ಬರೀ ಭಾಷಣದ ಬಿಜೆಪಿಯವರಿಂದ ಅಭಿವೃದ್ಧಿ ಆಗದು

Team Udayavani, May 5, 2018, 4:41 PM IST

dvg-2.jpg

ದಾವಣಗೆರೆ: ಬಿಜೆಪಿಯವರಿಗೆ ಜನಸಾಮಾನ್ಯರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲವಾಗಿದ್ದು, ಬರೀ ಭಾಷಣ ಮಾಡಲು ಮಾತ್ರ ಅವರು ಲಾಯಕ್ಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹೇಳಿದ್ದಾರೆ.

ಶುಕ್ರವಾರ ಬೇತೂರು, ರಾಂಪುರ, ನಾಗರಕಟ್ಟೆ, ಪುಟಗನಾಳು ಭಾಗದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ರೈತರಿಗೆ ಪ್ರಥಮ ಬಾರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ.ವರೆಗೆ ಸಾಲ ನೀಡಿದ್ದು ನಮ್ಮ ಸರ್ಕಾರ. ಈ ಸಾಲಿನಲ್ಲಿ ಒಟ್ಟಾರೆ 35 ಲಕ್ಷ ರೈತರಿಗೆ 13.5 ಸಾವಿರ ಕೋಟಿ ರೂ.ಸಾಲ ನೀಡುವ ಗುರಿ ಹೊಂದಿದ್ದು, ಗ್ರಾಮಗಳ ಉದ್ಧಾರ ಮತ್ತು ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಕಾಂಗ್ರೆಸ್‌ ಪಕ್ಷ
ಬೆಂಬಲಿಸಬೇಕು. ಬರೀ ಭಾಷಣ ಮಾಡುವ ಬಿಜೆಪಿಯವರನ್ನಲ್ಲ ಎಂದರು.

ಶೇ.3 ಬಡ್ಡಿ ದರದಲ್ಲಿ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡುವ ಜೊತೆಗೆ ರೈತರು ಸಹಕಾರಿ ಸಂಘಗಳಿಂದ ಪಡೆದಿರುವ 50 ಸಾವಿರ ವರೆಗಿನ ಸಾಲ ಮನ್ನಾ ಮಾಡಲಾಗಿದೆ. 6.2 ಲಕ್ಷ ಎಕರೆ ಪ್ರದೇಶಕ್ಕೆ ಹೊಸದಾಗಿ ನೀರಾವರಿ ಸೌಲಭ್ಯ ಕಲ್ಪಿಸಿದ ಹೆಗ್ಗಳಿಕೆ ನಮ್ಮದಾಗಿದೆ ಎಂದು ಅವರು ತಿಳಿಸಿದರು.

ಮಳೆ ವಂಚಿತ ಪ್ರದೇಶಗಳಿಗೆ ನೀರು, ಕೃಷಿ ಹೊಂಡ ನಿರ್ಮಾಣ, ಕೃಷಿ ಭಾಗ್ಯದಂತಹ ಯೋಜನೆಗಳಿಂದ 1 ಕೋಟಿ
ರೈತರಿಗೆ ಪ್ರಯೋಜನ ಕಲ್ಪಿಸಲಾಗಿದೆ. ಇಂತಹ ಇನ್ನೂ ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವ ನಮ್ಮ ಸರ್ಕಾರ ಕಳೆದ ಚುನಾವಣೆಯಲ್ಲಿ ನೀಡಿದ ಬಹುತೇಕ ಭರವಸೆಗಳನ್ನು ಈಡೇರಿಸುವ ಮೂಲಕ ಜನ ಮೆಚ್ಚುವಂತಹ ಕೆಲಸ ಮಾಡಿದೆ ಎಂದು ಅವರು ಹೇಳಿದರು.

ಬಿಜೆಪಿಯ ಪ್ರಧಾನಿಯಿಂದ ಹಿಡಿದು ಎಲ್ಲ ನಾಯಕರೂ ಬರೀ ಒಣ ಭಾಷಣ ಮಾಡುತ್ತಿದ್ದಾರೆಯೇ ವಿನಃ ರೈತರು ಮತ್ತು
ಜನಸಾಮಾನ್ಯರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ. ಇಂತಹವರನ್ನು ನಂಬದೆ, ಅವರ ಆಮಿಷ, ಸುಳ್ಳು ಮಾತಿನ ಮೋಡಿಗೆ ಒಳಗಾಗದೆ ಸರ್ವರ ಹಿತ ಬಯಸುವಂತಹ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಅವರು ಮನವಿ ಮಾಡಿದರು.

ಮುಖಂಡರಾದ ಬೇತೂರು ಕರಿಬಸಪ್ಪ, ರೇಣುಕಮ್ಮ ಕರಿಬಸಪ್ಪ, ಮುದೇಗೌಡ್ರು ಗಿರೀಶ್‌, ಮಾಗಾನಹಳ್ಳಿ ಪರಶುರಾಮ್‌, ಮೇಕಾ ಮುರುಳಿಕೃಷ್ಣ, ತಾಲ್ಲೂಕು ಪಂಚಾಯತ್‌ ಸದಸ್ಯೆ ಆಶಾ ಮುರುಳಿ, ಅಂಜಿಬಾಬು, ಬೂದಾಳ್‌ ಬಾಬು ಪ್ರಚಾರದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.