತದಾರರ ಪಟ್ಟಿಗೆ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿ ನಮೂನೆಗಳನ್ನು ವಿತರಿಸಬೇಕೆಂದು ಸೂಚಿಸಿದರು.

ಜಿ.ಪಂ. ಸಿಇಓ ಪದ್ಮ ಬಸವಂತಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ, ಡಿಡಿಪಿಐ ಸಿ.ಆರ್‌.ಪರಮೇಶ್ವರಪ್ಪ, ಡಿಡಿಪಿಯು ನಿರಂಜನ, ಚುನಾವಣಾ ತಹಶೀಲ್ದಾರ್‌ ಪ್ರಸಾದ್‌, ಪಾಲಿಕೆಯ ಗದಿಗೇಶ್‌, ಇತರೆ ಅಧಿ ಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.