20ರಂದು ಆವರಗೊಳ್ಳದಲ್ಲಿ ಶಿಲಾಮಂಟಪಕ್ಕೆ ಅಡಿಗಲ್ಲು
Team Udayavani, Jul 18, 2017, 1:41 PM IST
ದಾವಣಗೆರೆ: ಆವರಗೊಳ್ಳ ಪುರವರ್ಗ ಮಠದಲ್ಲಿ ಜು.20 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರ, ಶ್ರೀ ಗುರು ನಿವಾಸ ಶಿಲಾನ್ಯಾಸ, ಉದ್ಘಾಟನೆ ಹಾಗೂ ಅಡಿಗಲ್ಲು ಸಮಾರಂಭ ನಡೆಯಲಿದೆ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
1.5 ಕೋಟಿ ವೆಚ್ಚದಲ್ಲಿ ಶಿಲಾಮಂಟಪ ನಿರ್ಮಿಸಲಾಗುತ್ತಿದೆ. ರಂಭಾಪುರಿ ಜಗದ್ಗುರು ಡಾ| ವೀರಸೋಮೇಶ್ವರ ಶಿವಾಚಾರ್ಯ
ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ನೆರವೇರಿಸುವರು. ಇದೇ ಸಂದರ್ಭದಲ್ಲಿ ಶ್ರೀ ವೀರಭದ್ರೇಶ್ವರ ಸೇವಾ ಸಂಘದ ನೂತನ
ಅಧ್ಯಕ್ಷರಾಗಿ ಬಿ.ಎಂ. ಷಣ್ಮುಖಯ್ಯ ಅಧಿಕಾರ ವಹಿಸಿಕೊಳ್ಳುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗುರುವಾರ ಮಧ್ಯಾಹ್ನ 3ಕ್ಕೆ ನಡೆಯುವ ಸಮಾರಂಭದಲ್ಲಿ ರಂಭಾಪುರಿ ಜಗದ್ಗುರು ಡಾ| ವೀರಸೋಮೇಶ್ವರ ಶಿವಾಚಾರ್ಯ
ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ರಾಮಘಟ್ಟ ಪುರವರ್ಗ ಮಠದ ಶ್ರೀ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ, ಜಕ್ಕಲಿ ಹಿರೇಮಠದ ಶ್ರೀ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಚ್. ಎಸ್. ಶಿವಶಂಕರ್, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಮಾಜಿ ಶಾಸಕ ಡಾ| ಎ.ಎಚ್. ಶಿವಯೋಗಿಸ್ವಾಮಿ ಇತರರು ಭಾಗವಹಿಸುವರು ಎಂದು ತಿಳಿಸಿದರು. ಜು.18ರಿಂದ 22ರ ವರೆಗೆ
ದಾವಣಗೆರೆಯ ರೇಣುಕ ಮಂದಿರದಲ್ಲಿ ನಡೆಯುವ ಇಷ್ಟಲಿಂಗ ಮಹಾಪೂಜೆ, ಜನ ಜಾಗೃತಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವ
ರಂಭಾಪುರಿ ಜಗದ್ಗುರು ಡಾ| ವೀರಸೋಮೇಶ್ವರ ಶಿವಾಚಾರ್ಯ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆವರಗೊಳ್ಳದ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಶ್ರೀ ವೀರಭದ್ರೇಶ್ವರ ಸೇವಾ ಸಂಘದ ನಿಯೋಜಿತ ಅಧ್ಯಕ್ಷ ಬಿ.ಎಂ. ಷಣ್ಮುಖಯ್ಯ, ಬಿ.ಎಂ. ಶಿವಮೂರ್ತಯ್ಯ, ತ್ಯಾವಣಿಗೆ ವೀರಭದ್ರಸ್ವಾಮಿ, ಮಟ್ಟಿಕಲ್ಲು ವೀರಭದ್ರಸ್ವಾಮಿ, ಎಲ್.ಎಂ.ಆರ್. ಬಸವರಾಜಯ್ಯ, ಎಸ್. ವೀರಯ್ಯ, ಬಾತಿ ನಾಗರಾಜ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.