ಜಂತು ಹುಳು ಬಾಧೆ ನಿಯಂತ್ರಣ ಅಗತ್ಯ
ರಕ್ತಹೀನತೆ, ನೆನಪಿನ ಶಕ್ತಿ, ಶಾಲೆಯಲ್ಲಿ ಕಲಿಕೆಯ ಸಾಮರ್ಥ್ಯ ಕುಗ್ಗಿಸುತ್ತವೆ
Team Udayavani, Aug 11, 2022, 5:45 PM IST
ದಾವಣಗೆರೆ: ಜಂತುಹುಳು ನಿವಾರಣಾ (ಅಲಬೆಂಡೊಜೋಲ್) ಮಾತ್ರೆಗಳ ಸೇವನೆ ಮಕ್ಕಳಲ್ಲಿ ಆರೋಗ್ಯ, ವಿದ್ಯಾಭ್ಯಾಸ ಫಲಿತಾಂಶದಲ್ಲಿ ಏರುಮುಖದ ಬೆಳವಣಿಗೆಗೆ ನೆರವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್ ಹೇಳಿದರು.
ಬುಧವಾರ ನಗರದ ಎಸ್.ಒ.ಜಿ ಕಾಲೋನಿಯ ಎ ಬ್ಲಾಕ್‌ನ ಸರ್ಕಾರಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಂತುಹುಳುಗಳು ಮಕ್ಕಳ ಆರೋಗ್ಯವನ್ನು ಬಹಳ ಹಾಳು ಮಾಡುತ್ತವೆ.
ಅದರಿಂದಾಗಿ ಮಕ್ಕಳು ಓದಿನಲ್ಲಿ ಏಕಾಗ್ರತೆ ರಕ್ತಹೀನತೆ, ನೆನಪಿನ ಶಕ್ತಿ, ಶಾಲೆಯಲ್ಲಿ ಕಲಿಕೆಯ ಸಾಮರ್ಥ್ಯ ಕುಗ್ಗಿಸುತ್ತವೆ ಎಂದರು. ಜಂತುಹುಳುಗಳು ಮಕ್ಕಳ ದೇಹದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ.
ಜಂತುಹುಳು ನಿವಾರಣಾ (ಅಲಬೆಂಡೊಜೋಲ್) ಮಾತ್ರೆಯನ್ನು ಮಕ್ಕಳು ಸೇವಿಸುವುದರಿಂದ ಆರೋಗ್ಯ, ವಿದ್ಯಾಭ್ಯಾಸ ಫಲಿತಾಂಶದಲ್ಲಿ ಏರುಮುಖದ ಬೆಳವಣಿಗೆಯನ್ನು ನೀಡುತ್ತದೆ. 1ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಸರ್ಕಾರಿ ಮತ್ತು ಅನುದಾನಿತ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜುಗಳಲ್ಲಿ ಉಚಿತವಾಗಿ ನೀಡಲಾಗುವುದು. ಎಲ್ಲದೂ ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಕೆ.ಎಸ್. ಮೀನಾಕ್ಷಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿ ಕಾರಿ ಡಾ| ಪಿ.ಡಿ. ಮುರುಳೀಧರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿ ಕಾರಿ ಡಾ| ನಟರಾಜ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ. ರೇಣುಕಾರಾಧ್ಯ, ತಾಲೂಕು ಆರೋಗ್ಯಾಧಿಕಾರಿ ಡಾ| ಪಿ. ದೇವರಾಜ್, ಮುಖ್ಯೋಪಾಧ್ಯಾಯ ಶಂಕ್ರಪ್ಪ , ನಗರ ಆರೋಗ್ಯ ಕೇಂದ್ರ-3ರ ಆರೋಗ್ಯ ಸಿಬ್ಬಂದಿ, ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾಧಿಕಾರಿಗಳು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.