ಹೆಬ್ಟಾಳ್ಕರ್ ಹೇಳಿಕೆಗೆ ಆಕ್ರೋಶ
Team Udayavani, Sep 5, 2017, 4:00 PM IST
ದಾವಣಗೆರೆ: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳ್ಕರ್ ನಾಡದ್ರೋಹದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸೋಮವಾರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪ್ರತಿಭಟಿಸಿದ್ದಾರೆ.
ಪಕ್ಷದ ಕಚೇರಿಯಿಂದ ಶ್ರೀ ಜಯದೇವ ವೃತ್ತದ ಮೂಲಕ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತೆಯರು, ಕನ್ನಡನಾಡ ವಿರೋಧಿ ಹೇಳಿಕೆ ನೀಡಿರುವ ಲಕ್ಷ್ಮಿ ಹೆಬ್ಟಾಳ್ಕರ್ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕ್ರಮ ತೆಗೆದುಕೊಂಡು ಗಡೀಪಾರು ಮಾಡಬೇಕು ಎಂದು ಒತ್ತಾಯಿಸಿದರು. ಉಪ ವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಕಳುಹಿಸಲು ಮನವಿ ಸಲ್ಲಿಸಿದರು.
ಬೆಳಗಾವಿಯಲ್ಲಿ ಮರಾಠಿ ಸಮುದಾಯದವರು ಏರ್ಪಡಿಸಿದ್ದ ಗಣೇಶೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಲಕ್ಷ್ಮಿ ಹೆಬ್ಟಾಳ್ಕರ್ ,ಒಂದೊಮ್ಮೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಗಿಂತಲೂ ಮೊದಲಿಗೆ ನಾನೇ ಜೈ ಎನ್ನುತ್ತೇನೆ… ಎಂಬುದಾಗಿ ಹೇಳುವ ಮೂಲಕ ಕನ್ನಡಿಗರಿಗೆ
ಅಪಮಾನ ಮಾಡಿದ್ದಾರೆ ಎಂದು ದೂರಿದರು. ಬೆಳಗಾವಿ ತಾಯಿ ಭುವನೇಶ್ವರಿಯ ಕನ್ನಡನಾಡಿನ ಅವಿಭಾಜ್ಯ ಅಂಗ. ಬೆಳಗಾವಿ ವಿಚಾರವಾಗಿ ಪ್ರತಿಯೊಬ್ಬ ಕನ್ನಡಿಗರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಗಡಿ ವಿಚಾರವಾಗಿ ಅನೇಕ ಕನ್ನಡಪರ ಹೋರಾಟಗಾರರು ನಿರಂತರ ಹೋರಾಟ ಮಾಡುತ್ತಿದ್ದಾರೆ. ಗಡಿ ಭಾಗದ ಕನ್ನಡಿಗರು ತೊಂದರೆ ಅನುಭವಿಸುತ್ತಿರುವಾಗ ಕೇವಲ ಮತಗಳ ದೃಷ್ಟಿಯಿಂದ ಲಕ್ಷ್ಮಿ ಹೆಬ್ಟಾಳ್ಕರ್ ಮಹಾರಾಷ್ಟ್ರದ ಪರ ಹೇಳಿಕೆ ನೀಡಿರುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.
ಸಮಸ್ತ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡಿರುವ ಲಕ್ಷ್ಮಿ ಹೆಬ್ಟಾಳ್ಕರ್ ಪರ ಕೆಲವರು ಹೇಳಿಕೆ ನೀಡಿರುವುದನ್ನ ಗಮನಿಸಿದರೆ ಅವರಿಗೆ ತಾಯ್ನಾಡಿನ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದು ಗೊತ್ತಾಗುತ್ತದೆ. ಅತ್ಯಂತ ಖಂಡನೀಯ ಹೇಳಿಕೆ ನೀಡಿರುವ ಲಕ್ಷ್ಮಿ ಹೆಬ್ಟಾಳ್ಕರ್ ರನ್ನು ಈ ಕೂಡಲೇ ಗಡೀಪಾರು ಮಾಡಬೇಕು ಎಂದು ಒತ್ತಾಯಿಸಿದರು. ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಯಲಕ್ಷ್ಮಿ ಮಹೇಶ್, ಜಿಲ್ಲಾ ಅಧ್ಯಕ್ಷೆ ಎಚ್.ಸಿ. ಜಯಮ್ಮ, ಚೇತನಾ ಶಿವಕುಮಾರ್, ಶಾಂತಾದೊರೈ, ಪ್ರಭಾವತಿ, ಎಚ್.ಎಂ. ಅನಿತಾ, ಆರ್. ನಾಗರತ್ನಮ್ಮ, ಎಲ್.ಕೆ. ಪ್ರೇಮಾ,
ದೇವಿರಮ್ಮ ರಾಮಚಂದ್ರನಾಯ್ಕ, ಮಂಜುಳಾಬಾಯಿ, ಲಲಿತಾ. ಶಾಂತಮ್ಮ, ಶ್ವೇತಾ, ಸುಶೀಲಮ್ಮ, ರಾಜೇಶ್ವರಿ, ವಾಣಿ, ಶೀಲಾಬಾಯಿ, ಭಾಗ್ಯಮ್ಮ ದೇವರಾಜ್, ಸರ್ವಮಂಗಳ ಪ್ರಕಾಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.