“ಯೋಜನೆಗಳ ದುರುಪಯೋಗ ಸಹಿಸಲ್ಲ’

Team Udayavani, Dec 31, 2019, 11:42 AM IST

dg-tdy-1

ದಾವಣಗೆರೆ: ಸರ್ಕಾರದ ಯೋಜನೆಗಳ ಸದುಪಯೋಗವಾಗಬೇಕು. ದುರುಪಯೋಗವನ್ನು ಸಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಎಚ್ಚರಿಸಿದ್ದಾರೆ.

ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಯೋಜನೆ, ಕಾರ್ಯಕ್ರಮಗಳ ದುರುಪಯೋಗದ ಬಗ್ಗೆ ಜಿಲ್ಲಾ ಧಿಕಾರಿ ಮತ್ತು ಇತರೆ ಇಲಾಖೆಗಳ ತಂಡಗಳ ಮೂಲಕ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ನೀರಾವರಿ ನಿಗಮ ಸೂಳೆಕೆರೆಯ ಸರ್ವೇ ಕಾರ್ಯಕ್ಕೆ 11 ಲಕ್ಷದ ಅನುಮೋದನೆ ನೀಡಿದೆ. ಆದರೂ,ನೀರಾವರಿ ನಿಗಮದ ಅಧಿಕಾರಿಗಳು ಕುಂಟು ನೆಪ ಹೇಳುತ್ತಾ ಸರ್ವೇ ನಡೆಸುತ್ತಿಲ್ಲ ಎಂಬ ಖಡ್ಗ ಸಂಸ್ಥೆಯವರ ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಅಧಿಕಾರಗಳೊಂದಿಗೆ ಸಭೆ ನಡೆಸಿ ಸರ್ವೇ ಕಾರ್ಯ ಪ್ರಾರಂಭಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಸೂಳೆಕೆರೆ ಒತ್ತುವರಿಗೆ ಸಂಬಂಧಿಸಿದಂತೆ ಜ. 4 ರಂದು ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಹರಿಹರದ ಅಮರಾವತಿ ಹೊಸ ರೈಲ್ವೆ ಮೇಲ್ಸೇತುವೆ ಸಾರ್ವಜನಿಕರ ಸಂಚಾರಕ್ಕಾಗಿ ಪ್ರಾರಂಭಿಸಿದ್ದು, ಖಾಸಗಿ ವಾಹನ, ಕೆಲವೊಂದು ಸಾರಿಗೆ ಸಂಸ್ಥೆ ಬಸ್‌ಗಳು ಮಾತ್ರ ಸಂಚರಿಸುತ್ತಿದ್ದು, ಸಿಟಿ ಬಸ್‌ , ಗ್ರಾಮಾಂತರ ಸಾರಿಗೆ ಬಸ್‌ ಸಂಚರಿಸದೆ ಓಡಾಡಕ್ಕೆ ತೊಂದರೆಯಾಗುತ್ತಿದೆ ಎಂದು ನಿವಾಸಿಗಳು ದೂರಿದರು. ಕೆಎಸ್ಸಾರ್ಟಿಸಿ ಅಧಿ ಕಾರಿಗಳಿಗೆ ತಕ್ಷಣವೇ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚಿಸಿದರು.

ಹರಿಹರದ ಭಾರತ್‌ ಆಯಿಲ್‌ಮಿಲ್‌ ಕಾಂಪೌಂಡ್‌ನ‌ಲ್ಲಿ ಕಾನೂನು ಬಾಹಿರವಾಗಿ ಎಲ್‌ಪಿಜಿ ಡಿಸ್ಪೆನ್ಸಿಂಗ್‌ನಿಂದ ಜನರಿಗೆ ತೊಂದರೆಯಾಗುತ್ತಿದೆ. ಹರಿಹರ ನಗರಸಭೆಯಲ್ಲಿ ಎಫ್‌ಡಿಎ ಕೆಲಸವನ್ನು ಡಿ ದರ್ಜೆಯ ನೌಕರರಿಂದ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಸಂಘದವರು ದೂರು ನೀಡಿದರು.

