ಅಭಿವೃದ್ಧಿಗೆ ಪಿಡಿಒಗಳು ಶ್ರಮಿಸಲಿ
Team Udayavani, Jun 29, 2018, 3:53 PM IST
ಚನ್ನಗಿರಿ: ಗ್ರಾಪಂ ನಿರ್ವಹಣೆಯ ಹೊಣೆ ಹೊತ್ತಿರುವ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಪಿಡಿಒಗಳಿಗೆ ಸೂಚನೆ ನೀಡಿದರು.
ತಾಪಂ ಸಭಾಂಗಣದಲ್ಲಿ ಗುರುವಾರ ತಾಲೂಕು ಮಟ್ಟದ ಗ್ರಾಮ ಪಂಚಾಯತ್ ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪಿಡಿಒಗಳು ಕೇಂದ್ರ ಸ್ಥಾನದಲ್ಲಿ ವಾಸವಾಗಿರಬೇಕೆಂದು ಸರ್ಕಾರದ ಆದೇಶ ಇದ್ದರೂ ತಾಲೂಕಿನ ಯಾವುದೇ ಪಿಡಿಒ
ಕೇಂದ್ರಸ್ಥಾನದಲ್ಲಿ ವಾಸ ಆಗಿಲ್ಲ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಗಂಭೀರ ಆರೋಪ ಮಾಡಿದರು.
ಅಧಿಕಾರ ವಿಕೇಂದ್ರೀಕರಣದಿಂದಾಗಿ ಗ್ರಾಪಂ ಕಾರ್ಯ ಅತಿ ಮಹತ್ವ ಪಡೆದಿದೆ. ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳೇ ಸುಪ್ರೀಮ್ ಪವರ್ ಇದ್ದಂತೆ. ಆದರೆ ಯಾವೊಬ್ಬ ಪಿಡಿಒ ಕೂಡ ಇರುವ ಅಧಿಕಾರ ಸಮರ್ಪಕವಾಗಿ ಬಳಸಿಕೊಳ್ಳತ್ತಿಲ್ಲ. ಬದಲು ಕಚೇರಿಗೆ ಬಾರದೇ ಬೇಕಾಬಿಟ್ಟಿ ತಿರುಗಾಡುತ್ತಾರೆ ಎಂಬ ದೂರು ಇದೆ. ಜನಸ್ನೇಹಿಗಳಾಗಿ ಅಧಿಕಾರಿಗಳು ಕೆಲಸ ಮಾಡಬೇಕು. ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರು ಸೇರಿದಂತೆ ವಿದ್ಯುತ್, ಸ್ಪತ್ಛತೆ ಬಗ್ಗೆ ಸಾಕಷ್ಟು ದೂರುಗಳಿದ್ದು, ಮೊದಲು ಅವುಗಳಿಗೆ ಆದ್ಯತೆ ಕೊಡಬೇಕಿದೆ. ಒಂದು ಹಳ್ಳಿ ಸೇರಿದಂತೆ ಒಂದು ಗ್ರಾಪಂ ಅಭಿವೃದ್ಧಿ ಕಾಣಬೇಕಾದರೆ ಪಿಡಿಒ ಪಾತ್ರ ಮುಖ್ಯ. ಸರ್ಕಾರ ನಿಮ್ಮನ್ನು ನಂಬಿದ ಹಾಗೆಯೇ ಜನಪ್ರತಿನಿಧಿಗಳು ನಿಮ್ಮನ್ನು ನಂಬಿರುತ್ತಾರೆ. ಅವರ ವಿಶ್ವಾಸಕ್ಕೆ ದ್ರೊಹ ಬಗೆಯದೆ ಕಾರ್ಯ ನಿರ್ವಹಿಸಿ ಎಂದರು.
ಕಳೆದ ಬಾರಿ ನಾನು ಶಾಸಕನಾಗಿದ್ದಾಗ ಅಧಿ ಕಾರಿಗಳ ಬೇಜವಾಬ್ದಾರಿತನದಿಂದ ನಿರಂತರ ಜ್ಯೋತಿಯ 400 ಕೋಟಿ ಹಣ ಮಣ್ಣುಪಾಲಾಯಿತು. ಈಗ ದೀನದಯಾಳ್ ಉಪಾಧ್ಯೆ ಯೋಜನೆಯಡಿ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲು ತಾಲೂಕಿಗೆ 150 ಕೋಟಿ ಅನುದಾನ ಬಂದಿದೆ. ಅರ್ಹ ಫಲಾನುಭವಿಗೆ ಯೋಜನೆ ತಲುಪಬೇಕು.
ಕೆಲಸ ಮಾಡಲು ಇಷ್ಟ ಇಲ್ಲದಿದ್ದರೆ ಧೈರ್ಯವಾಗಿ ಬಿಟ್ಟು ಹೋಗಿ. ಬೇಸಿಗೆ ಬರುವುದರೊಳಗೆ ಎಲ್ಲರೂ ಸಕ್ರಿಯರಾಗಿ ಎಂದು ಎಚ್ಚರಿಕೆ ನೀಡಿದರು. ಈ.ಓ. ಪ್ರಕಾಶ್, ತಾಪಂ ಉಪಾಧ್ಯಕ್ಷ ಕುಮಾರನಾಯ್ಕ, ಎಇಇ ಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.