ದಾವಣಗೆರೆ ಡಿಸಿ ಪಿಂಚಣಿ ಅದಾಲತ್‌ ಕ್ರಾಂತಿ

ವರ್ಷದಲ್ಲಿ 15 ಸಾವಿರ ಮಂದಿಗೆ ಪಿಂಚಣಿ ಪ್ರಯೋಜನ, ಮಾಸಾಶನಕ್ಕೆ ಲಂಚ ನೀಡಿದ್ದ ಡಿಸಿ ತಾಯಿ

Team Udayavani, Nov 2, 2020, 5:05 PM IST

dg-tdy-1

ದಾವಣಗೆರೆ: ಸರ್ಕಾರಿ ಅಧಿಕಾರಿಗಳಿಗೆ ಜನಪರ ಕಾಳಜಿ ಇದ್ದರೆ ಉತ್ತಮ ಸಾಧನೆ ಸಾಧ್ಯ ಎಂಬುದನ್ನು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತೋರಿಸಿಕೊಟ್ಟಿದ್ದಾರೆ.

ಹೌದು, ಜಿಲ್ಲಾಧಿಕಾರಿಗಳ ವಿಶೇಷ ಕಾಳಜಿಯಿಂದ ಒಂದೇ ವರ್ಷದಲ್ಲಿ ಜಿಲ್ಲೆಯಾದ್ಯಂತ 15 ಸಾವಿರಕ್ಕೂ ಅಧಿಕ ಜನರು ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ಮಾಸಾಶನ ಸೇರಿದಂತೆ ಇನ್ನಿತರ ಸಾಮಾಜಿಕ ಭದ್ರತಾ ಯೋಜನೆ ಲಾಭ ಪಡೆದುಕೊಂಡಿದ್ದಾರೆ. ವೃದ್ಧರು, ವಿಧವೆಯರು, ಅಂಗವಿಕಲರಿಗೆ ಮಾಸಾಶನ ಸೌಲಭ್ಯಕ್ಕೆ ತಾವೇ ಸ್ವತಃ ತಾಲೂಕುಗಳಲ್ಲಿ ಪಿಂಚಣಿಅದಾಲತ್‌ ನಡೆಸಿದ್ದಾರೆ. ಅಲ್ಲದೆ ಅಧಿಕಾರಿಗಳೇ ಮನೆಮನೆಗೆ ಹೋಗಿ ಫಲಾನುಭವಿಗಳನ್ನು ಗುರುತಿಸಿ ಸಾಮಾಜಿಕ ಭದ್ರತೆ ಒದಗಿಸುತ್ತಿದ್ದಾರೆ.

ಪಿಂಚಣಿ ಅದಾಲತ್‌: ಮಹಾಂತೇಶ ಬೀಳಗಿ ಅವರು ದಾವಣಗೆರೆ ಜಿಲ್ಲಾಧಿಕಾರಿಯಾಗಿ ಬಂದ ಆರಂಭದಲ್ಲೇ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 27 ಬಾರಿ “ಪಿಂಚಣಿ ಅದಾಲತ್‌’ ಕಾರ್ಯಕ್ರಮ ಹಮ್ಮಿಕೊಂಡರು. ಪ್ರತಿ ತಾಲೂಕಿನಲ್ಲಿ ಹಮ್ಮಿಕೊಂಡ ಅದಾಲತ್‌ನಲ್ಲಿ ಸ್ವತಃ ಭಾಗವಹಿಸಿದರು. ತಹಶೀಲ್ದಾರ್‌ ಉಪಸ್ಥಿತಿಯಲ್ಲಿ ಸ್ಥಳದಲ್ಲಿಯೇ ಅರ್ಹರಿಗೆ ಮಾಸಾಶನ ದೊರಕಿಸಲು ಕ್ರಮ ಕೈಗೊಂಡರು.

