ದುರ್ಬಲರ ಆರೋಗ್ಯ ತಪಾಸಣೆ ಮಾಡಿ
Team Udayavani, Jul 22, 2020, 11:26 AM IST
ದಾವಣಗೆರೆ: ಕೋವಿಡ್ ದಿಂದ ಮರಣ ಪ್ರಮಾಣ ತಗ್ಗಿಸಲು ದುರ್ಬಲ ವರ್ಗದವರ ಸರ್ವೇ ಮಾಡಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಆರೋಗ್ಯಅಭಿಯಾನದ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ದಿಂದ ಉಂಟಾಗುವ ಮರಣ ತಗ್ಗಿಸಲು ದುರ್ಬಲ ವರ್ಗದವರ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದರು.
ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಕೇವಲ ಕಂಟೇನ್ಮೆಂಟ್ ಮತ್ತು ಬಫರ್ ವಲಯಗಳು ಮಾತ್ರವಲ್ಲದೆ ಆರೋಗ್ಯ ಇಲಾಖೆಗೆ ಮಾಹಿತಿ ಇರುವ ದುರ್ಬಲ ವರ್ಗ ಎಂದು ಪರಿಗಣಿಸಲಾಗುವ ಶುಗರ್, ಬಿಪಿ, ಟಿಬಿ, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ರೋಗಗಳನ್ನು ಹೊಂದಿರುವವರನ್ನು ಪರೀಕ್ಷೆಗೊಳಪಡಿಸಿ ಸೂಕ್ತ ಚಿಕಿತ್ಸೆ ನೀಡಿ ಸಾವಿನ ಸಂಭವದಿಂದ ಅವರನ್ನು ಪಾರು ಮಾಡಬೇಕು ಎಂದರು.
ಜಿಲ್ಲೆಯಾದ್ಯಂತ ಒಂದು ವಾರದೊಳಗೆ ಅವರ ಮನೆ ಮನೆಗೆ ತೆರಳಿ ಸರ್ವೇ ಮಾಡಿ, ಅವರ ಆರೋಗ್ಯ ಕುರಿತು ಮಾಹಿತಿ ಪಡೆದು ಸೂಕ್ತ ಸಲಹೆ ನೀಡುವ ಮೂಲಕ ನಿಗಾದಲ್ಲಿ ಇಡಬೇಕು. ಅಂತಹವರಿಗೆ ಕೋವಿಡ್ ಸೋಂಕು ತಗುಲಿದರೆ ಉಳಿಸುವುದು ಕಷ್ಟಸಾಧ್ಯವಾಗುವ ಹಿನ್ನೆಲೆಯಲ್ಲಿ ಈ ವಿಷಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದರು.
ಖಾಸಗಿ ಆಸ್ಪತ್ರೆಗಳಿಗೆ ಬರುವಂತಹ ನಾನ್ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಎಬಿ-ಎಆರ್‌ಕೆ ಕಾರ್ಡ್‌ದಾರರು, ಬಿಪಿಎಲ್ ಕಾರ್ಡ್‌ದಾರ ನಾನ್ ಕೋವಿಡ್ ರೋಗಿಗಳನ್ನು ಎಷ್ಟೊತ್ತಿಗೆ ಬಂದರೂ ಅಡ್ಮಿಟ್ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದಲ್ಲಿ ಕೆಪಿಎಂಇ ಅಡಿ ನೋಂದಣಿ ರದ್ದುಗೊಳಿಸಲಾಗುವುದು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಸಲಹೆ ನೀಡಿ ಸಹಕರಿಸಬೇಕು ಎಂದು ಎಚ್ಚರಿಕೆ ನೀಡಿದರು.
ಆರ್‌ಸಿಎಚ್ ಅಧಿಕಾರಿ ಡಾ| ಎಸ್.ಮೀನಾಕ್ಷಿ ಮಾತನಾಡಿ, ಲಾಕ್‌ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್‌ನಿಂದ ಗರ್ಭಿಣಿಯರ ದಾಖಲಾತಿ ಕಡಿಮೆ ಆಗಿದೆ. ಏಪ್ರಿಲ್‌ನಿಂದ ಇಲ್ಲಿಯವರೆಗೆ ಒಟ್ಟು 15 ತಾಯಿಂದಿರ ಮರಣ ಸಂಭವಿಸಿವೆ. 3 ಜನರು ಬೇರೆ ಜಿಲ್ಲೆಗೆ ಸೇರಿದವರಾಗಿದ್ದಾರೆ. 77 ಶಿಶು ಮರಣ ಸಂಭವಿಸಿದ್ದು, 41 ಹೊರ ಜಿಲ್ಲೆಯದಾಗಿದ್ದರೆ 36 ಜಿಲ್ಲೆಯವರು. ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ 1723 ಅಂಗನವಾಡಿಗಳ ಪೈಕಿ ಜೂನ್ ನಲ್ಲಿ ಒಂದು ವಾರ ವಿಶೇಷ ಆಂದೋಲನ ಮಾಡಿ 778 ಅಂಗನವಾಡಿಗಳ ಸುಮಾರು 46 ಸಾವಿರ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ಕೈಗೊಳ್ಳಬೇಕು. ಚುಚ್ಚುಮದ್ದು ಕಾರ್ಯಕ್ರಮದಡಿ ಮಕ್ಕಳ ಚುಚ್ಚುಮದ್ದು ಪ್ರಮಾಣ ಲಾಕ್‌ಡೌನ್ ವೇಳೆ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಎನ್‌ವಿಬಿಡಿಸಿಪಿ ಅಧಿಕಾರಿ ಡಾ| ನಟರಾಜ್ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಜೂನ್ ವರೆಗೆ 2 ಮಲೇರಿಯಾ, 92 ಡೆಂಘೀ, 22 ಚಿಕೂನ್ ಗುನ್ಯಾ ಪ್ರಕರಣ ದೃಢಪಟ್ಟಿವೆ ಎಂದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಗಂಗಾಧರ್ ಮಾತನಾಡಿ, ಜನವರಿಯಿಂದ ಈವರೆಗೆ 940ಕ್ಷಯ ರೋಗ ಪ್ರಕರಣಗಳಿಗೆ ಚಿಕಿತ್ಸೆ, ಎಚ್‌ಐವಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಟಿಬಿ ರೋಗವುಳ್ಳವರನ್ನು ಸರ್ವೇ ಮಾಡಿ ಅವರಲ್ಲಿ ಏನಾದರೂ ಕೋವಿಡ್ ಲಕ್ಷಣಗಳಿವೆಯೇ ಎಂದು ಪರೀಕ್ಷಿಸಿ ಕ್ರಮ ಕೈಗೊಳ್ಳಬೇಕು. ಟಿಬಿ ಮತ್ತು ಎಚ್‌ಐವಿ ಪಾಸಿಟಿವ್ ಇರುವ ರೋಗಿಗಳು ಶೀತ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷé ವಹಿಸದೆ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಡೆಂಘೀ ಹಾಗೂ ಸಾಂಕ್ರಮಿಕ ರೋಗ ತಡೆಗಟ್ಟಲು ಪರಿಣಾಮಕಾರಿ ಕ್ರಮಕ್ಕೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.