ಸಾಮಾಜಿಕ ಪಿಡುಗು ನಿರ್ಮೂಲನೆಗೆ ಪಣತೊಡಿ


Team Udayavani, Feb 13, 2017, 1:10 PM IST

dvg3.jpg

ಜಗಳೂರು: ಉತ್ತಮ ಸಮಾಜ ನಿರ್ಮಾಣ ಮಾಡಬೇಕಾದರೆ ಸಮಾಜದಲ್ಲಿ ಅನಿಷ್ಠ ಪದ್ಧತಿ ಮತ್ತು ಸಾಮಾಜಿಕ ಪಿಡುಗಗಳನ್ನು ತೊಲಗಿಸಲು ಪ್ರತಿಯೊಬ್ಬರೂ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ಹೇಳಿದರು. 

ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಭಾನುವಾರ ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್‌, ಭಾರತೀಯ ಜನಕಲಾ ಸಮಿತಿ, ಭಾರತೀಯ ಮಹಿಳಾ ಒಕ್ಕೂಟಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ  ತಡೆಗಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಎಲ್ಲಿಯವರೆಗೂ ವರದಕ್ಷಿಣೆ, ಬಾಲ್ಯ ವಿವಾಹಗಳಂತಹ ಸಾಮಾಜಿಕ ಪಿಡುಗಗಳು ಜೀವಂತವಾಗಿರುತ್ತವೋ ಅಲ್ಲಿಯವರೆಗೂ ಸಮಾಜದಲ್ಲಿ ಮಹಿಳೆಯರ ಮೇಲೆ ಶೋಷಣೆ, ದೌರ್ಜನ್ಯ, ನಡೆಯುತ್ತವೆ. ಹೀಗಾಗಿ ಪ್ರತಿಯೊಬ್ಬರೂ ಇವುಗಳ  ನಿರ್ಮೂಲನೆಗೆ ಮುಂದಾಗಬೇಕು ಎಂದರು. 

ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷರಾಗಿ ರಾಜ್ಯದ 30 ಜಿಲ್ಲೆಯಲ್ಲಿ ಪ್ರಗತಿ ಪರಿಶೀಲಿಸಲಾಗಿದೆ. ಈ  ಸಂದರ್ಭದಲ್ಲಿ ಹೆಣ್ಣು ಮಕ್ಕಳ ಅನುಪಾತ ಕಡಿಮೆಯಿದೆ. ಅಂದರೆ 1000 ಗಂಡು ಮಕ್ಕಳಿಗೆ 942 ಮಂದಿ ಹೆಣ್ಣು ಮಕ್ಕಳಿದ್ದಾರೆ ಮಾಹಿತಿ ತಿಳಿದಿದೆ.

ಈ ಅನುಪಾತ ಮುಂದುವರಿದರೆ ಹೆಣ್ಣಿಗಾಗಿ ಸಮಾಜದಲ್ಲಿ ಸಮರಗಳು ನಡೆದರೂ ಅಚ್ಚರಿ ಇಲ್ಲ ಎಂದು ಆತಂಕವ್ಯಕ್ತಪಡಿಸಿದರು. ದೇಶದಲ್ಲಿ ಅರಣ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಪರಿಸರದ ಮೇಲೆ ಪರಿಣಾಮ ಬೀರುತ್ತಿದೆ. ಇದು ಹೀಗೆ ಮುಂದುವರಿದರೆ ಸಮಾಜಕ್ಕೆ ಉಳಿಗಾಲವಿಲ್ಲ.

ಬಾಲ್ಯವಿವಾಹದ ಬಗ್ಗೆ ಜಿಲ್ಲಾಡಳಿತ ಅಥವಾ  ತಾಲೂಕು ಆಡಳಿತ ಜಾಗೃತಿ ಮೂಡಿಸಬೇಕಾಗಿತ್ತು. ಅಂತಹ ಕೆಲಸವನ್ನು ಸಂಘಟನೆಯವರು ಮಾಡುತ್ತಿರುವುದು ಶ್ಲಾಘನೀಯ ಎಂದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್‌.ಕೆ. ರಾಮಚಂದ್ರಪ್ಪ, ಶಾಸಕ ಎಚ್‌.ಪಿ. ರಾಜೇಶ್‌, ಎಐಎಸ್‌ಎಫ್‌ ಜಿಲ್ಲಾಧ್ಯಕ್ಷ ಮಾದೇಹಳ್ಳಿ ಮಂಜಪ್ಪ, ಎಐಎಸ್‌ಎಫ್‌ ರಾಜ್ಯಾಧ್ಯಕ್ಷೆ ಕೆ. ಜ್ಯೋತಿ, ದಾವಣಗೆರೆ ನಗರಪಾಲಿಕೆ  ಸದಸ್ಯ ಎಚ್‌.ಜಿ. ಉಮೇಶ್‌, ತಹಶೀಲ್ದಾರ್‌ ಶ್ರೀಧರಮೂರ್ತಿ ಮಾತನಾಡಿದರು.

ಶಿಶುಭಿವೃದ್ಧಿ ಯೋಜನಾಧಿಕಾರಿ ಭಾರತಿ ಬಣಕಾರ್‌, ಪ್ರಗತಿಪರ ಸಂಘಟನೆ ಮುಖಂಡ  ಮಹ್ಮದ್‌ ಭಾಷಾ, ನರಸಿಂಹಯ್ಯ, ದಲಿತ ಮುಖಂಡ ಜಿ.ಎಚ್‌. ಶಂಭುಲಿಂಗಪ್ಪ ಇತರರು ಇದ್ದರು. 

ಟಾಪ್ ನ್ಯೂಸ್

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

Davanagere: Removal of unauthorized hoardings within the jurisdiction of the Municipal Corporation

Davanagere: ಮಹಾನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಹೋರ್ಡಿಂಗ್ ತೆರವು

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

Clashes erupt over Davanagere Municipal Corporation general meeting

Davanagere ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಪ್ರಾರಂಭಕ್ಕೆ ತಿಕ್ಕಾಟ; ಕೊನೆಗೆ ಮುಂದೂಡಿಕೆ

kidn

Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.