ಕೆಂಡೋತ್ಸವ ಸಂಭ್ರಮದಲ್ಲಿ ಕೋವಿಡ್ ಲೆಕ್ಕಕ್ಕೇ ಇಲ್ಲ!
ಕರೇಕಟ್ಟೆಯಲ್ಲಿ ನಡೆದ ಧಾರ್ಮಿಕ ಆಚರಣೆಯಲ್ಲಿ ಸಾವಿರಾರು ಜನ ಭಾಗಿ
Team Udayavani, Oct 27, 2020, 4:22 PM IST
ಚನ್ನಗಿರಿ: ಕರೇಕಟ್ಟೆ ಗ್ರಾಮದಲ್ಲಿ ನಡೆದ ಗಾಳಿಮಾರಮ್ಮ ದೇವಿ ಜಾತ್ರೆ ಹಾಗೂ ಕೆಂಡೋತ್ಸವದಲ್ಲಿ ಸಾಮಾಜಿಕ ಅಂತರ ಮರೆತ ಜನ.
ಚನ್ನಗಿರಿ: ತಾಲೂಕಿನ ಕರೇಕಟ್ಟೆ ಗ್ರಾಮದಲ್ಲಿ ದಸರಾ ಹಾಗೂ ವಿಜಯದಶಮಿ ಅಂಗವಾಗಿ ನಡೆದ ಗಾಳಿ ಮಾರಮ್ಮ ದೇವಿಯ ಕೆಂಡೋತ್ಸವದಲ್ಲಿ ಸಾವಿರಾರು ಜನರು ಕೊರೊನಾ ಲೆಕ್ಕಿಸದೆಪಾಲ್ಗೊಂಡಿದ್ದರು. ಇದರಿಂದ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ವ್ಯಾಪಿಸುವ ಭೀತಿ ಎದುರಾಗಿದೆ.
ಜನರು ಗುಂಪು ಗುಂಪಾಗಿ ಸೇರಿದ್ದೇ ಅಲ್ಲದೆ ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಆದರೂ ಯಾವ ಅಧಿಕಾರಿಯೂ ಈಬಗ್ಗೆ ಗಮನ ನೀಡದಿರುವುದು ಸೋಜಿಗ ಮೂಡಿಸಿದೆ. ರಾಜ್ಯದಲ್ಲಿ ಪ್ರತಿ ದಿನ ಕೂಡ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ತಾಲೂಕಿನಲ್ಲೂ ಪರಿಸ್ಥಿತಿ ಭಿನ್ನವಾಗೇನೂ ಇಲ್ಲ. ಇದ್ಯಾವುದನ್ನೂ ಲೆಕ್ಕಿಸದೇ ಗಾಳಿಮಾರಮ್ಮ ಜಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಉದ್ಯೋಗ ಅರಸಿ ಬೆಂಗಳೂರಿಗೆ ತೆರಳಿದ್ದ ಸಾವಿರಾರು ಮಂದಿ ಕರೇಕಟ್ಟೆ ಗ್ರಾಮದಲ್ಲಿ ನಡೆಯುವ ಜಾತ್ರೆಗೆ ಮರಳಿದ್ದಾರೆ. ಕೋವಿಡ್ ಸೋಂಕಿನ ಬಗ್ಗೆ ಯಾವುದೇ ಮುಂಜಾಗ್ರತಾ ವಹಿಸದೆ ಕೆಂಡೋತ್ಸವದಲ್ಲಿ ಪಾಲ್ಗೊಂಡಿದ್ದರು. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡುವಂತೆ ಸರ್ಕಾರ ಜಾಗೃತಿ ಮೂಡಿಸುತ್ತಲೇ ಇದೆ. ಮಾಸ್ಕ್ ಧರಿಸದವರಿಗೆ ದಂಡವನ್ನೂ ವಿಧಿಸಲಾಗುತ್ತಿದೆ. ಆದರೆ ಕರೇಕಟ್ಟೆಯಲ್ಲಿ ನಡೆದ ಕೆಂಡೋತ್ಸವದಲ್ಲಿ ಪಾಲ್ಗೊಂಡಿದ್ದವರಲ್ಲಿ ಬಹುತೇಕ ಜನರು ಕನಿಷ್ಠ ಪಕ್ಷ ಮಾಸ್ಕ್ ಕೂಡ ಧರಿಸಿರಲಿಲ್ಲ. ಕೆಂಡೋತ್ಸವ ನಡೆಯುವ ಬಗ್ಗೆ ಮಾಹಿತಿ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ಎದ್ದು ಕಾಣುತ್ತಿದೆ.
ಕೋವಿಡ್ ಬಗ್ಗೆ ಮುಂಜಾಗ್ರತೆ ವಹಿಸದಿದ್ದರೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ವ್ಯಾಪಿಸುವುದು ಖಚಿತ. ಆದ್ದರಿಂದ ಇನ್ನು ಮುಂದಾದರೂ ಎಚ್ಚೆತ್ತುಕೊಂಡು ಬಿಗಿ ಕ್ರಮ ಕೈಗೊಳ್ಳಲು ಸಂಬಂಧಿಸಿದವರು ಮುಂದಾಗಬೇಕಿದೆ.
ಗ್ರಾಮೀಣ ಮಟ್ಟದಲ್ಲಿ ಗ್ರಾಪಂ ಪಿಡಿಒ ಗಮನಕ್ಕೆ ಬಾರದೆ ಧಾರ್ಮಿಕ ಆಚರಣೆ ನಡೆಯುವಂತಿಲ್ಲ. ಕರೇಕಟ್ಟೆ ಗ್ರಾಮದಲ್ಲಿ ನಡೆದ ಕೆಂಡೋತ್ಸವದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ತಕ್ಷಣ ತಾಪಂ ಇಒ ಜೊತೆ ಮಾತನಾಡಿ ಮಾಹಿತಿ ಪಡೆದುಕೊಳ್ಳುತ್ತೇನೆ. –ಪಟ್ಟರಾಜ ಗೌಡ, ಚನ್ನಗಿರಿ ತಹಶೀಲ್ದಾರ್
-ಶಶೀಂದ್ರ ಸಿ.ಎಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.