ಬಿಜೆಪಿಯ ಕಪಟ ಯಾತ್ರೆಗೆ ಜನರು ಮರುಳಾಗಲ್ಲ: ರವೀಂದ್ರ

Team Udayavani, Nov 8, 2017, 7:26 PM IST

08-40.jpg

ಹರಪನಹಳ್ಳಿ: ಕೋಮುವಾದಿ ಬಿಜೆಪಿಯವರು ಪರಿವರ್ತನಾ ಯಾತ್ರೆ ಹೆಸರಿನಲ್ಲಿ ಹಮ್ಮಿಕೊಂಡಿರುವ ಕಪಟ ಯಾತ್ರೆಗೆ ಜನರು ಮರುಳಾಗುವುದಿಲ್ಲ ಎಂದು ಶಾಸಕ ಎಂ.ಪಿ.ರವೀಂದ್ರ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ತಾಲೂಕಿನ ಹಿರೇಮೇಗಳಗೆರೆ ಗ್ರಾಮದಲ್ಲಿ ಮಂಗಳವಾರ ಹಿರೇಮೇಗಳಗೆರೆಯಿಂದ ಕಮ್ಮತ್ತಹಳ್ಳಿ ಕ್ರಾಸ್‌ವರೆಗಿನ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿಯೇ ಜೈಲಿಗೆ ಹೋಗಿ ಬಂದಿರುವ ಯಡಿಯೂರಪ್ಪ ನೇತೃತ್ವದಲ್ಲಿ ಯಾತ್ರೆ ನಡೆಸುತ್ತಿರುವುದು ಹಾಸ್ಯಹಾಸ್ಪವಾಗಿದೆ. ಬಿಜೆಪಿ ಅಧಿಕಾರ ಅವಧಿಯಲ್ಲಿ ಡಿನೋಟಿಫಿಕೇಷನ್‌, ಬ್ಲೂ ಫಿಲಂ ವೀಕ್ಷಣೆ ಸೇರಿದಂತೆ ಮಾಡಬಾರದ ಅನಾಚಾರ ಮಾಡಿದ್ದಾರೆ. ಇಂತವರು ಪರಿವರ್ತನಾ ಯಾತ್ರೆ ನಡೆಸುತ್ತಿದ್ದಾರೆ. ಮೊದಲು ಬಿಜೆಪಿ ಮುಖಂಡರು ಕೋಮುವಾದ ಬದಲಾಗಿ ಸಮಾನತೆ ಕಡೆಗೆ ಪರಿರ್ವತನೆ ಹೊಂದಲಿ ಎಂದರು.

ಸಿದ್ದರಾಮಯ್ಯ ಸರ್ಕಾರ ಸರ್ವರಿಗೂ ಸಮಪಾಲು, ಸಮಬಾಲು ತತ್ವದಡಿ ಭ್ರಷ್ಟಚಾರ ರಹಿತ ಆಡಳಿತ ನೀಡಿ ದೇಶಕ್ಕೆ ಮಾದರಿ ಸರ್ಕಾರವಾಗಿದೆ. ನೋಟು ಅಪಮಾನ್ಯಕರಣದ ತೊಂದರೆಯನ್ನು ಜನರು ಇನ್ನೂ ಮರೆತ್ತಿಲ್ಲ. ಬಿಜೆಪಿಯವರು ಏನೇ ಸಮಾವೇಶ ಯಾತ್ರೆ ನಡೆಸಿದರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಹಿಂದುಳಿದ, ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಗಳಲ್ಲಿ ಸಿಸಿ ರಸ್ತೆ ಮತ್ತು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಫ್ಲೋರೈಡ್‌ ಅಂಶವುಳ್ಳ ಕುಡಿಯುವ ನೀರಿಗೆ ಮುಕ್ತಿ ಹಾಡಲು ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಾಪಿಸಲಾಗಿದೆ. 60 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ಗರ್ಭಗುಡಿ ಬ್ರಿಡ್ಜ್ ಕಂ ಬ್ಯಾರೇಜ್‌ ಯೋಜನೆಗೆ ಶೀಘ್ರವೇ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದಲ್ಲಿನ ಪೊಲೀಸ್‌ ಠಾಣೆಯಲ್ಲಿ ವೃತ್ತ ನೀರಿಕ್ಷಕರ ಕಚೇರಿಯನ್ನು ಎದುರುಗಡೆ ಇರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸ್ಥಳಾಂತರಿಸುವ ಕುರಿತು ಬಗ್ಗೆ ಖುದ್ದು ಸ್ಥಳವನ್ನು ಪರಿಶೀಲಿಸಿದ ನಂತರ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ಜಿಪಂ ಸದಸ್ಯ ಎಚ್‌.ಬಿ.ಪರಶುರಾಮಪ್ಪ, ತಾಪಂ ಅಧ್ಯಕ್ಷೆ ಅನ್ನಪೂರ್ಣಮ್ಮ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಲೂರು ಅಂಜಪ್ಪ, ತಾಪಂ ಸದಸ್ಯ ರೇವನಗೌಡ, ಮುಖಂಡರಾದ ಎಂ.ವಿ. ಅಂಜಿನಪ್ಪ, ಸಾಬಳ್ಳಿ ಜಂಬಣ್ಣ, ಟಿ.ಎಂ. ಶಿವಶಂಕರ, ಪ್ರೇಮಕುಮಾರಗೌಡ, ಅಂಗಡಿ ಚಂದ್ರಪ್ಪ, ಎಂ.ಅಜ್ಜಣ್ಣ, ವೆಂಕಟೇಶ್‌, ಚನ್ನಬಸವನಗೌಡ, ಲಕ್ಕಹಳ್ಳಿ ಹನುಮಂತಪ್ಪ, ಷಣ್ಮುಖಪ್ಪ, ಪಿಡಬ್ಲೂಡಿ ಎಇಇ ಪ್ರಭಾಕರ, ಎಇಇ ವಿಭುಸ್ವಾಮಿ, ಗ್ರಾಪಂ ಸದಸ್ಯೆ ನೀಲಮ್ಮ, ವಸಂತಪ್ಪ, ಸಿ.ಪರಶುರಾಮ, ಎಲ್‌.ಮಂಜ್ಯನಾಯ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.