“ಪಿಂಚಣಿ ಅದಾಲತ್‌’ ಎಂಬ ವಿಶೇಷ ಕಾರ್ಯಕ್ರಮದಿಂದಾಗಿ ಜಿಲ್ಲೆಯ 2269 ಜನರು ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲ ಮಾಸಾಶನ ಸೇರಿದಂತೆ ಇನ್ನಿತರ ಮಾಸಾಶನಗಳನ್ನು ಪಡೆದುಕೊಳ್ಳಲು ಸಾಧ್ಯವಾಯಿತು. ಅದಾಲತ್‌ ಮೂಲಕ ಹೊನ್ನಾಳಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 1796 ಜನರಿಗೆ ವಿವಿಧ ಮಾಸಾಶನದ ವ್ಯವಸ್ಥೆ ಮಾಡಲಾಯಿತು. ಉಳಿದಂತೆ ದಾವಣಗೆರೆ ತಾಲೂಕಿನಲ್ಲಿ 167, ಹರಿಹರ ತಾಲೂಕಿನಲ್ಲಿ 10, ಚನ್ನಗಿರಿ ತಾಲೂಕಿನಲ್ಲಿ 44, ಜಗಳೂರು ತಾಲೂಕಿನಲ್ಲಿ ಎಂಟು ಜನರಿಗೆ ಮಾಸಾಶನ ವ್ಯವಸ್ಥೆ ಮಾಡಲಾಗಿದೆ. ಮನೆ ಮನೆ ಭೇಟಿ: ಜಿಲ್ಲಾಧಿಕಾರಿಯವರ ಸೂಚನೆ ಮೇರೆಗೆ “ಪಿಂಚಣಿ ಅದಾಲತ್‌’ ಜತೆಗೆ ಅಧಿಕಾರಿಗಳೇ ಮನೆ ಬಾಗಿಲಿಗೆ ಹೋಗಿ ಸಾಮಾಜಿಕ ಭದ್ರತಾ ಯೋಜನೆ ಲಾಭ ದೊರಕಿಸುವ ಕಾರ್ಯಕ್ರಮ ಸಹ ಜಿಲ್ಲೆಯಲ್ಲಿಮಾಡಲಾಯಿತು. ಅಧಿಕಾರಿ, ಸಿಬ್ಬಂದಿಗಳೇ ಮನೆ ಬಾಗಿಲಿಗೆ ಹೋಗಿ 12,820 ಜನರಿಂದ ಅರ್ಜಿಗಳನ್ನು

ಪಡೆದರು. ಇದರಲ್ಲಿ ಅರ್ಹರಾದ 10,742 ಜನರಿಗೆ ಮಾಸಾಶನ ಬರುವಂತೆ ಮಾಡಲಾಯಿತು. ದಾವಣಗೆರೆ ತಾಲೂಕಿನ 2531, ಹರಿಹರ ತಾಲೂಕಿನ 816, ಚನ್ನಗಿರಿ ತಾಲೂಕಿನ 1946, ಹೊನ್ನಾಳಿ ತಾಲೂಕಿನ 4173, ನ್ಯಾಮತಿ ತಾಲೂಕಿನ 694 ಹಾಗೂ ಜಗಳೂರು ತಾಲೂಕಿನ 582 ಜನರು ಮಾಸಾಶನದ ಪ್ರಯೋಜನ ಪಡೆದುಕೊಂಡಿದ್ದಾರೆ.

