ದಾವಣಗೆರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ವಿಳಂಬ:ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
Team Udayavani, May 6, 2021, 5:51 PM IST
ದಾವಣಗೆರೆ: ಗುರುವಾರ ತೋರಣಗಲ್‌ನಿಂದ ಆಕ್ಸಿಜನ್ ಟ್ಯಾಂಕರ್ ಬರುವುದು ವಿಳಂಬವಾಗಿದ್ದರಿಂದ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾಧಿಕಾರಿ ಜಿಲ್ಲಾ ರಕ್ಷಣಾಧಿಕಾರಿ ಇತರರು ಸಕಾಲಿಕ ಕ್ರಮ ಕೈಗೊಂಡಿದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ತೋರಣಗಲ್‌ನ ಆಮ್ಲಜನಕ ಉತ್ಪಾದನಾ ಘಟಕದಿಂದ ಬೆಳಗ್ಗೆ 8 ರಿಂದ 8.45ರ ವರೆಗೆ ಟ್ಯಾಂಕರ್ ಬರಬೇಕಾಗಿತ್ತು. ಆದರೆ, ಬಿಲ್ಲಿಂಗ್ ಸಮಸ್ಯೆಯಿಂದ ಟ್ಯಾಂಕರ್ ಬರುವುದು ತಡವಾಗಿದ್ದರಿಂದ ಕೋವಿಡ್ ಸೋಂಕಿತರು ಮಾತ್ರವಲ್ಲ ಆಸ್ಪತ್ರೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದರು.
ಟ್ಯಾಂಕರ್ ವಿಳಂಬ ಆಗುತ್ತಿರುವ ಮತ್ತು ಆಸ್ಪತ್ರೆ ಆವರಣದಲ್ಲಿನ ಲಿಕ್ವಿಡ್ ಆಕ್ಸಿಜನ್ ಘಟಕ ಇತರೆಡೆಯ ಆಕ್ಸಿಜನ್ ಖಾಲಿ ಆಗುತ್ತಿರುವ ವಿಷಯ ತಿಳಿಯುತ್ತಲೇ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಇತರೆ ಅಧಿಕಾರಿಗಳು ಖಾಸಗಿ ಆಸ್ಪತ್ರೆ, ಏಜೆನ್ಸಿ ಮತ್ತು ಇತರೆ ಭಾಗದಲ್ಲಿದ್ದ ಜಂಬೋ ಸಿಲಿಂಡರ್‌ಗಳನ್ನು ತರಿಸಿ, ಸೂಕ್ತ ವ್ಯವಸ್ಥೆ ಕೈಗೊಂಡ ಪರಿಣಾಮ ಅನಾಹುತ ತಪ್ಪಿದಂತಾಯಿತು.
ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಐಸಿಯು, ಆಕ್ಸಿಜನ್ ವಾರ್ಡ್‌ನಲ್ಲಿ 350 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಟ್ಯಾಂಕರ್ ಬರದೇ ಇದ್ದ ಕಾರಣಕ್ಕೆ ಆತಂಕಕ್ಕೆ ಒಳಗಾಗಿದ್ದರು. ಮಧ್ಯಾಹ್ನ 2.30ರ ವೇಳೆಗೆ ಟ್ಯಾಂಕರ್ ಜಿಲ್ಲಾ ಆಸ್ಪತ್ರೆಗೆ ಬಂದಿದೆ.
ಸೂಕ್ತ ವ್ಯವಸ್ಥೆ :
ತೋರಣಗಲ್‌ನಿಂದ 6 ಸಾವಿರ ಲೀಟರ್ ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ ಬರುವುದು ತಡವಾಗಿದೆ. 350 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕ್ಸಿಜನ್ ಸಮಸ್ಯೆ ಆಗದಂತೆ ಖಾಸಗಿ ಆಸ್ಪತ್ರೆ ಮತ್ತು ಆಕ್ಸಿಜನ್ ಸರಬರಾಜು ಏಜೆನ್ಸಿಗಳಿಂದ ಜಂಬೋ ಸಿಲಿಂಡರ್ ತರಿಸಿ, ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ.
ಪೊಲೀಸ್ ಭದ್ರತೆ :
ಪೊಲೀಸ್ ಭದ್ರತೆಯಲ್ಲಿ ಆಕ್ಸಿಜನ್ ಟ್ಯಾಂಕರ್ ತರುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗುರುವಾರ ಬೆಳಗ್ಗೆ 8 ರಿಂದ 8.45ರ ವೇಳೆಗೆ ಆಕ್ಸಿಜನ್ ಟ್ಯಾಂಕರ್ ಬರಬೇಕಿತ್ತು. ವಿಳಂಬವಾದ ಕಾರಣ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಯಿತು ಎಂದು ತಿಳಿಸಿದರು.
ಇನ್ನು ಮುಂದೆ ಪೊಲೀಸ್ ಭದ್ರತೆಯಲ್ಲಿ ಆಕ್ಸಿಜನ್ ಟ್ಯಾಂಕರ್ ತರುವ ವ್ಯವಸ್ಥೆ ಮಾಡಲಾಗಿದೆ. ಟ್ಯಾಂಕರ್ ಬರುವುದು ವಿಳಂಬವಾಗುವುದು ಒಳಗೊಂಡಂತೆ ಇತರೆ ಕಾರಣಗಳಿಂದ ಆಕ್ಸಿಜನ್‌ಗೆ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ 200-300 ಜಂಬೋ ಸಿಲಿಂಡರ್ ದಾಸ್ತಾನು ಮಾಡಿಕೊಳ್ಳಲಾಗುವುದು. ಅಗತ್ಯ ಇರುವ ಕಡೆ ಬಳಸಲಾಗುವುದು ಎಂದು ತಿಳಿಸಿದರು.
ತೋರಣಗಲ್‌ನಿಂದ ಹರಿಹರದ ಸದರನ್ ಏಜೆನ್ಸಿಗೆ ಆಮ್ಲಜನಕ ಟ್ಯಾಂಕರ್ ಬರುತ್ತವೆ. ಅಲ್ಲಿಂದ ಜಿಲ್ಲಾ ಆಸ್ಪತ್ರೆ ಒಳಗೊಂಡಂತೆ ಖಾಸಗಿ, ಇತರೆ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುವುದು. ರೇಣುಕಾ ಇಂಡಸ್ಟ್ರಿಸ್‌ನಲ್ಲೂ ಆಮ್ಲಜನಕದ ವ್ಯವಸ್ಥೆ ಮಾಡಲಾಗಿದೆ. ಈಗ ಜಿಲ್ಲಾ ಆಸ್ಪತ್ರೆಯಲ್ಲಿ 10 ಕೆಎಲ್ ಆಕ್ಸಿಜನ್ ಬೇಕಾಗುತ್ತಿದೆ. ಆಕ್ಸಿಜನ್ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.