ಬಿಜೆಪಿಯವರಿಗಾಗಿಯೇ ಪಾರ್ಕ್ ಮೀಸಲು: ಶೆಟ್ಟಿ ತಿರುಗೇಟು
Team Udayavani, Aug 29, 2017, 3:21 PM IST
ದಾವಣಗೆರೆ: ಈಗಾಗಲೇ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿಯವರಿಗೆ ಮುಂದಿನ ಚುನಾವಣೆಯಲ್ಲೂ ಅದೇ ಗತಿ ಒದಗಲಿದ್ದು, ಕಾಲ ಕಳೆಯಲು ಅವರಿಗಾಗಿಯೇ ನಗರದಲ್ಲಿ ಪಾರ್ಕ್ ನಿರ್ಮಿಸಲಾಗುವುದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿರುಗೇಟು ನೀಡಿದ್ದಾರೆ.
ಸೋಮವಾರ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ಎಂದರೆ ಭ್ರಷ್ಟ ಜನತಾ ಪಾರ್ಕ್. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅ ಧಿಕಾರದಲ್ಲಿದ್ದಾಗ ಸ್ವತಃ ಮುಖ್ಯಮಂತ್ರಿಗಳೇ ಭ್ರಷ್ಟಾಚಾರದ ಆರೋಪದಡಿ
ಜೈಲಿಗೆ ಹೋದರು ಎಂದರು. ದಾವಣಗೆರೆಯಲ್ಲಿಯೂ ಸಹ ಬಿಜೆಪಿ ಈಗಿನ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ನಗರಸಭೆ ಅಧ್ಯಕ್ಷರಾಗಿದ್ದಾಗ ಅಕ್ರಮ ಡೋರ್ ನಂಬರ್ ಗಳನ್ನು ನೀಡಿರುವುದಲ್ಲದೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾಗ ತಮ್ಮ ಸಂಬಂಧಿಕರ ಹೆಸರಿನಲ್ಲಿ ನಿವೇಶನ ಬರೆದುಕೊಂಡಿದ್ದಾರೆ. ಜಿ.ಎಂ.ಸಿದ್ದೇಶ್ವರ್ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಡಿ ತಮ್ಮ ಸಂಸ್ಥೆಯಿಂದಲೇ ಬಸ್ ತಂಗುದಾಣ ನಿರ್ಮಿಸುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದರು.
ಇಂತಹ ಭ್ರಷ್ಟರಿಂದ ಕೊಡಿದ ಪಕ್ಷವನ್ನು ದಾವಣಗೆರೆ ಜಿಲ್ಲೆಯ ಜನತೆ 2013ರ ಚುನಾವಣೆಯಲ್ಲಿ ತಿರಸ್ಕರಿಸಿದ್ದು, 2018ರ ಚುನಾವಣೆಯಲ್ಲೂ ಸಹ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಜನತೆಯ ತೀರ್ಪಿನ ನಂತರ ಒಂದು ಪಾರ್ಕ್ ನಿರ್ಮಿಸಿ, ಬಿಜೆಪಿಯವರಿಗಾಗಿಯೇ ಮೀಸಲಿಟ್ಟು, ಅವರ ಹೆಸರನ್ನೇ ಇಡಲಾಗುವುದು. ಬಿಜೆಪಿಯವರು ಅಲ್ಲೇ ಕಾಲ ಕಳೆಯಲಿ ಎಂದು ಲೇವಡಿ ಮಾಡಿದರು. ದಾವಣಗೆರೆ ನಗರದಲ್ಲಿ ಹಂದಿ ನಿರ್ಮೂಲನೆಗೆ ಕ್ರಮಕೈಗೊಳ್ಳಲಾಗಿದೆ. ನಾವು ಯಾರ ಮೇಲೂ ಹಲ್ಲೆ ನಡೆಸಿಲ್ಲ. ಹಂದಿ ಸಾಗಾಣಿಕೆಗೆ ಪೋಲೀಸರ ಭದ್ರತೆಯೊಂದಿಗೆ ಪಾಲಿಕೆ ಅಧಿಕಾರಿಗಳು ಕ್ರಮ
ಕೈಗೊಂಡಿದ್ದಾರೆ ಎಂದರು. ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಮಹಮದ್ ಘನಿ ಮತ್ತು ದಿಲ್‌ಶಾದ್ ಅಹ್ಮದ್ ಮಾತನಾಡಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಹಗರಣಗಳಿಲ್ಲದೇ ಬಡವರ ಪರವಾದ ಅನ್ನಭಾಗ್ಯ, ಕ್ಷೀರ ಭಾಗ್ಯದಂತಹ 12ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ಅಯೂಬ್ ಪೈಲ್ವಾನ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಫೈರೋಜ್ ಪಟೇಲ್, ಎನ್ ಎಸ್‌ಯುಐ ರಾಜ್ಯ ಕಾರ್ಯದರ್ಶಿ ಮುಜಾಹಿದ್ ಪಾಷ, ಶಶಿಧರ್ ಪಾಟೀಲ್, ಯುವ ಕಾಂಗ್ರೆಸ್ ನ ಖಾಲಿದ್, ಇಬ್ರಾಹಿಂ ಖಲೀಲುಲ್ಲಾ, ಆರೀಫ್ ಪೈಲ್ವಾನ್, ಇಮ್ರಾನ್, ಮನ್ಸೂರ್, ಬಾಬಾಜಾನ್, ಸಂದೀಪ್ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.