ಪ್ರಧಾನಿ ಮೋದಿಯಿಂದ ರೈತರ ಶೋಷಣೆ

Team Udayavani, Oct 21, 2020, 6:45 PM IST

DG-TDY-1

ದಾವಣಗೆರೆ: ಫಸಲ್‌ ಬಿಮಾ ಯೋಜನೆಯಡಿ ರೈತರ ಹಣ ದೋಚಲು ಅವಕಾಶ ಮಾಡಿಕೊಟ್ಟ ಕೀರ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಕಿಸಾನ್‌ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸಚಿನ್‌ ಮೀಗಾ ಟೀಕಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ 2016-17, 2017-18ರ ಭಾಗಶಃ ಕಾಲಾವಧಿಗೆ ತಮ್ಮ ಗೆಳೆಯ ಗೌತಮ್‌ ಅದಾನಿ ನೇತೃತ್ವದ ವಿಮಾ ಕಂಪನಿಗೆ ಫಸಲ್‌ ಬಿಮಾ ಯೋಜನೆ ಹೊಣೆ ನೀಡಿದ್ದರು. ಕೇವಲ 6 ರಿಂದ 8 ತಿಂಗಳಲ್ಲಿ 88 ಸಾವಿರ ಕೋಟಿಯಷ್ಟು ಆ ಕಂಪನಿ ಲಾಭ ಮಾಡಿಕೊಂಡಿತ್ತು. ಇದು ರಫೆಲ್‌ ಹಗರಣಕ್ಕಿಂತಲೂ 100 ಪಟ್ಟು ದೊಡ್ಡ ಹಗರಣ ಎಂದು ಆರೋಪಿಸಿದರು.

ಕರ್ನಾಟಕದಲ್ಲಿನ ರೈತರು 20 ಸಾವಿರ ಕೋಟಿಯಷ್ಟು ಪ್ರೀಮಿಯಂ ಕಟ್ಟಿದ್ದರು. ಬೆಳೆ ಹಾನಿಯಾದವರಿಗೆ ಕಂಪನಿ ನೀಡಿದ ಪರಿಹಾರ 4,900 ಕೋಟಿ ಮಾತ್ರ. ರಾಜ್ಯವೊಂದರಲ್ಲೇ 15,100 ಕೋಟಿ ರೂ.ಲಾಭವಾಗಿದೆ. ದೇಶವ್ಯಾಪಿ ರೈತರು ಕಟ್ಟಿದ ಪ್ರೀಮಿಯಂ ಮೊತ್ತ 1 ಲಕ್ಷ 8 ಸಾವಿರ ಕೋಟಿ ರೂ., ಪರಿಹಾರವಾಗಿನೀಡಿದ್ದು 20 ಸಾವಿರ ಕೋಟಿ ರೂ. ಮಾತ್ರ. ಕೇವಲ 6 ರಿಂದ 8 ತಿಂಗಳಲ್ಲಿ 88 ಸಾವಿರ ಕೋಟಿ ಲಾಭ ಮಾಡಿಕೊಳ್ಳಲಾಯಿತು ಎಂದರು.

ರಾಜ್ಯದ 25 ಜನ ಬಿಜೆಪಿ ಸಂಸದರು ಈಗಿನ ಬೆಳೆ ವಿಮಾ ಕಾಯ್ದೆ ಬದಲಾವಣೆಗೆ ಮುಂದಾಗಬೇಕು. ಶೇ. 40 ರಷ್ಟು ಬೆಳೆ ಹಾನಿಯಾದರೆ ಮಾತ್ರ ಪರಿಹಾರ ಎಂಬುದನ್ನು ಸರಿಪಡಿಸಬೇಕು. ಮೋಟಾರ್‌ ಕಾಯ್ದೆ ಮಾದರಿಯಲ್ಲಿ ಸ್ವಲ್ಪವೇ ಹಾನಿಯಾದರೂ ರೈತರಿಗೆಪರಿಹಾರ ನೀಡುವಂತಾಗಬೇಕು. 3 ವರ್ಷದ ನಂತರ ಬೋನಸ್‌ ಹಣ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ಬೆದರಿಕೆಯ ರೀತಿಯ ಪತ್ರ ಬರೆಯುವ ಮೂಲಕ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ತರುವಂತೆ ಮಾಡಿದೆ. ಪ್ರಾರಂಭಿಕ ಹಂತದಲ್ಲಿ ಈ ಕಾಯ್ದೆಯಿಂದ ರೈತರಿಗೆ ಸ್ವಲ್ಪ ಲಾಭ ದೊರೆಯಲಿದೆ. ಕೊನೆಗೆ ಎಪಿಎಂಸಿಗಳು ಸಂಪೂರ್ಣವಾಗಿ ನನೆಗುದಿಗೆ ಬಿದ್ದ ನಂತರ ಎಲ್ಲಾ ರೈತರು ತೀರಾ ಅನಿವಾರ್ಯವಾಗಿ ವಿದೇಶಿ ಕಂಪನಿಗಳು ನಿಗದಿಪಡಿಸಿದ ದರಕ್ಕೇ ಬೆಳೆಗಳ ಮಾರಾಟ ಮಾಡಬೇಕಾಗುತ್ತದೆ. ಗುಲಾಮಗಿರಿಗೆ ಒಳಗಾಗಬೇಕಾಗುತ್ತದೆ. ಹಾಗಾಗಿ ಕಿಸಾನ್‌ ಕಾಂಗ್ರೆಸ್‌ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಬಲ ಹೋರಾಟ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಎಪಿಎಂಸಿ, ಭೂ ಸುಧಾರಣೆ, ವಿದ್ಯುತ್‌ ಹಾಗೂ ಎಫ್‌ಎಸ್‌ಡಿಆರ್‌ ಕಾಯ್ದೆ ಜಾರಿ ವಿರೋಧಿಸಿ ಕಿಸಾನ್‌ ಕಾಂಗ್ರೆಸ್‌ ಸಹಿ ಸಂಗ್ರಹ ಚಳವಳಿ ಹಮ್ಮಿಕೊಂಡಿದೆ. ಎಲ್ಲಾ ಕಡೆ ಚಳವಳಿ ನಡೆಸಿದ ನಂತರ ರಾಷ್ಟ್ರಪತಿಯವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ, ಕಿಸಾನ್‌ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಬಸವರಾಜ್‌ ವಿ. ಶಿವಗಂಗಾ, ಪ್ರಮೋದ್‌, ಪ್ರವೀಣ್‌ ಕುಮಾರ್‌, ಶಿವಕುಮಾರ್‌ ಬಾತಿ ಇತರರಿದ್ದರು.

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್‌ ಬಿಜೆಪಿ ಏಜೆಂಟರಂತೆ ಎಪಿಎಂಸಿ ಕಾಯ್ದೆ ಪರವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಅವರ ಹೇಳಿಕೆ ರಾಜ್ಯದ ರೈತರನ್ನು ಅಪಮಾನಿಸಿದಂತಾಗಿದೆ.  –ಸಚಿನ್‌ ಮೀಗಾ ಕಿಸಾನ್‌ ಕಾಂಗ್ರೆಸ್‌ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.