ಅಧಿಕಾರಿಗಳ ಸಹಕಾರ: ವಿವಿಧ ಮಾಸಾಶನ ವಿಚಾರದಲ್ಲಿ ಜಿಲ್ಲಾಧಿಕಾರಿ ವಿಶೇಷ ಕಾಳಜಿ ವಹಿಸುವುದನ್ನು ಅರಿತ ಅಧಿಕಾರಿ ವರ್ಗ ಸಹ ಈ ವಿಚಾರದಲ್ಲಿ ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ನಿರಂತರವಾಗಿ ಬರುವ ಮಾಸಾಶನ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಕಾರ್ಯವೂ ಮುಂದುವರಿದೆ. ಸರ್ಕಾರ ಪ್ರಸ್ತತ ಆನ್‌ಲೈನ್‌ ಮೂಲಕ ಹಣ ಸಂದಾಯ ಮಾಡುವ ವ್ಯವಸ್ಥೆ ಜಾರಿಗೊಳಿಸಿದ್ದು ವಿವಿಧ ದಾಖಲಾತಿ ಕಾರಣದಿಂದಾಗಿ ಅಮಾನತು ಆಗಿದ್ದ ಸಾವಿರಾರು ಪ್ರಕರಣಗಳಿಗೆ ಸಂಬಂಧಿಸಿ ಅಧಿಕಾರಿಗಳೇ ದಾಖಲೆ ತರಿಸಿಕೊಂಡು ಮಾಸಾಶನ ಕೊಡಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಹೊಸದಾಗಿ ಸಲ್ಲಿಕೆಯಾದ 1706 ಅರ್ಜಿಗಳ ವಿಲೇವಾರಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನರಿಗೆ ವಿವಿಧ ಮಾಸಾಶನ ಸೌಲಭ್ಯ ದೊರಕಿಸುವಲ್ಲಿ ಹಾಗೂ ಮಾಸಾಶನ ಅರ್ಜಿಗಳ ತ್ವರಿತ ವಿಲೇವಾರಿಯಲ್ಲಿ ಜಿಲ್ಲಾಧಿಕಾರಿ ವಹಿಸುತ್ತಿರುವ ಕಾಳಜಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಏಕಿಷ್ಟು ಕಾಳಜಿ? : ಜಿಲ್ಲಾಧಿಕಾರಿಗಳು ವಿವಿಧ ಮಾಸಾಶನ ಕೊಡಿಸುವಲ್ಲಿ ಏಕಿಷ್ಟು ಕಾಳಜಿ ತೋರುತ್ತಿದ್ದಾರೆ ಎಂಬುದಕ್ಕೆ ಅವರೇ ಹಲವು ಸಭೆ-ಸಮಾರಂಭಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. “ನಾನು ಐದು ವರ್ಷದವನಿದ್ದಾಗ ನನ್ನ ತಂದೆ ಅಕಾಲಿಕ ಮರಣ ಹೊಂದಿದರು. ಆಗ ನಮಗೆ ಕಿತ್ತು ತಿನ್ನುವ ಬಡತನ. ಆ ಸಮಯದಲ್ಲಿ ನನ್ನ ತಾಯಿ ವಿಧವಾ ವೇತನಕ್ಕೆ ಅರ್ಜಿ ಹಾಕಿದಾಗ ಅಧಿಕಾರಿಗಳು ತಾಯಿಗೆ ಅನೇಕ ಸಲ ಕಚೇರಿಗೆ ಅಲೆದಾಡಿಸಿದರು. 25 ರೂ. ಮಾಸಾಶನಕ್ಕೆ 100 ರೂ. ಲಂಚ ನೀಡಿ ನನ್ನ ತಾಯಿ ವಿಧವಾ ವೇತನದ ಆದೇಶಪತ್ರ ಪಡೆಯಬೇಕಾಯಿತು. ಇದನ್ನೆಲ್ಲ ಗಮನಿಸಿದ ನಾನು ಶ್ರದ್ಧೆಯಿಂದ ಓದಿ ಜಿಲ್ಲಾಧಿಕಾರಿಯಾದೆ. ನನ್ನ ತಾಯಿ ಪಟ್ಟ ಕಷ್ಟ ಬೇರೆ ಯಾವ ತಾಯಂದಿರೂ ಪಡಬಾರದೆಂದು ಮನೆ ಬಾಗಿಲಿಗೆ ಹೋಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮಾಸಾಶನ ಕೊಡಿಸುವ ಕೆಲಸ ಮಾಡುತ್ತಿದ್ದೇನೆ’.

ವೃದ್ಧಾಪ್ಯ ವೇತನ ಪಡೆಯಲು ಎಲ್ಲಿ ಅರ್ಜಿಕಬೇಕು ಗೊತ್ತಿರಲಿಲ್ಲ. ಪಿಂಚಣಿಗಾಗಿ ಕಚೇರಿಗೆ ಅಲೆದಾಡಲು ಆರೋಗ್ಯವೂ ಸರಿಯಿರಲಿಲ್ಲ. ಆದ್ದರಿಂದ ಪಿಂಚಣಿ ಪಡೆಯುವ ವಿಚಾರವನ್ನೇ ಕೈಬಿಟ್ಟಿದ್ದೆ. ಪಂಚಾಯಿತಿ ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ದಾಖಲೆಗಳನ್ನು ಪಡೆದು ಪಿಂಚಣಿ ಬರುವಂತೆ ಮಾಡಿ ಸಹಾಯ ಮಾಡಿದ್ದಾರೆ. -ಬಸಪ್ಪ ಎಚ್‌.ಎನ್‌., ಸುರಹೊನ್ನೆ

ಕೋವಿಡ್ ಸಂದರ್ಭದಲ್ಲಿಯೂ ಕೆಲವು ಕಡೆ ಅಧಿಕಾರಿಗಳು ಮನೆ ಮನೆಗೆ ಹೋಗಿ ಫಲಾನುಭವಿಗಳನ್ನು ಹುಡುಕಿ ಮಾಸಾಶನ ಕೊಡಿಸುವ ವ್ಯವಸ್ಥೆ ಮಾಡಿದ್ದಾರೆ. ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದಂತೆ ಮತ್ತೆ ಪಿಂಚಣಿ ಅದಾಲತ್‌ ಮುಂದುವರಿಸುತ್ತೇವೆ. -ಮಹಾಂತೇಶ್‌ ಬೀಳಗಿ, ದಾವಣಗೆರೆ ಡಿಸಿ

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.