ರಾಹುಲ್‌ ಗಾಂಧಿ ಬಂಧನಕ್ಕೆ ಆಕ್ರೋಶ

Team Udayavani, Jun 11, 2017, 1:02 PM IST

dvg2.jpg

ದಾವಣಗೆರೆ: ಮಧ್ಯ ಪ್ರದೇಶದ ಮಂದದೌರ್‌ನಲ್ಲಿ ರೈತರ ಮೇಲೆ ನಡೆದ ಗೋಲಿಬಾರ್‌ ಖಂಡಿಸಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್‌ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್‌ ಗಾಂಧಿ ಬಂಧನ ವಿರೋಧಿಸಿ, ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪಾಲಿಕೆ ಆವಣರದಲ್ಲಿ ಪ್ರತಿಭಟನೆ ನಡೆಸಿದರು. 

ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವಾರಾಜ್‌ ಸಿಂಗ್‌ ಚವ್ಹಾಣ್‌ರ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಬಿಜೆಪಿ, ಕೇಂದ್ರ ಸರ್ಕಾರ, ಮಧ್ಯ ಪ್ರದೇಶದ ಸಿಎಂ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ಪಾಲಿಕೆ ಸದಸ್ಯ ದಿನೇಶ್‌ ಕೆ. ಶೆಟ್ಟಿ, ಬಿಜೆಪಿಗೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. 

ಇದರ ಜೊತೆಗೆ ರೈತರ ಪರ ದನಿ ಎತ್ತಿದ ನಮ್ಮ ಪಕ್ಷದ ಮುಖಂಡ ರಾಹುಲ್‌ ಗಾಂಧಿಯವರನ್ನು ಬಂಧಿಸಿರುವುದು ಆ ಪಕ್ಷದ ನಿಜವಾದ ಧ್ಯೇಯ ಏನು ಎಂಬುದು ಸಾರ್ವಜನಿಕರಿಗೆ ತಿಳಿದಂತಾಗಿದೆ ಎಂದರು. ಈ ಹಿಂದೆ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಇದ್ದಾಗ ಸಹ ನಮ್ಮ ನೆರೆಯ ಹಾವೇರಿ ಜಿಲ್ಲೆಯಲ್ಲಿ ಗೊಬ್ಬರ ಕೇಳಿದ್ದ ರೈತರ ಮೇಲೆ ಗೋಲಿಬಾರ್‌ ಮಾಡಲಾಗಿತ್ತು.

ಇದೀಗ ಮಧ್ಯ ಪ್ರದೇಶದಲ್ಲಿ ಗೋಲಿಬಾರ್‌ ಮಾಡುವ ಮೂಲಕ ತಾನು ಸದಾ ರೈತ ವಿರೋಧಿ ಎಂಬುದನ್ನು ತೋರಿಸಿದೆ ಎಂದು ಅವರು ಹೇಳಿದರು. ಮಧ್ಯ ಪ್ರದೇಶ ಸರ್ಕಾರ ಕೂಡಲೇ ಮೃತಪಟ್ಟ ರೈತರ ಕುಟುಂಬಕ್ಕೆ ಪರಿಹಾರ ಬಿಡುಗಡೆ ಮಾಡಬೇಕು. ಗಾಯಗೊಂಡ ರೈತರಿಗೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರ ನೀಡಬೇಕೆಂದು ಎಂದು ಅವರು ಆಗ್ರಹಿಸಿದರು. 

ಮೇಯರ್‌ ಅನಿತಾಬಾಯಿ, ಉಪಮೇಯರ್‌ ಮಂಜುಳಮ್ಮ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅಶ್ವಿ‌ನಿ ಪ್ರಶಾಂತ್‌, ಎಪಿಎಂಸಿ ಅಧ್ಯಕ್ಷ ಮುದೇಗೌಡ್ರು ಗಿರೀಶ್‌, ಉಪಾಧ್ಯಕ್ಷ ಹಾಲಪ್ಪ, ಜಿಪಂ ಸದಸ್ಯ ಓಬಳೇಶಪ್ಪ, ಪಾಲಿಕೆ ಸದಸ್ಯರಾದ ಎಂ.ಹಾಲೇಶ್‌, ಲಿಂಗರಾಜ್‌, ಸುರೇಂದ್ರ ಮೊಯ್ಲಿ,

-ಮುಖಂಡರಾದ ಪಿ. ರಾಜಕುಮಾರ್‌, ಕೆಎಸ್‌ಐಸಿ ಮಾಜಿ ಅಧ್ಯಕ್ಷ ಡಿ.ಬಸವರಾಜ್‌, ಅಜ್ಜಂಪುರ ಶೆಟ್ರಾ ಮೃತ್ಯುಂಜಯ, ಡೂಡಾ ಮಾಜಿ ಅಧ್ಯಕ್ಷ ಅಯೂಬ್‌ ಪೈಲ್ವಾನ್‌, ಎ.ನಾಗರಾಜ್‌, ಕೇರಂ ಗಣೇಶ್‌, ರೇವಣಸಿದ್ದಪ್ಪ, ಸೋಮಲಾಪುರ ಹನುಮಂತಪ್ಪ, ಮುಜಾಹಿದ್‌, ಅಕ್ರಮ್‌ ಬಾಷಾ ಪ್ರತಿಭಟನೆ ನೇತೃತ್ವ ವಹಿಸಿದ್ದರು.  

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.