ಸ್ಥಳ ಪರಿಶೀಲನೆ ನಡಿಸಿ ಸೂಕ್ತ ಕ್ರಮ ಜರುಗಿಸುವಂತೆ ಉಪವಿಭಾಗಾಧಿಕಾರಿಗೆ ಸೂಚಿಸಿದರು. ಹರಿಹರ ತಾಲೂಕಿನ ಬಿಳಸನೂರು ಗ್ರಾಮದ ತಿಪ್ಪೇಶ್‌, ಬಿಳಸನೂರು ಗ್ರಾಮದ ನಾಗಪ್ಪ, ಜಮೀನು ಸರ್ವೇ ಮತ್ತು ಹದ್ದು ಬಸ್ತು ಮಾಡಿಕೊಡುತ್ತಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಜಿಲ್ಲಾಧಿ ಕಾರಿ ಕಚೇರಿಯ ದೂರವಾಣಿ ಸಂಖ್ಯೆ ಬರೆಸುವಂತೆ ಮನವಿ ಮಾಡಿದರು. ಜಮೀನು ಸರ್ವೇ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನ್ಯಾಮತಿಯಲ್ಲಿ ನಾಡ ಕಚೇರಿ, ಅಟಲ್‌ ಜೀ ಜನಸ್ನೇಹಿ ಕೇಂದ್ರ, ಉಪ ತಹಶೀಲ್ದಾರ್‌ ಕಚೇರಿ, ರಾಜಸ್ವ ನಿರೀಕ್ಷಕರ, ಗ್ರಾಮ ಲೆಕ್ಕಾಧಿಕಾರಿ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ಸರ್ಕಾರಿ ಕಟ್ಟಡ ನಿರ್ಮಿಸಿಕೊಡಬೇಕು ಹಾಗೂ ಸರ್ವೇ ನಂ 34 ರಲ್ಲಿ ಸುಮಾರು 8 ಎಕರೆ ಜಾಗದಲ್ಲಿ ರುದ್ರಭೂಮಿ ನಿರ್ಮಿಸಿದರೆ ಎಲ್ಲಾ ಸಮಾಜದವರಿಗೂ ಅಂತ್ಯ ಸಂಸ್ಕಾರಕ್ಕೆ ಅನುಕೂಲವಾಗುತ್ತದೆ ಎಂದು ಗೋವಿನಕೋವಿ ಗ್ರಾಮದ ನಿವಾಸಿ ಜಿ.ಬಿ. ಸುರೇಶ್‌ ಮನವಿ ಸಲ್ಲಿಸಿದರು. ತಹಶೀಲ್ದಾರ್‌ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ರುದ್ರಭೂಮಿ ಒದಗಿಸುವಂತೆ ಸೂಚಿಸಿದರು.

ದಾವಣಗೆರೆಯ 45 ನೇ ವಾರ್ಡ್‌ನ ಎಸ್‌.ಜೆ.ಎಂ ನಗರದಲ್ಲಿ ಚರಂಡಿಯ ಮಧ್ಯಭಾಗದಲ್ಲಿ ವಿದ್ಯುತ್‌ ಕಂಬ ಹಾಕಿರುವುದರಿಂದ ಯಾವುದೇ ಸಮಯದಲ್ಲಾದರೂ ಅವಘಡ ಸಂಭವಿಸುವ ಸಾಧ್ಯತೆಯಿರುವುದರಿಂದ ತೆರವುಗೊಳಿಸಬೇಕು ಎಂದು ತಿಪ್ಪೇಶ್‌ ಮನವಿ ಮಾಡಿದರು. ದೊಂಬಿದಾಸರ 20 ಕುಟುಂಬದವರು ತರಳಬಾಳು ನಗರ(6ನೇ ಮೈಲಿಕಲ್ಲು)ದಲ್ಲಿ ಸುಮಾರು 20 ವರ್ಷಗಳಿಂದ ವಾಸವಾಗಿದ್ದು, ವಿದ್ಯುತ್‌ ವ್ಯವಸ್ಥೆ ಇಲ್ಲ. ವಸತಿ ಮತ್ತು ನಿವೇಶನ ಯೋಜನೆಯಡಿ ಮನೆ ಒದಗಿಸಿ ಕೊಡಬೇಕು ಎಂದು ಮನವಿ ಮಾಡಿದರು.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಉದ್ಯಾನವನಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ, ಪಟಾಕಿ ಸಿಡಿಸಿ ಪರಿಸರ ಮಲಿನ ಮಾಡುತ್ತಾರೆ. ಪರಿಸರ ಕಾಪಾಡುವ ಉದ್ದೇಶದಿಂದ ಹೊಸ ವರ್ಷಾಚರಣೆ ಸಮಯದಲ್ಲಿ ಪಾರ್ಕ್‌ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಿ, ಬೀಟ್‌ ವ್ಯವಸ್ಥೆಯ ಮೂಲಕ ಕಠಿಣ ಕ್ರಮ ಕೈಗೊಂಡು ಪರಿಸರ ಕಾಪಾಡಬೇಕು ಎಂದು ಪರಿಸರ ಸಂರಕ್ಷಣಾ ವೇದಿಕೆಯ ಗಿರೀಶ್‌ ದೇವರಮನೆ ಮನವಿ ಮಾಡಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪದ್ಮಾ ಬಸವಂತಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ಜಿ. ನಜ್ಮಾ, ಉಪವಿಭಾಗಾಧಿ ಕಾರಿ ಡಾ| ಮಮತಾ ಹೊಸಗೌಡರ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ರಾಘವೇಂದ್ರ ಇತರರು ಇದ್ದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.