ಹೊನ್ನಾಳಿ, ರೋಣಕ್ಕೆ ತಲಾ 5 ಆಮ್ಲಜನಕ ಸಾಂದ್ರಕ ಹಸ್ತಾಂತರಿಸಿದ ಡಿಸಿಎಂ
Team Udayavani, May 28, 2021, 8:02 PM IST
ಬೆಂಗಳೂರು: ಕೋವಿಡ್ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದರು.
ಡಿಸಿಎಂ ಅವರು ವೈಯಕ್ತಿಕ ನೆಲೆಯಲ್ಲಿ ಹೊನ್ನಾಳಿ, ರೋಣ ಹಾಗೂ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರಗಳಿಗೆ ತಲಾ 5 ಆಮ್ಲಜನಕ ಸಾಂದ್ರಕಗಳನ್ನು ನೀಡಿದರು.
ರೋಣ ಶಾಸಕ ಕಳಕಪ್ಪ ಬಂಡಿ ಅವರು ಡಿಸಿಎಂ ಅವರಿಂದ ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ತಮ್ಮ ಕ್ಷೇತ್ರಗಳಿಗೆ ರವಾನಿಸಿದರು.
ಹೊನ್ನಾಳಿ ಕ್ಷೇತ್ರದ ಶಾಸಕರೂ ಆದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರೇಣಾಕಾಚಾರ್ಯ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಐದು ಸಾಂದ್ರಕಗಳನ್ನು ನೀಡಿದರು.
ಬಿಬಿಎಂಪಿ ಮಾಜಿ ಸದಸ್ಯರಾದ ಮುನೇಂದ್ರ ಕುಮಾರ್ ಅವರಿಗೆ ಐದು ಸಾಂದ್ರಕಗಳನ್ನು ಕೊಟ್ಟಿದ್ದು ಅವರು ಬ್ಯಾಟರಾಯನಪುರ ಕ್ಷೇತ್ರದಲ್ಲಿ ಬಳಕೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಸೋಂಕಿತರಿಗೆ ಆಮ್ಲಜನಕ ಸಾಂದ್ರಕಗಳಿಂದ ಹೆಚ್ಚು ಸಹಾಯ ಆಗುತ್ತಿದೆ. ತುರ್ತಾಗಿ ಎಲ್ಲಿಗೆ ಬೇಕಾದರೂ ಕೊಂಡೊಯ್ದು ಸುಲಭವಾಗಿ ಬಳಸಬಹುದಾಗಿದೆ. ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಬಾಗಿಲಿಗೆ ಇವುಗಳನ್ನು ಒದಗಿಸುವ ಕೆಲಸ ಆಗುತ್ತಿದೆ. ರಾಜ್ಯದ ಇತರ ಕಡೆಗೂ ಹೆಚ್ಚಿನ ಅನುಕೂಲ ಆಗಲಿ ಎಂದು ವೈಯಕ್ತಿಕವಾಗಿ ಇವುಗಳನ್ನು ನೀಡುತ್ತಿರುವುದಾಗಿ ಹೇಳಿದರು.
ನನ್ನ ಮನವಿಯ ಮೇರೆಗೆ ಮಾನ್ಯ ಮುಖ್ಯಮಂತ್ರಿ @BSYBJP 3ನೇ ಹಂತದಲ್ಲಿ ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ 2⃣0⃣ Oxygen concentrator ಗಳನ್ನು ಕಳುಹಿಸಿ ಕೊಟ್ಟಿದ್ದಾರೆ.
ಒಟ್ಟು 63 Oxygen concentrator ಗಳನ್ನ ನೀಡಿದ್ದಕ್ಕೆ ಅವಳಿ ತಾಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.#KarnatakaFightsCorona pic.twitter.com/BQ7F4KafXA
— M P Renukacharya (@MPRBJP) May 28, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.