ಅಮರನಾಥ ಯಾತ್ರಾರ್ಥಿಗಳ ಹತ್ಯೆಗೆ ಆಕ್ರೋಶ
Team Udayavani, Jul 14, 2017, 2:14 PM IST
ದಾವಣಗೆರೆ: ಅಮರನಾಥ ಯಾತ್ರಾರ್ಥಿಗಳ ಮೇಲೆ ಲಷ್ಕರ್ ಎ ತೋಯಿಬಾ ಉಗ್ರರು ನಡೆಸಿದ ಹತ್ಯೆ ಖಂಡಿಸಿ ಗುರುವಾರ
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಿಂದ ಜಯದೇವ ವೃತ್ತದವರೆಗೆ ಮೆರವಣಿಗೆ ನಡೆಸಿ, ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಉಗ್ರರ
ಕೃತ್ಯವನ್ನ ಖಂಡಿಸಿದರು. ಜಮ್ಮು ಮತ್ತು ಕಾಶ್ಮೀರದ ಖನ್ನಬಲ್ ಬಳಿ ಕಳೆದ ಸೋಮವಾರ ರಾತ್ರಿ ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಯೋತ್ಪಾದಕರ ಗುಂಪೊಂದು ಗುಂಡಿನ ದಾಳಿ ನಡೆಸಿದೆ. ಧೈರ್ಯಗುಂದದ ಬಸ್ ಚಾಲಕ ಸಲೀಂ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ. ಆದೇ ಬಸ್ 75 ಮೀಟರ್‌ನಷ್ಟು ಮುಂದೆ ಹೋಗುತ್ತಿದ್ದಂತೆ ಉಗ್ರರ ಮತ್ತೂಂದು ತಂಡ ಗುಂಡಿನ ದಾಳಿ ನಡೆಸಿ, 7 ಜನ ಯಾತ್ರಾರ್ಥಿಗಳ ಹತ್ಯೆ ಮಾಡಿರುವುದು ಜಿಲ್ಲಾ ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ. ದೇಶದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡಲು ಯತ್ನಿಸುತ್ತಿರುವ ಉಗ್ರರನ್ನ ಮಟ್ಟ ಹಾಕಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿಯನ್ನ ಇದೇ ಮೊದಲ ಬಾರಿಗೆ ಉಗ್ರ ಸಂಘಟನೆಯೊಂದು ಖಂಡಿಸಿರುವುದು ಗಮನಾರ್ಹ. ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸೂಕ್ತ ಕ್ರಮ ತೆಗೆದುಕೊಂಡು ಇನ್ನು ಮುಂದೆ ಇಂತಹ ಘಟನೆ
ನಡೆಯದಂತೆ ನೋಡಿಕೊಳ್ಳಬೇಕು. ಅಮರನಾಥ ಯಾತ್ರಾರ್ಥಿಗಳು ಒಳಗೊಂಡಂತೆ ಜನಸಾಮಾನ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದರು. ಮೋರ್ಚಾ ಜಿಲ್ಲಾ ಅಧ್ಯಕ್ಷ ಮಹಬೂಬ್ ಖಾನ್, ಪ್ರಧಾನ ಕಾರ್ಯದರ್ಶಿಗಳಾದ ಇಕ್ಬಾಲ್
ಅಹಮದ್, ಗೌತಮ್ ಜೈನ್, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಎಚ್.ಎನ್. ಶಿವಕುಮಾರ್, ಯುವ ಮೋರ್ಚಾ
ಜಿಲ್ಲಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್, ಸೋಗಿ ಶಾಂತಕುಮಾರ್, ಪ್ರಭು ಕಲುºರ್ಗಿ, ಟಿಂಕರ್ ಮಂಜಣ್ಣ, ಗ್ಯಾರಳ್ಳಿ ಶಿವು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.